ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ನವದೆಹಲಿಯಲ್ಲಿ ರಾಹುಲ್‌ ಗಾಂಧಿ, ಕೆ.ಸಿ. ವೇಣುಗೋಪಾಲ್ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ; ಮಹತ್ವದ ಚರ್ಚೆ

ಎಸ್‌ಐಆರ್‌ ವಿರುದ್ಧ ಇಂಡಿಯಾ ಮೈತ್ರಿಕೂಟದಿಂದ ನವೆಂಬರ್ 1ರಂದು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಲು ದೆಹಲಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತೆರಳಿದ್ದರು. ಇದಾದ ಬಳಿಕ ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಹುಲ್‌ ಗಾಂಧಿ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ದೆಹಲಿಯಲ್ಲಿ ರಾಹುಲ್‌ ಗಾಂಧಿ, ಕೆ.ಸಿ. ವೇಣುಗೋಪಾಲ್ ಭೇಟಿಯಾದ ಸಿದ್ದರಾಮಯ್ಯ

-

Prabhakara R
Prabhakara R Nov 2, 2026 6:02 PM

ನವದೆಹಲಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Former CM Siddaramaiah) ಅವರು ದೆಹಲಿಯಲ್ಲಿ ಇಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು.

ಅದೇ ರೀತಿ ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಕೂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಿ, ಸಮಾಲೋಚನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಡಾ‌.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಮಾಜಿ ಸಚಿವರಾದ ವೆಂಕಟೇಶ್, ವಿಧಾನ ಪರಿಷತ್ ಸದಸ್ಯರಾದ ನಾಗರಾಜ್ ಯಾದವ್, ಡಾ. ತಿಮ್ಮಯ್ಯ, ಶಿವಕುಮಾರ್, ಮಾಜಿ ಸದಸ್ಯ ರಮೇಶ್ ಬಾಬು, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹರೋಜ್ ಖಾನ್ ಉಪಸ್ಥಿತರಿದ್ದರು.

Siddaramaiah and rahul Gandhi (1)

ಎಸ್‌ಐಆರ್‌ ವಿರುದ್ಧ ಇಂಡಿಯಾ ಮೈತ್ರಿಕೂಟದಿಂದ ನವೆಂಬರ್ 1ರಂದು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಲು ದೆಹಲಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತೆರಳಿದ್ದರು. ಇದಾದ ಬಳಿಕ ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಹುಲ್‌ ಗಾಂಧಿ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಕರ್ನಾಟಕದಲ್ಲಿ ಸ್ಟಿಂಗ್‌ ಆಪರೇಷನ್‌ ಪ್ರಕರಣದಲ್ಲಿ ಕ್ಲೀನ್‌ಚಿಟ್‌ ಸಿಕ್ಕ ಬೆನ್ನಲ್ಲೇ ಸಿದ್ದರಾಮಯ್ಯ ಅವರು ವರಿಷ್ಠರನ್ನು ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ. ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ಸರ್ಕಾರದ ಆಡಳಿತ, ಪರಿಷತ್‌ ಚುನಾವಣೆ ಸೋಲು, ಮುಂಬರುವ ಚುನಾವಣೆಗೆ ಸಿದ್ಧತೆ ಸೇರಿ ಹಲವು ವಿಚಾರಗಳ ಬಗ್ಗೆ ಕಾಂಗ್ರೆಸ್‌ ವರಿಷ್ಠರೊಂದಿಗೆ ಮಾಜಿ ಸಿಎಂ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.