ಸುರ್ಜೇವಾಲ ಜತೆ ಚರ್ಚೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಸಚಿವ ಪರಮೇಶ್ವರ್
G Parameshwar: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಏನಾದರೂ ಅನುದಾನ ಕೊರತೆಗಳಿದ್ದರೆ ಆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.


ತುಮಕೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಏನಾದರೂ ಅನುದಾನ ಕೊರತೆಗಳಿದ್ದರೆ ಆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ (G Parameshwar) ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ರಾಜಕೀಯವಾಗಿ ಎರಡು ಅಭಿಪ್ರಾಯಗಳು ಇದ್ದೇ ಇರುತ್ತವೆ. ಇದು ಎಲ್ಲ ಪಕ್ಷಗಳಲ್ಲೂ ಸರ್ವೇ ಸಾಮಾನ್ಯ. ಸುರ್ಜೇವಾಲಾ ಅವರು ಶಾಸಕರೊಂದಿಗೆ ಸಭೆ ನಡೆಸುತ್ತಿರುವುದು ಕ್ಷೇತ್ರಗಳ ಅಭಿವೃದ್ಧಿ ವಿಚಾರದ ಕುರಿತು ಮಾಹಿತಿ ಪಡೆದುಕೊಳ್ಳಲು ಅಷ್ಟೇ ಎಂದರು.
ಸಿಗಂದೂರು ಸೇತುವೆ ಉದ್ಘಾಟನೆಗೆ ಯಾರ ವಿರೋಧವೂ ಇಲ್ಲ. ಇದು ಕೇಂದ್ರ ಸರ್ಕಾರದ ಯೋಜನೆಯಾಗಿರುವುದರಿಂದ ಅವರೇ ಬಂದು ಉದ್ಘಾಟನೆ ಮಾಡಲು ಮುಂದಾಗಿದ್ದಾರೆ. ಈ ಉದ್ಘಾಟನೆಯನ್ನು ಮುಂದಕ್ಕೆ ಹಾಕಿ ಎಂದಷ್ಟೇ ಮುಖ್ಯಮಂತ್ರಿಗಳು ಪತ್ರ ಬರೆದಿದ್ದರೂ ಪ್ರಯೋಜನವಾಗಿಲ್ಲ. ಸಾಮಾನ್ಯವಾಗಿ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ರಾಜ್ಯ ಸರ್ಕಾರದ್ದು ಪಾಲು ಇರುತ್ತದೆ. ಕೇಂದ್ರ ಒಂದೇ ಮಾಡಲು ಸಾಧ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡು ಒಟ್ಟಿಗೆ ಕೆಲಸ ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು.
ಈ ಸುದ್ದಿಯನ್ನೂ ಓದಿ | DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ- ಡಿಕೆಶಿ ಭರವಸೆ
ಒಂದೊಂದು ಬಾರಿ ಮುಖ್ಯಮಂತ್ರಿಗಳು ಉದ್ಘಾಟನಾ ಕಾರ್ಯಕ್ರಮಗಳಿಗೆ ಹೋಗಲು ಸಾಧ್ಯವಾಗದಿದ್ದಾಗ ನಮ್ಮಲ್ಲೇ ಇರುವ ಒಬ್ಬರು ಸಚಿವರೊಬ್ಬರನ್ನು ನಿಯೋಜಿಸುತ್ತಾರೆ. ಇದು ರಾಜ್ಯ ಸರ್ಕಾರದ ಪದ್ಧತಿ. ಆದರೆ ಎಲ್ಲೋ ಒಂದು ಕಡೆ ಈ ವಿಚಾರದಲ್ಲಿ ಕಮ್ಯುನಿಕೇಷನ್ ಗ್ಯಾಪ್ ಆಗಿರಬಹುದು. ಅದನ್ನು ಸರಿಪಡಿಸಿಕೊಂಡರಾಯಿತು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.