ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

DK Shivakumar: ಕೋರ್ಟ್ ನಿರ್ದೇಶನದಂತೆ ಜಿಬಿಎ ಪಾಲಿಕೆಗಳ ಚುನಾವಣೆ: ಡಿ.ಕೆ. ಶಿವಕುಮಾರ್

DK Shivakumar: ಜಿಬಿಎ ಚುನಾವಣೆ ಯಾವಾಗ ನಡೆಯಲಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ ಎಂದು ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಕೋರ್ಟ್ ನಿರ್ದೇಶನದಂತೆ ಜಿಬಿಎ ಪಾಲಿಕೆಗಳ ಚುನಾವಣೆ: ಡಿ.ಕೆ. ಶಿವಕುಮಾರ್

ಡಿಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ) -

Profile
Siddalinga Swamy May 13, 2026 8:50 PM

ಬೆಂಗಳೂರು, ಮೇ 13: ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಅವರು ಪ್ರತಿಕ್ರಿಯೆ ನೀಡಿದರು. ಜಿಬಿಎ ಚುನಾವಣೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆಗೆ ಈ ರೀತಿ ಉತ್ತರಿಸಿದರು.

ಈ ವರ್ಷ ಜಿಬಿಎ ಆದಾಯದ ನಿರೀಕ್ಷೆ ಏನಿದೆ ಎಂದು ಕೇಳಿದಾಗ, ʼಆದಾಯ ಬರಲಿ ನೋಡೋಣ. ನಾವು ಆದಾಯದ ಲೆಕ್ಕ ಹಾಕುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಬದುಕು ರಕ್ಷಣೆ ಮಾಡಬೇಕು. 'ಚಿನ್ನ ಖರೀದಿ ಮಾಡಬೇಡಿ, ಇಂಧನ ಬಳಕೆ ಕಡಿಮೆ ಮಾಡಿ, ವಿದೇಶ ಪ್ರಯಾಣ ಬೇಡ' ಎಂದು ಹೇಳುವ ಕಷ್ಟ ಕಾಲದಲ್ಲಿ ಜನರಿಗೆ ಒಳ್ಳೆಯದಾಗಬೇಕು‌ʼ ಎಂದು ತಿಳಿಸಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಮಾತನಾಡಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ

ದೇಶಕ್ಕೆ ದೊಡ್ಡ ಅಪಮಾನ

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೀಟ್ ಪರೀಕ್ಷೆ ರದ್ದಾಗಿರುವ ಬಗ್ಗೆ ಕೇಳಿದಾಗ, ʼನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ದೇಶಕ್ಕೆ ದೊಡ್ಡ ಅಪಮಾನವಾಗಿದ್ದು, ಕೇಂದ್ರ ಸಚಿವರು ಹಾಗೂ ಸಂಸದರು ಇದಕ್ಕೆ ಉತ್ತರಿಸಬೇಕು. ಇದೇ ಪ್ರಕರಣ ನಮ್ಮ ರಾಜ್ಯದಲ್ಲಿ ಆಗಿದ್ದರೆ ಇಷ್ಟು ಹೊತ್ತಿಗೆ ನಮ್ಮ ಮೇಲೆ ತೀವ್ರ ವಾಗ್ದಾಳಿ ನಡೆಸುತ್ತಿದ್ದರು. ಅನೇಕ ಕನಸು ಕಟ್ಟಿಕೊಂಡು ಕಷ್ಟಪಟ್ಟಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರು ಆಕ್ರೋಶಗೊಂಡಿದ್ದಾರೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು.