ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಿ; ಕೇಂದ್ರ ರೈಲ್ವೆ ಸಚಿವರಿಗೆ ಬೊಮ್ಮಾಯಿ ಮನವಿ
Basavaraj Bommai: ಗದಗ- ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಸಲ್ಲಿಕೆ. -
ನವದೆಹಲಿ, ಫೆ.11: ಗದಗ- ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಯೋಜನೆಗೆ ಕೇಂದ್ರ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಿದ್ದು, ಡಿಪಿಆರ್‌ಗೆ ಅನುಮತಿ ನೀಡಿ ಯೋಜನೆ ಕಾರ್ಯಾರಂಭ ಮಾಡಬೇಕು. ನಾನು ರಾಜ್ಯ ಸರ್ಕಾರಕ್ಕೆ ಭೂಸ್ವಾಧೀನ ಕೈಗೊಳ್ಳಲು ಆಗ್ರಹಿಸಿದ್ದೇನೆ. ಡಿಪಿಆರ್‌ಗೆ ಒಪ್ಪಿಗೆ ನೀಡುವುದರಿಂದ ತ್ವರಿತಗತಿಯಲ್ಲಿ 2026 ರಲ್ಲಿ ಯೋಜನೆ ಕೈಗೆತ್ತಿಕೊಳ್ಳಲು ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದಾರೆ.
ಅಲ್ಲದೇ ಶಿವಮೊಗ್ಗ ರಾಣೆಬೆನ್ನೂರು ರೈಲು ಮಾರ್ಗ ಆದಷ್ಟು ಬೇಗ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಬಹಳ ವರ್ಷಗಳಿಂದ ಈ ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಇದರ ಜತೆಗೆ ಗದಗ- ಕುಷ್ಟಗಿ ಹೊಸ ರೈಲು ಮಾರ್ಗಕ್ಕಾಗಿ ಬೇಡಿಕೆ ಇದೆ. ನರೇಗಲ್, ಗಜೇಂದ್ರಗಢ ಮೂಲಕ ಹಾದು ಹೋಗುವ ಈ ಮಾರ್ಗಕ್ಕೆ ತಕ್ಷಣ ಸಮೀಕ್ಷೆ ನಡೆಸಲು ಸೂಚಿಸಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ಕನ್ನಡ ಶಾಲೆ ಮುಚ್ಚುತ್ತಿರುವುದು ಖಂಡನೀಯ: ಬಸವರಾಜ ಬೊಮ್ಮಾಯಿ
ನವದೆಹಲಿ: ಕರ್ನಾಟಕ ಸರ್ಕಾರ (Karnataka government) ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ. ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಅವರು ಸಂಬಳ ಕೊಡಲು ಆಗುತ್ತಿಲ್ಲ. ಹೀಗಾಗಿ ಕನ್ನಡ ಶಾಲೆಗಳನ್ನು ಮುಚ್ಚುತ್ತಿದ್ದಾರೆ. ಇದು ಕನ್ನಡ ವಿರೋಧಿ ಮತ್ತು ಕನ್ನಡ ಶಾಲೆಗಳ ವಿರೋಧಿಯಾಗಿದೆ. ಇದನ್ನು ಖಂಡಿಸುತ್ತೇನೆ ಹಾಗೂ ಕನ್ನಡ ಶಾಲೆಗಳನ್ನು ಪುನಾರಾರಂಭಿಸುವಂತೆ ಆಗ್ರಹಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು. ನವದೆಹಲಿಯಲ್ಲಿ ಸುದ್ದಿ ಸಂಸ್ಥೆಯೊಂದಿಗೆ ಅವರು ಮಾತನಾಡಿದರು.
ಹತಾಶರಾಗಿ ಗದ್ದಲ
ಲೋಕಸಭೆ ಸ್ಪೀಕರ್ ವಿರುದ್ದ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮೇಲಿಂದ ಮೇಲೆ ಚುನಾವಣೆಯಲ್ಲಿ ಸೋಲುತ್ತಿರುವುದರಿಂದ ಹತಾಶರಾಗಿದ್ದಾರೆ. ಅವರ ನಾಯಕ ಹತಾಶರಾಗಿದ್ದಾರೆ. ಹೀಗಾಗಿ ಸಂಸತ್ತಿನಲ್ಲಿ ಅವರು ನಗರ ನಕ್ಷಲರಂತೆ ವರ್ತಿಸುತ್ತಿದ್ದಾರೆ. ಬೆಂಚ್‌ಗಳ ಮೇಲೆ ನಿಲ್ಲುವುದು, ಸ್ಪೀಕರ್ ಮೇಲೆ ದಾಳಿ ಮಾಡುವುದು ಇದು ಮಿತಿ ಮೀರಿದೆ. ಕಾಂಗ್ರೆಸ್ ಮಹಿಳಾ ಸಂಸದರು ಪ್ರಧಾನಮಂತ್ರಿಯ ಆಸನದವರೆಗೆ ಬಂದು ಅವರು ಬರುವುದನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ರೀತಿ ಸಂಸತ್ತಿನ ಇತಿಹಾಸದಲ್ಲಿ ಯಾವತ್ತೂ ಆಗಿರಲಿಲ್ಲ ಎಂದು ಹೇಳಿದರು.
ರಾಹುಲ್ ಗಾಂಧಿ ವೃಥಾ ಆರೋಪಿಸದೆ ಸದನಕ್ಕೆ ಅಧಿಕೃತ ದಾಖಲೆ ಸಲ್ಲಿಸಲಿ: ಪ್ರಲ್ಹಾದ್ ಜೋಶಿ
ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಕಲಾಪವನ್ನು ಸುಗಮವಾಗಿ ನಡೆಸಲು ಬಿಡುತ್ತಾರೆ ಎನ್ನುವ ನಂಬಿಕೆ ಇದೆಯಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರು ಏನು ಮಾಡುತ್ತಾರೆ ಎನ್ನುವುದು ಗೊತ್ತಿಲ್ಲ. ಆದರೆ, ಅವರು ಜನರ ಸಮಸ್ಯೆಯ ಬಗ್ಗೆ ಮಾತನಾಡುವುದಿಲ್ಲ. ಅವರು ತೊಂದರೆ ಕೊಡುವುದನ್ನೇ ಅಜಂಡಾ ಮಾಡಿಕೊಂಡಿದ್ದಾರೆ. ಬಹುತೇಕ ಅದೇ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.