ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

CM DK Shivakumar: ಬಡವರಿಗೆ ನಿವೇಶನದ ಬದಲು ಮನೆ ಕಟ್ಟಿ ಕೊಡಲು ಆದ್ಯತೆ ನೀಡಿ: ಸಿಎಂ ಡಿ.ಕೆ. ಶಿವಕುಮಾರ್‌

CM DK Shivakumar: ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ʼವಸತಿ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆʼ ಜರುಗಿತು. ಬಡವರಿಗೆ ತಲೆ ಮೇಲೊಂದು ಸೂರು ಬೇಕು. ಅವರಿಗೆ ನಿವೇಶನದ ಬದಲು ಮನೆ ಕಟ್ಟಿ ಕೊಡಲು ಆದ್ಯತೆ ನೀಡಿ ಎಂದು ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌, ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಿಎಂ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ʼವಸತಿ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆʼ ಜರುಗಿತು.

ಬೆಂಗಳೂರು, ಜೂ.24: ಬಡವರಿಗೆ ತಲೆ ಮೇಲೊಂದು ಸೂರು ಬೇಕು. ಅವರಿಗೆ ನಿವೇಶನದ ಬದಲು ಮನೆ ಕಟ್ಟಿ ಕೊಡಲು ಆದ್ಯತೆ ನೀಡಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (CM DK Shivakumar), ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ʼವಸತಿ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆʼಯಲ್ಲಿ ಮಾತನಾಡಿದ ಅವರು, ನಿವೇಶನಗಳು ಖಾಲಿ ಬಿದ್ದಷ್ಟೂ ಸ್ಲಂಗಳು ತಲೆ ಎತ್ತುತ್ತವೆ. ಇದಕ್ಕೆ ಅವಕಾಶ ಕೊಡಬೇಡಿ ಎಂದು ನಿರ್ದೇಶನ ನೀಡಿದರು.

ಯಾವುದೇ ವಸತಿ ಯೋಜನೆಗೆ ಕೈ ಹಾಕುವ ಮೊದಲೇ ಸ್ಪಷ್ಟ ಯೋಜನೆ ಇಟ್ಟುಕೊಳ್ಳಿ. ಮನೆ ನಿರ್ಮಿಸಿದ ನಂತರ ಮಾರಾಟಕ್ಕೆ ಒದ್ದಾಡುವುದು ಬೇಡ. ನೀವು ಗುಣಮಟ್ಟದಲ್ಲಿ ಸ್ಪರ್ಧಾತ್ಮಕವಾಗಿ ಇರಬೇಕು‌.‌ ಹಳ್ಳಿಯಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವ ಬಡವರು ಮನೆಗಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇನ್ನಷ್ಟು ಸರಳಗೊಳಿಸಿ ಎಂದು ಸೂಚಿಸಿದರು.

ಹರಾಜು ಹಾಕಿದರೆ ಅರ್ಹರಿಗೆ ಸಿಗುತ್ತದೋ, ಹಣವಿದ್ದವರಿಗೆ ಸಿಗುತ್ತದೋ..? ಎಂಬ ಮುಖ್ಯಮಂತ್ರಿಗಳ ಪ್ರಶ್ನೆಗೆ ಅಧಿಕಾರಿಗಳು ತಬ್ಬಿಬ್ಬಾದರು. ಹರಾಜು ವ್ಯವಸ್ಥೆ ನಿಲ್ಲಿಸಿ, ಸಾರ್ವಜನಿಕವಾಗಿ ಲಾಟರಿ ಎತ್ತುವ ಮೂಲಕ ಮನೆ ಹಂಚಿಕೆ ಮಾಡಲು ಆದೇಶಿಸಿದರು. ಲಾಟರಿ ಮೂಲಕ ಮನೆ ಹಂಚುತ್ತೀರೋ, ಹರಾಜಿನ ಮೂಲಕ ಹಂಚುತ್ತೀರೋ ಎನ್ನುವುದಕ್ಕಿಂತ ನೈಜ ಅರ್ಹರಿಗೇ ಮನೆ ಸಿಗಬೇಕು. ಇದಕ್ಕೇನು ವ್ಯವಸ್ಥೆ ಮಾಡಿದ್ದೀರಿ ಎಂಬ ವಿವರ ಸಲ್ಲಿಸುವಂತೆ ಸೂಚನೆ ನೀಡಿದರು.

ನಿವೇಶನಗಳು ಖಾಲಿ ಬಿದ್ದಷ್ಟೂ ಸ್ಲಂಗಳು ತಲೆ ಎತ್ತುತ್ತವೆ. ಇದಕ್ಕೆ ಅವಕಾಶ ಕೊಡಬೇಡಿ. ಮುಂಬೈ ಮಾದರಿಯಲ್ಲಿ ಸ್ಲಂ‌ಗಳ ಮರು ಅಭಿವೃದ್ಧಿಗೆ ಯೋಜನೆ ಸಿದ್ಧಪಡಿಸಬೇಕು. ಆದರೆ, ಮುಂಬೈಗಿಂತ ಹೆಚ್ಚು ವಿಸ್ತೀರ್ಣದ ಮನೆಗಳನ್ನು ನಿರ್ಮಿಸಿಕೊಡಬೇಕು. ಅಧಿಕಾರಿಗಳ ತಂಡ ಮುಂಬೈಗೆ ಹೋಗಿ ಅಧ್ಯಯನ‌ ಮಾಡಿಕೊಂಡು ಬನ್ನಿ. ಅದಕ್ಕಿಂತ ಉತ್ತಮ ಮಾದರಿಯಲ್ಲಿ ನಾವೇನು ಮಾಡಬಹುದು ಎಂಬ ಬಗ್ಗೆ ಮುಂದಿನ ಕ್ಯಾಬಿನೆಟ್ ಸಭೆಯ ಒಳಗಾಗಿ ವರದಿ ಸಿದ್ಧಪಡಿಸಿ ಎಂದು ಮುಖ್ಯಮಂತ್ರಿಗಳು ಗಡುವು ನೀಡಿದರು.

