Basavaraj Bommai: ಬ್ರೇಕ್‌ಫಾಸ್ಟ್ ಮಾಡುತ್ತಾ ಸಿಎಂ, ಡಿಸಿಎಂ ಕಾಲಹರಣ: ಬೊಮ್ಮಾಯಿ ಕಿಡಿ
ಸಿಎಂ, ಡಿಸಿಎಂ ಒಬ್ಬರಿಗೊಬ್ಬರು ಬ್ರೇಕ್ ಫಾಸ್ಟ್ ಮಾಡುತ್ತ ಕಾಲಹರಣ ಮಾಡುತ್ತಿದ್ದರೆ ರಾಜ್ಯದ ಜನರ ಶ್ರೇಯೋಭಿವೃದ್ದಿ ಯಾರು ಮಾಡುತ್ತಾರೆ ಎನ್ನುವುದು ನಮ್ಮ ಕಾಳಜಿ. ಒಬ್ಬರು ಕುರ್ಚಿಯನ್ನು ಕಸಿಯಲು ಪ್ರಯತ್ನಿಸುತ್ತಿದ್ದಾರೆ. ಇನ್ನೊಬ್ಬರು ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕದ ನಾಟಕ ನಿಲ್ಲಬೇಕು ಎನ್ನುವುದು ರಾಜ್ಯದ ಜನರ ಇಚ್ಚೆಯಾಗಿದೆ ಎಂದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ) -
ನವದೆಹಲಿ, ಡಿ.2: ಸಿಎಂ, ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ವ್ಯಂಗ್ಯವಾಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರ ಜತೆಗೆ ಅವರು ಮಾತನಾಡಿದರು. ಕೆಲವೇ ದಿನದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನು ಎನ್ನುವುದು ಹೊರಬೀಳಲಿದೆ. ಇವರಿಬ್ಬರೂ ಒಬ್ಬರಿಗೊಬ್ಬರು ಬ್ರೇಕ್‌ಫಾಸ್ಟ್ ಮಾಡುತ್ತ (CM-DCM Breakfast Meeting) ಕಾಲಹರಣ ಮಾಡುತ್ತಿದ್ದರೆ, ರಾಜ್ಯದ ಜನರ ಶ್ರೇಯೋಭಿವೃದ್ದಿ ಯಾರು ಮಾಡುತ್ತಾರೆ ಎನ್ನುವುದು ನಮ್ಮ ಕಾಳಜಿ ಎಂದು ಟೀಕಿಸಿದರು.
ಒಬ್ಬರು ಕುರ್ಚಿಯನ್ನು ಕಸಿಯಲು ಪ್ರಯತ್ನಿಸುತ್ತಿದ್ದಾರೆ. ಇನ್ನೊಬ್ಬರು ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕದ ನಾಟಕ ನಿಲ್ಲಬೇಕು ಎನ್ನುವುದು ರಾಜ್ಯದ ಜನರ ಇಚ್ಛೆಯಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಯಿತು. ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಗೊಂದಲ ನಿವಾರಿಸುವಲ್ಲಿ ವಿಫಲವಾಗಿದೆಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲಿದೆ ಕಾಂಗ್ರೆಸ್ ಹೈಕಮಾಂಡ್, ಯಾರು ಹೈಕಮಾಂಡ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ತಮ್ಮ ಮೇಲೆ ಹೈಕಮಾಂಡ್ ಇದೆ ಎಂದು ಹೇಳಿದ ಮೇಲೆ ಹೈಕಮಾಂಡ್‌ಗೆ ಏನು ಅರ್ಥ ಇದೆ. ಇದು ಒಂದು ಕುಟುಂಬದ ವಿಷಯ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಡಿಕೆಶಿ ನಿವಾಸದಲ್ಲಿಇಡ್ಲಿ-ನಾಟಿಕೋಳಿ ಸಾರು ಸವಿದ ಸಿದ್ದರಾಮಯ್ಯ
ನಾನು ಹಾಗೂ ಡಿ.ಕೆ.ಶಿವಕುಮಾರ್ ಸಹೋದರರು, ಭಿನ್ನಾಭಿಪ್ರಾಯಗಳಿಲ್ಲ: ಸಿಎಂ
ಬೆಂಗಳೂರು: ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ. 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಡಿಸಿಎಂ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಮಂಗಳವಾರ ಬ್ರೇಕ್‌ಫಾಸ್ಟ್ ಮೀಟಿಂಗ್ (CM-DCM Breakfast Meeting) ನಂತರ ಅವರು ಮಾತನಾಡಿ, ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿ ನೀಡಿದೆ. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದರು.
ಶಾಸಕರು ಹಾಗೂ ಸಚಿವರಿಗೆ ಇದನ್ನೇ ಹೇಳುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ, ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ. ಸಿಎಲ್‌ಪಿ ಸಭೆ ಕರೆದಾಗ ಎಲ್ಲರೂ ಊಟಕ್ಕೆ ಸೇರುತ್ತೇವೆ. ಹೈ ಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊನ್ನೆ ಹಾಗೂ ಇಂದೂ ಕೂಡ ಚರ್ಚಿಸಲಾಗಿದೆ. ಉಪಮುಖ್ಯಮಂತ್ರಿಗಳ ಮನೆಯ ಉಪಾಹಾರದಲ್ಲಿ ಮಾಂಸಾಹಾರವಿತ್ತು, ನಮ್ಮ ಮನೆಯಲ್ಲಿ ಸಸ್ಯಾಹಾರದ ಉಪಾಹಾರವಿತ್ತು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ನಾನು ಹಾಗೂ ಡಿಕೆಶಿ ಸಹೋದರರು, ಭಿನ್ನಾಭಿಪ್ರಾಯಗಳಿಲ್ಲ: ಸಿಎಂ ಸಿದ್ದರಾಮಯ್ಯ
ಪರಮೇಶ್ವರ್ ಅವರು ಸಿಎಂ ಹಾಗೂ ಡಿಸಿಎಂ ಅವರನ್ನು ಉಪಾಹಾರಕ್ಕೆ ಕರೆಯುವುದಾಗಿ ಹೇಳಿರುವ ಬಗ್ಗೆ ಮಾತನಾಡಿ, ಅದನ್ನು ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸುತ್ತಾರೆ ಎಂದು ಹೇಳಿದರು.