ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತುಮಕೂರಿನ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ?: ಸಿಎಂಗೆ ವಿಜಯೇಂದ್ರ ಪ್ರಶ್ನೆ

BY Vijayendra: ಗ್ಯಾರಂಟಿಗಳೇ ಅಭಿವೃದ್ಧಿ ಎಂದು ಬಿಂಬಿಸುವ ಕೆಲಸವನ್ನು ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ರಸ್ತೆಗೆ ಆದ್ಯತೆ ನೀಡಿದ್ದೀರಾ? ನೀರಾವರಿ ಯೋಜನೆಗಳಿಗೆ ಹಣ ಒದಗಿಸಿದ್ದೀರಾ? ಆಸ್ಪತ್ರೆಗಳು, ಶಾಲೆಗಳಿಗೆ ಕಾಂಗ್ರೆಸ್ ಸರ್ಕಾರ ನೀಡಿದೆಯೇ? ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.

ತುಮಕೂರಿನ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ?: ವಿಜಯೇಂದ್ರ

ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಬಿ.ವೈ. ವಿಜಯೇಂದ್ರ ಮಾತನಾಡಿದರು. -

Profile
Siddalinga Swamy May 19, 2026 8:05 PM

ಬೆಂಗಳೂರು, ಮೇ 19: ಮುಖ್ಯಮಂತ್ರಿಗಳೇ, ಯಾವ ಪುರುಷಾರ್ಥಕ್ಕೆ ನೀವು ತುಮಕೂರಿನಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿದ್ದೀರಿ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 3 ವರ್ಷಗಳಲ್ಲಿ ತಾವು ಮಾಡಿದ ಸಾಧನೆಯಾದರೂ ಏನು? ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿವೆಯೇ? ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದೀರಾ ಎಂದು ಕೇಳಿದರು.

ನಾಡಿಗೆರಡು ತುತ್ತು ಅನ್ನ ಕೊಡುವ ರೈತರ ಬದುಕನ್ನು ಕಟ್ಟಿಕೊಡುವ ಸಲುವಾಗಿ ನೆರೆ ಮತ್ತು ಬರದ ಸಂದರ್ಭದಲ್ಲಿ ನೆರವಿಗೆ ನಿಮ್ಮ ಸರ್ಕಾರ ಬಂದಿದೆಯೇ?. ಇದ್ಯಾವುದನ್ನೂ ಮಾಡದೇ, ಗ್ಯಾರಂಟಿಗಳ ನೆಪ ಒಡ್ಡಿಕೊಂಡು ರಾಜ್ಯ ಸರ್ಕಾರವು ಜನರ ಪಾಲಿಗೆ ಬದುಕಿದೆ ಎಂಬುದನ್ನು ನೆನಪಿಸುವ ಕಾರ್ಯವನ್ನು ಈ ಸಾಧನಾ ಸಮಾವೇಶದ ಮೂಲಕ ತಾವು ಮಾಡುತ್ತ ಇದ್ದೀರಿ. ಕಾಂಗ್ರೆಸ್ ಸರ್ಕಾರವು ಕೇವಲ ಜಾಹೀರಾತಿನ ಮೂಲಕ ತಮ್ಮ ಯಶಸ್ಸನ್ನು ಬಿಚ್ಚಿಡುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ನಿಮ್ಮ ಗೆಲುವಿಗೆ ಗ್ಯಾರಂಟಿಗಳು ಸಹಕರಿಸಿವೆ. ಗ್ಯಾರಂಟಿ ಹಣ ಬಿಡುಗಡೆ ಮಾಡಿ ಚುನಾವಣೆ ಗೆಲ್ಲಲು ಪ್ರಯತ್ನ ಮಾಡುತ್ತ ಇದ್ದೀರಿ ಎಂದು ದೂರಿದ ಅವರು, ಈ ಗೆಲುವಿನ ನಾಗಾಲೋಟ ಬಹಳ ದಿನ ನಡೆಯಲು ಸಾಧ್ಯವಿಲ್ಲ ಎಂದರು. ಗ್ಯಾರಂಟಿಗಳೇ ಅಭಿವೃದ್ಧಿ ಎಂದು ಬಿಂಬಿಸುವ ಕೆಲಸವನ್ನು ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ರಸ್ತೆಗೆ ಆದ್ಯತೆ ನೀಡಿದ್ದೀರಾ? ನೀರಾವರಿ ಯೋಜನೆಗಳಿಗೆ ಹಣ ಒದಗಿಸಿದ್ದೀರಾ? ಆಸ್ಪತ್ರೆಗಳು, ಶಾಲೆಗಳಿಗೆ ಕಾಂಗ್ರೆಸ್ ಸರ್ಕಾರ ನೀಡಿದೆಯೇ? ಎಂದು ಕೇಳಿದರು.