ಗ್ರಾಮೀಣ ವಸತಿ ಮನೆಗಳ ನಿರ್ಮಾಣ, ನಿವೇಶನಗಳ ಹಂಚಿಕೆಯಲ್ಲಿ ನಿಧಾನಗತಿಗೆ ಗರಂ

ಗ್ರಾಮೀಣ ವಸತಿ ಮನೆಗಳ ನಿರ್ಮಾಣ, ನಿವೇಶನಗಳ ಹಂಚಿಕೆಯಲ್ಲಿ ನಿಧಾನಗತಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದರು. ಜೀವಿತಾವಧಿಯಲ್ಲಿ ಒಂದು ಮನೆ ಹೊಂದಬೇಕು ಎನ್ನುವುದು ಬಡವರು, ಮಧ್ಯಮ ವರ್ಗದವರ ಕನಸು, ಆಸೆ. ಹಲವು ವರ್ಷಗಳ ಹಿಂದೆಯೇ ಮನೆಗಾಗಿ ಅರ್ಜಿ ಸಲ್ಲಿಸಿದವರು ಇನ್ನೂ ಕಾಯುತ್ತಿದ್ದಾರೆ. ಅವರೆಲ್ಲ ಠೇವಣಿ ಕಟ್ಟಿದ್ದಾರೆ. ಈ ಅರ್ಜಿಗಳ ಮೇಲೆ ಹಿಂದಿನ ಸರ್ಕಾರಗಳ ವಸತಿ ಸಚಿವರು, ಸೋಮಣ್ಣ ಅವರ ಫೋಟೋ ಇದೆ. ಅವರಿಗಿನ್ನೂ ಮನೆ ಕೊಟ್ಟಿಲ್ಲ. ಪಾಪ ಅವರೆಲ್ಲಾ ಇನ್ನೂ ಎಷ್ಟು ವರ್ಷ ಕಾಯಬೇಕು. ತಕ್ಷಣವೇ ಮನೆ ವಿತರಿಸಿ. ಫಲಾನುಭವಿಗಳ ಪಟ್ಟಿಯನ್ನು ಶೀಘ್ರವಾಗಿ ಕೊಡಲು ಶಾಸಕರ ಜತೆ ಮಾತನಾಡುವೆ ಎಂದು ತಿಳಿಸಿದರು.

ಮನೆ ಕಟ್ಟಲು ಸರ್ಕಾರದಿಂದ ಕಡಿಮೆ ದರದಲ್ಲಿ ನಿವೇಶನ ಪಡೆದವರು 3 ಅಥವಾ ಐದು ವರ್ಷದೊಳಗೆ ಮನೆ ನಿರ್ಮಿಸುವ ನಿಯಮ ಪರಿಶೀಲಿಸಿ. ಶಿವರಾಮಕಾರಂತ ಬಡಾವಣೆಯ ರಾಜೀವ್ ಗಾಂಧಿ ವಸತಿ ಯೋಜನೆಯ ಮನೆಗಳ ನಿರ್ಮಾಣ ಜವಾಬ್ದಾರಿಯನ್ನು ಬಿಡಿಎಗೆ ವಹಿಸಲು ಸಿಎಂ ಸೂಚನೆ ನೀಡಿದರು. ಇದೇ ವೇಳೆ ಸಂಡೂರಿನಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ನಿರ್ಮಿಸಿರುವ ಮನೆಗಳ ಗುಣಮಟ್ಟಕ್ಕೆ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ ಹೈಕೋರ್ಟ್‌ ಸಂಚಾರಿ ಪೀಠ ಸ್ಥಾಪಿಸಿ: ಸಿಎಂಗೆ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದ ನಿಯೋಗ ಮನವಿ

ಕೇವಲ ಮನೆ ಕಟ್ಟಿದರೆ ಸಾಲದು. ಮೂಲಭೂತ ಸೌಲಭ್ಯಗಳು ಮತ್ತು ಸೂಕ್ತ ಸಂಪರ್ಕ ಕಲ್ಪಿಸುವ ಕಡೆಗೂ ಗಮನ ಹರಿಸಬೇಕು. ಯಾವುದೇ ವಸತಿ ಯೋಜನೆ ಅನುಷ್ಠಾನಕ್ಕೆ ಯೋಜನಾ ವಿಭಾಗಕ್ಕೆ ಮೊದಲು ಹೋಗಲೇಬೇಕು. ಕೆಎಚ್‌ಬಿ ವತಿಯಿಂದ 568 ಯೋಜನೆಗಳನ್ನು ಅನುಮೋದಿಸಲಾಗಿದ್ದು, ಇದರಲ್ಲಿ 280 ಅನುಷ್ಠಾನಗೊಂಡಿವೆ. 288 ಬಾಕಿ ಇವೆ. ಈ ಬಾಕಿ ಯೋಜನೆಗಳಿಗೆ ಅಡ್ಡಿ ಆಗಿರುವ ತಾಂತ್ರಿಕ ಅಡಚಣೆಗಳ ನಿವಾರಣೆಗೆ ಕ್ರಮ ವಹಿಸಬೇಕು ಮತ್ತು ದುರುಪಯೋಗ ಆಗದಂತೆ ಜಾಗ್ರತೆ ವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿರ್ದೇಶನ ನೀಡಿದ್ದಾರೆ.