ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Pralhad Joshi: ಹುಬ್ಬಳ್ಳಿ-ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಬಗ್ಗೆ ವಿಸ್ತೃತ ಚರ್ಚೆ ಅಗತ್ಯ: ಜೋಶಿ

Pralhad Joshi: ಹುಬ್ಬಳ್ಳಿ-ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಬಗ್ಗೆ ಗಹನ ಚರ್ಚೆ, ಆಲೋಚನೆ ಅಗತ್ಯ. ಈ ಸಂಬಂಧ ಸಾಧಕ - ಬಾಧಕಗಳ ಚಿಂತನೆ ಅತ್ಯಗತ್ಯವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (ಸಂಗ್ರಹ ಚಿತ್ರ).

ಹುಬ್ಬಳ್ಳಿ, ಮಾ.4: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕತೆ ಬಗ್ಗೆ ವಿಸ್ತೃತ ಚರ್ಚೆ ಅಗತ್ಯವಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅಭಿಪ್ರಾಯಪಟ್ಟರು. ಹುಬ್ಬಳ್ಳಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಮಹಾನಗರಗಳ ಅಭಿವೃದ್ಧಿ ಆಗಬೇಕು. ಇದಕ್ಕಾಗಿ ಸರ್ಕಾರ ಬೃಹತ್ ಯೋಜನೆಗಳನ್ನು ಹಾಕಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.

ಪ್ರತ್ಯೇಕ ಮಹಾನಗರ ಪಾಲಿಕೆಗಳ ರಚನೆಯಿಂದ ಆದಾಯ ವೃದ್ಧಿ, ಹೆಚ್ಚಿನ ಅಭಿವೃದ್ಧಿಗೆ ಅನುಕೂಲ ಆಗುತ್ತದೆ ಎಂಬ ನಿರೀಕ್ಷೆ ಅಷ್ಟು ಸಮಂಜಸವಲ್ಲ. ಯಾವುದಕ್ಕೂ ಈ ಬಗ್ಗೆ ಎಲ್ಲಾ ಆಯಾಮಗಳಲ್ಲೂ ಚರ್ಚೆ ಆಗಬೇಕು ಎಂದರು.

ದೆಹಲಿಯಲ್ಲಿ ಮೂರು ಮಹಾನಗರ ಪಾಲಿಕೆ ಸೃಷ್ಟಿಸಲಾಯಿತು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜಿಸಲಾಯಿತು. ಆದರೆ, ಅದೆಷ್ಟು ಫಲಪ್ರದವಾಗಿದೆ ಎಂಬುದನ್ನು ನೋಡಬೇಕಾಗುತ್ತದೆ ಎಂದ ಸಚಿವರು, ಆದರೆ, ಸರ್ಕಾರ ಮಹಾನಗರಗಳ ಅಭಿವೃದ್ಧಿಗೆ ದೊಡ್ಡ ಮಟ್ಟದಲ್ಲಿ ಸ್ಪಂದಿಸಬೇಕಾಗುತ್ತದೆ ಎಂದು ಹೇಳಿದರು. ‌

2030ಕ್ಕೆ 5 ಟ್ರಿಲಿಯನ್ ಮೀರಲಿದೆ ಭಾರತದ ಆರ್ಥಿಕತೆ: ಪ್ರಹ್ಲಾದ್‌ ಜೋಶಿ

'ಗ್ರೇಟರ್ ಬೆಂಗಳೂರು' ಎಂದು ಕರೆದರು. ಆದರೆ ಆಗಿದ್ದೇನು? ಎಂದು ಪ್ರಶ್ನಿಸಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಹುಬ್ಬಳ್ಳಿ-ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಬಗ್ಗೆ ಗಹನ ಚರ್ಚೆ, ಆಲೋಚನೆ ಅಗತ್ಯ. ಈ ಸಂಬಂಧ ಸಾಧಕ - ಬಾಧಕಗಳ ಚಿಂತನೆ ಅತ್ಯಗತ್ಯವಾಗಿದೆ ಎಂದು ಅವರು ತಿಳಿಸಿದರು.