ರಸ್ತೆ ಗುಂಡಿ ಮುಚ್ಚಿಲ್ಲ; ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ

ಇವರ ಯೋಗ್ಯತೆಗೆ ಬೆಂಗಳೂರು ಮಹಾನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯ ಆಗುತ್ತಿಲ್ಲ. ಕೃಷಿ ಕ್ಷೇತ್ರದ ಬಗ್ಗೆ ಈ ಸರ್ಕಾರ ಕಿಂಚಿತ್ತೂ ತಲೆ ಕೆಡಿಸಿಕೊಂಡಿಲ್ಲ. ಸಂಕಷ್ಟದಲ್ಲಿ ಇರುವ ರೈತರಿಗೆ ಸಾಂತ್ವನ ಹೇಳುವ ಸಂವೇದನೆ ಕೂಡ ಈ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ ಎಂಬುದು ದುರ್ದೈವ. ನೆರೆ ಮತ್ತು ಬರದ ಸಂದರ್ಭದಲ್ಲಿ ನೆರವಿಗೆ ಇವರು ಧಾವಿಸಿಲ್ಲ ಎಂದು ಟೀಕಿಸಿದರು.

ಸಿಎಂ ರಾಜೀನಾಮೆ ಕೊಡಬೇಕಿತ್ತು

ಉದ್ಯೋಗ ಸೃಷ್ಟಿ ಕುರಿತು ಸಾಕಷ್ಟು ಮಾತನಾಡುತ್ತಾರೆ. ಯುವಜನತೆ ಜೀವನದ ಜತೆ ಚೆಲ್ಲಾಟ ಆಡುವ ಕಾಂಗ್ರೆಸ್ ಸರ್ಕಾರದ ಅಹಿಂದ ಮುಖವಾಡವೂ ಕಳಚಿಬಿದ್ದಿದೆ. ಭ್ರಷ್ಟಾಚಾರ ರಹಿತ ಆಡಳಿತ ನೀಡುವುದಾಗಿ ಹಲವಾರು ಬಾರಿ ಹೇಳಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಆದಾಗಲೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಾಗಿತ್ತು ಎಂದು ತಿಳಿಸಿದರು. ಮತ್ತೊಂದು ಕಡೆ ‘ಮುಡಾʼ ಹಗರಣ ನಡೆದಿದೆ. 14 ನಿವೇಶನ ವಾಪಸ್ ಮಾಡಿದ್ದು ರಾಜ್ಯದ ಜನರಿಗೆ ಗೊತ್ತಿದೆ ಎಂದರು.‌

ಜನರ ಜೇಬಿಗೆ ಕತ್ತರಿ ಹಾಕುತ್ತಲೇ 3 ವರ್ಷ ಸವೆಸಿದ್ದು ಒಂದು ಸಾಧನೆಯೇ?: ರಾಜ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ

ಈ ವೇಳೆ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ಮಾಜಿ ಸಚಿವರು ಮತ್ತು ಶಾಸಕ ಬಿ.ಎ ಬಸವರಾಜ್, ಶಶಿಕಲಾ ಜೊಲ್ಲೆ, ರಾಜ್ಯ ವಕ್ತಾರ ಎಚ್. ವೆಂಕಟೇಶ್ ದೊಡ್ಡೇರಿ, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ, ಎಸ್‍ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ್ ಉಪಸ್ಥಿತರಿದ್ದರು.