ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸದಾಶಿವನಗರ ನಿವಾಸಕ್ಕೆ ಯಾರೂ ಬರಬೇಡಿ; ಗೃಹಕಚೇರಿ ಕೃಷ್ಣಾದಲ್ಲಿ ಭೇಟಿಯಾಗಲು ಸಿಎಂ ಡಿಕೆಶಿ ಮನವಿ

CM DK Shivakumar: ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಇನ್ನುಮುಂದೆ ಮುಖ್ಯಮಂತ್ರಿಗಳ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಸಿಎಂ ಮಾಧ್ಯಮ ಹೇಳಿಕೆ ನೀಡಿದ್ದಾರೆ.

ಸದಾಶಿವನಗರ ನಿವಾಸಕ್ಕೆ ಬೇಡ, ಗೃಹಕಚೇರಿ ಕೃಷ್ಣಾಗೆ ಬನ್ನಿ: ಸಿಎಂ ಮನವಿ

ಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ) -

Profile
Siddalinga Swamy Jun 22, 2026 3:53 PM

ಬೆಂಗಳೂರು, ಜೂ.22: ಇನ್ನುಮುಂದೆ ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಮುಖ್ಯಮಂತ್ರಿಗಳ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (CM DK Shivakumar) ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಇಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.‌

ಗ್ಯಾರಂಟಿ ಫಲಾನುಭವಿಗಳ ದಾಖಲೆ ಮರುಪರಿಶೀಲನೆಗೆ ಸಮಿತಿ ರಚನೆ: ಸಿಎಂ

ಬೆಂಗಳೂರು: “ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಐದು ಸದಸ್ಯರ ಗ್ಯಾರಂಟಿ ಸಮಿತಿಯನ್ನು ರಚಿಸಲಾಗುವುದು. ಈ ಸಮಿತಿ ಸದಸ್ಯರು ಗ್ಯಾರಂಟಿ (Guarantee schemes) ಫಲಾನುಭವಿಗಳ ದಾಖಲೆ ಮರುಪರಿಶೀಲನೆ ಮಾಡಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದ್ದಾರೆ. ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಸಂಕಲ್ಪ ಸಮಾವೇಶದಲ್ಲಿ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ಹಸ್ತಾಂತರಿಸಿ ಮಾತನಾಡಿದ್ದಾರೆ.

“ಕಳೆದ ಆರು ವರ್ಷಗಳಲ್ಲಿ ನನ್ನ ಜೊತೆ ಪಕ್ಷದ ಅನೇಕ ಪದಾಧಿಕಾರಿಗಳು ಶ್ರಮಿಸಿದ್ದು, ಎಲ್ಲಾ ಶಾಸಕರು ಹಾಗೂ ಮುಖಂಡರು ತನು, ಮನ, ಧನ ಅರ್ಪಿಸಿ ನನಗೆ ಶಕ್ತಿ ತುಂಬಿದ್ದಾರೆ. ಎಷ್ಟೋ ಜನಕ್ಕೆ ಅಧಿಕಾರ ನೀಡಲು ಸಾಧ್ಯವಾಗಿಲ್ಲ. ನಾವು ಗ್ಯಾರಂಟಿ ಯೋಜನೆಗಳ ಸಮಿತಿ ಮಾಡಿ, ಸಾವಿರಾರು ಕಾರ್ಯಕರ್ತರಿಗೆ ಅಧಿಕಾರ ನೀಡಿದ್ದೇವೆ. ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಸಮಿತಿ ರಚನೆಗೆ ನಾನು ಹಾಗೂ ನಮ್ಮ ವರಿಷ್ಠರು ಚರ್ಚೆ ಮಾಡಿದ್ದೇವೆ. ಎಲ್ಲಾ ವರ್ಗದವರಿಗೂ ಸಮಾನವಾಗಿ ಈ ಸಮಿತಿಯಲ್ಲಿ ನೇಮಕ ಮಾಡಲಾಗುವುದು” ಎಂದು ಘೋಷಿಸಿದ್ದಾರೆ.

Bidadi Township: ಬಿಡದಿ ಟೌನ್‌ಶಿಪ್‌ಗೆ ಕಾಂಗ್ರೆಸ್‌ ನಾಯಕರೇ ವಿರೋಧಿಸಿದ್ದರು: ದಾಖಲೆ ಸಮೇತ ಎಚ್‌ಡಿಕೆ ತಿರುಗೇಟು

“ಪ್ರತಿ ವಾರ್ಡ್ ಹಾಗೂ ಪಂಚಾಯಿತಿಯಲ್ಲಿ ಐದು ಜನರಂತೆ, 7 ಸಾವಿರ ಪಂಚಾಯಿತಿ, 4 ಸಾವಿರ ವಾರ್ಡ್ ಗಳಲ್ಲಿ ಗ್ಯಾರಂಟಿ ಸಮಿತಿ ರಚಿಸಲಾಗುವುದು. ಆಮೂಲಕ ನಾವು ಎಷ್ಟು ನಾಯಕರನ್ನು ತಯಾರು ಮಾಡುತ್ತಿದ್ದೇವೆ ಎಂದು ನೀವೇ ಆಲೋಚಿಸಿ. ನಾಯಕನಾದವನು ನಾಯಕರನ್ನು ಬೆಳೆಸಬೇಕೇ ಹೊರತು, ಹಿಂಬಾಲಕರನ್ನಲ್ಲ ಎಂಬುದಕ್ಕೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ” ಎಂದು ತಿಳಿಸಿದ್ದಾರೆ.