ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಗುತ್ತಿಗೆದಾರರಿಗೆ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ- ಡಿ.ಕೆ. ಶಿವಕುಮಾರ್

DK Shivakumar: ಬಿಲ್ ಪಾವತಿ ವಿಚಾರವಾಗಿ ಗುತ್ತಿಗೆದಾರರಿಗೆ ಯಾರಾದರೂ ಕಮಿಷನ್ ಕೇಳಿದ್ದರೆ ಅವರು ಲೋಕಾಯುಕ್ತಕ್ಕೆ ದೂರು ನೀಡಲಿ. ನಮ್ಮ ಸಚಿವರಾದ ಸತೀಶ್ ಜಾರಕಿಹೊಳಿ, ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಗುತ್ತಿಗೆದಾರರಿಗೆ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ-ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್

Profile Siddalinga Swamy Apr 11, 2025 3:07 PM

ಬೆಂಗಳೂರು: ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಯಾರಾದರೂ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ನಮ್ಮ ಸಚಿವರಾದ ಸತೀಶ್ ಜಾರಕಿಹೊಳಿ, ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳೊಂದಿಗೆ ಶುಕ್ರವಾರ ಅವರು ಮಾತನಾಡಿದರು. ಬಿಲ್ ಪಾವತಿ ಕಮಿಷನ್ ಕೇಳಲಾಗುತ್ತಿದೆ ಎಂಬ ಗುತ್ತಿಗೆದಾರರ ಆರೋಪದ ಬಗ್ಗೆ ಕೇಳಿದಾಗ, ʼಬಿಲ್ ಪಾವತಿ ವಿಚಾರವಾಗಿ ಯಾರಾದರೂ ಕಮಿಷನ್ ಕೇಳಿದ್ದರೆ ಅವರು ಲೋಕಾಯುಕ್ತಕ್ಕೆ ದೂರು ನೀಡಲಿ. ಬಿಲ್ ಪಾವತಿ ವಿಚಾರವಾಗಿ ಗುತ್ತಿಗೆದಾರರು ಯಾಕೆ ಸಚಿವರನ್ನು ಕೇಳಬೇಕು. ಅವರಿಗೆ ಇಲಾಖೆಯ ಬಜೆಟ್ ಅರಿವಿಲ್ಲವೇ? ಅನುದಾನವೇ ಇಲ್ಲದಿರುವಾಗ ಅವರು ಗುತ್ತಿಗೆ ಹೇಗೆ ತೆಗೆದುಕೊಂಡರು?ʼ ಎಂದರು.

ʼಬಿಜೆಪಿ ಅವಧಿಯಲ್ಲಿ ನನ್ನ ಇಲಾಖೆಯೊಂದರಲ್ಲೇ 1 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಗುತ್ತಿಗೆಯನ್ನು ನೀಡಲಾಗಿದೆ. ಈ ಗುತ್ತಿಗೆ ಬಿಲ್ ಪಾವತಿ ಮಾಡಿಸುವಂತೆ ಶಾಸಕರ ಮೂಲಕ ಮನವಿ ಮಾಡಲಾಗುತ್ತಿದೆʼ ಎಂದು ತಿಳಿಸಿದರು.

ʼಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಒಂದು ವರ್ಷ ಮುಂಚಿತವಾಗಿಯೇ ನಾವು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದೆವು. ಅನುದಾನ ಇಲ್ಲದೆ ಯಾವುದೇ ಕಾಮಗಾರಿ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದ್ದೆವು. ಆದರೂ ನಮ್ಮ ಮಾತು ಕೇಳದೆ ಈಗ ರಾಜಕೀಯ ನಾಯಕರ ಮೂಲಕ ಬಿಲ್ ಪಾವತಿಗೆ ಮನವಿ ಪತ್ರ ನೀಡುತ್ತಿದ್ದಾರೆʼ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Manipal Hospitals: ಮಣಿಪಾಲ್‌ ಹಾಸ್ಪಿಟಲ್ಸ್‌ನಲ್ಲಿ AI ಚಾಲಿತ ಡಿಜಿಟಲ್ ಆರೋಗ್ಯ ಸೇವೆ

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಚರ್ಚೆ ಬಗ್ಗೆ ಕೇಳಿದಾಗ, ʼಜಾತಿಗಣತಿ ವರದಿಯನ್ನು ಮುಖ್ಯಮಂತ್ರಿಗಳಾಗಲಿ, ನಾನಾಗಲಿ ಇನ್ನು ನೋಡಿಲ್ಲ. ಇದನ್ನು ನೋಡಿದ ನಂತರ ಚರ್ಚೆ ಮಾಡಿ ಯಾವ ತೀರ್ಮಾನ ಕೈಗೊಳ್ಳಬೇಕು ಎಂದು ನಿರ್ಧರಿಸುತ್ತೇವೆ. ಈ ವಿಚಾರದ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಲು ಆಗುವುದಿಲ್ಲʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.