ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

Devaraj Arasu statue Unveiling: ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ತಿಳಿಸಿದ್ದಾರೆ.

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ

-

Profile Siddalinga Swamy Nov 3, 2025 3:02 PM

ಮೈಸೂರು, ನ.3: ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)‌ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು (Devaraj Arasu) ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ಹೇಳಿದರು.

ಅರಸು ಅವರು ತಳ ಸಮುದಾಯಗಳಿಗೆ ಅವಕಾಶಗಳನ್ನು ಸೃಷ್ಟಿಸಿದರು. ಆ ಅವಕಾಶಗಳಿಂದ ಬಹಳ ಮಂದಿ ಸಮಾಜದ ಮುಖ್ಯವಾಹಿನಿಗೆ ಬಂದರು. ಸುದೀರ್ಘ ಅವಧಿಯ ಕಾಲ ಮುಖ್ಯಮಂತ್ರಿಗಳಾಗಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸಿದ್ದರು ಎಂದು ಅವರು ತಿಳಿಸಿದರು.

CM Siddaramaiah 1

ಬಹುಸಂಖ್ಯಾತ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದ್ದರಿಂದ ಅಸಮಾನತೆ ಸೃಷ್ಟಿಯಾಗಿದೆ. ನಮ್ಮ ಸರ್ಕಾರ ಅಸಮಾನತೆ ನಿವಾರಿಸಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಜನಪರ, ಸಾಮಾಜಿಕ ನ್ಯಾಯದ ಪರ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶಿಕ್ಷಣ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಎಲ್ಲರಲ್ಲೂ ಪ್ರತಿಭೆ ಇದೆ. ಅಂಬೇಡ್ಕರ್ ಮತ್ತು ವಾಲ್ಮೀಕಿ, ವ್ಯಾಸರು ಇದಕ್ಕೆ ಉದಾಹರಣೆ ಎಂದು ತಿಳಿಸಿದರು. ನಮ್ಮ ರಾಜ್ಯಕ್ಕೆ "ಕರ್ನಾಟಕ" ಎಂದು ನಾಮಕರಣ ಆಗಿದ್ದು ಅರಸು ಅವರ ಕಾಲದಲ್ಲಿ. ಇದರ ಸುವರ್ಣ ಸಂಭ್ರಮ ಮಾಡಿದ್ದು ನಮ್ಮ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

ಈ ಸುದ್ದಿಯನ್ನೂ ಓದಿ | Kasa Suriyuva Habba: ಎಲ್ಲೆಂದರಲ್ಲಿ ಕಸ ಎಸೆಯುವವರ ವಿಡಿಯೊ ಕಳುಹಿಸಿ 250 ರೂ. ಗಳಿಸಿ; BSWMLನಿಂದ ಹೊಸ ಯೋಜನೆ

CM Siddaramaiah: ಹೈಕಮಾಂಡ್ ನಿರ್ಧಾರವೇ ಅಂತಿಮ; ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು, ನ. 3: ''ಜನರ ಅಭಿಪ್ರಾಯವೇನೇ ಇದ್ದರೂ, ಹೈಕಮಾಂಡ್ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಈ ಬಗ್ಗೆ ಏನೂ ಹೇಳಿಲ್ಲ. ಬಿಹಾರ ಚುನಾವಣೆ (Bihar Assembly Election 2025)ಯ ನಂತರ ರಾಜ್ಯದಲ್ಲಿ ಸಂಪುಟ ಪುನರ್‌ರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದುʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಮುಖ್ಯಮಂತ್ರಿ ಬದಲಾವಣೆ ಕುರಿತ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ನವೆಂಬರ್‌ 3ರಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿಎಂ ಬದಲಾವಣೆ ಬಗ್ಗೆ ಹರಡಿರುವ ವದಂತಿಯನ್ನು ತಳ್ಳಿ ಹಾಕಿದರು.

ʼʼಬಿಹಾರದಲ್ಲಿ ಅಧಿಕಾರ ವಿರೋಧಿ ಅಲೆ ಮತ್ತು ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆʼʼ ಎಂದರು.

ಬಿಹಾರ ಚುನಾವಣೆ ಪ್ರಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ʼʼಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತ ನೀಡಲು ಕೋರಲಾಗುವುದುʼʼ ಎಂದು ಹೇಳಿದರು.

ʼʼಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟವೂ ರಾಜ್ಯದ ಗ್ಯಾರಂಟಿ ಯೋಜನೆಗಳ ಭರವಸೆಗಳ ಮಾದರಿಯನ್ನು ಅನುಸರಿಸಿದೆ. ಕರ್ನಾಟಕದಲ್ಲಿ 1.24 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ಗೃಹಲಕ್ಷ್ಮಿ ಗ್ಯಾರಂಟಿ ನೀಡಲಾಗುತ್ತಿದೆ. ಇದುವರೆಗೆ ರಾಜ್ಯದಲ್ಲಿ 1 ಲಕ್ಷ ಕೋಟಿ ರೂ.ಗೂ ಹೆಚ್ಚು ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಹಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದ್ದು, ಅವರಿಗೆ ಯಾವುದೇ ಸಿದ್ಧಾಂತವಿಲ್ಲ. ಬಿಹಾರದಲ್ಲಿ ಬಡತನ ನಿರ್ಮೂಲನೆಯಾಗಿಲ್ಲ. ಆದ್ದರಿಂದ ಬಡವರು, ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಮತಚಲಾಯಿಸುವ ಭರವಸೆಯಿದೆʼʼ ಎಂದು ತಿಳಿಸಿದರು.

ರಾಜ್ಯೋತ್ಸವ ಪ್ರಶಸ್ತಿ

ʼʼಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿರುವ ಹಲವು ಸಾಧಕರನ್ನು ಗುರುತಿಸಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಈ ಬಾರಿ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆʼʼ ಎಂದರು.

ಈ ಸುದ್ದಿಯನ್ನೂ ಓದಿ | DK Shivakumar: ಮತದಾನಕ್ಕೆ ತೆರಳುವ ಬಿಹಾರಿಗಳಿಗೆ ಮೂರು ದಿನ ರಜೆ: ಡಿಕೆಶಿ ಘೋಷಣೆ

ಹುಲಿ ದಾಳಿ ಪ್ರಕರಣದ ಪರಿಶೀಲನೆಗೆ ಶೀಘ್ರದಲ್ಲಿ ಸಭೆ

ಮೈಸೂರಿನಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ʼʼಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ತಲೆ ಎತ್ತುತ್ತಿದ್ದು, ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ. ನೀರು ಮತ್ತು ಮೇವಿನ ಕೊರತೆ ಹಾಗೂ ಹುಲಿ ಚಿರತೆಗಳ ಹಾವಳಿಯಿಂದ ಕಾಡು ಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಸಭೆ ಈಗಾಗಲೇ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿಯೂ ಸಭೆ ನಡೆಯಲಿದೆ. ಅಲ್ಲದೇ, ಅಕ್ರಮವಾಗಿ ರೆಸಾರ್ಟ್ ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆʼʼ ಎಂದರು.