ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

HD Kumaraswamy: ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ?; ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ತಿರುಗೇಟು

ಕುಮಾರಸ್ವಾಮಿ ಮನುವಾದಿ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ? ಹಾಗಾದರೆ, ಸಿದ್ದರಾಮಯ್ಯ ಅವರು ಮಕ್ಕಳಿಗೆ ಏನು ಬೋಧಿಸಲು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ?: ಎಚ್‌ಡಿಕೆ

ಎಚ್‌.ಡಿ.ಕುಮಾರಸ್ವಾಮಿ (ಸಂಗ್ರಹ ಚಿತ್ರ) -

Profile
Siddalinga Swamy Dec 6, 2025 6:21 PM

ಮಂಡ್ಯ, ಡಿ.6: ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವಂತೆ ಹೇಳಿದ್ದೇನೆ. ಆ ಬಗ್ಗೆ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರವನ್ನೂ ಬರೆದಿದ್ದೇನೆ. ನಾನೇನು ಮತಾಂತರ ಮಾಡಲಿಕ್ಕೆ ಈ ಹೇಳಿಕೆ ನೀಡಿಲ್ಲ. ಇಂದಿನ ಮಕ್ಕಳ ಬದುಕು, ಇವತ್ತಿನ ಸಮಾಜವನ್ನು ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಯಾವ ರೀತಿ ಬೆಳೆಸುತ್ತಿದ್ದಾರೆ. ಇದೆಲ್ಲವನ್ನು ಗಮನಿಸಿ ಹೇಳಿದ್ದೇನೆ ಎಂದು ಸಿಎಂಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತಿರುಗೇಟು ನೀಡಿದ್ದಾರೆ.

ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವಂತೆ ಕೋರಿ ಕೇಂದ್ರದ ಶಿಕ್ಷಣ ಸಚಿವರಿಗೆ ಪತ್ರ ಬರೆದ ತಮ್ಮನ್ನು ಮನುವಾದಿ ಎಂದು ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಡ್ಯದಲ್ಲಿ ತಿರುಗೇಟು ನೀಡಿದ ಸಚಿವ ಎಚ್.ಡಿ. ಕುಮಾರಸ್ವಾಮಿ, ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ? ಹಾಗಾದರೆ, ಸಿದ್ದರಾಮಯ್ಯ ಅವರು ಮಕ್ಕಳಿಗೆ ಏನು ಬೋಧಿಸಲು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ತಂದೆ -ತಾಯಿ, ಅಣ್ಣ-ತಮ್ಮ ಕೊಲೆ ಮಾಡುವಂಥ ಕೆಟ್ಟ ವಾತಾವರಣ ನಿರ್ಮಾಣವಾಗಿದೆ. ಬದುಕಿನ ನಿಯಮಾವಳಿ ಕಲಿಸುವುದು ಸರ್ಕಾರದ ಕರ್ತವ್ಯ. ರಾಜ್ಯದಲ್ಲಿ ಕೆಟ್ಟ ಬೆಳವಣಿಗೆಗಳು ನಡೆಯುತ್ತಿದೆ. ಹಾಸನದಲ್ಲಿ ತಾಯಿ ಆತ್ಮಹತ್ಯೆ ಮಾಡಿಕೊಂಡರು ಎಂದು ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈಗಿನ ಸಮಾಜ ವೇಗವಾಗಿ ಬೆಳೆಯುತ್ತಿದೆ. ತಾಯಿ ಹೃದಯ ಅನ್ನುವುದಿಲ್ಲ. ನಾನು ಚಿಕ್ಕವನಾಗಿದ್ದಾಗ ನೋಡಿದ್ದ ಸಮಾಜ ಈಗಿಲ್ಲ. ಮನುಷ್ಯ ಸಂಬಂಧಗಳನ್ನು ಬಲಪಡಿಸಿ ಸಮಾಜವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಭಗವದ್ಗೀತೆ ಬೋಧನೆ ಅಗತ್ಯವೆಂದು ಹೇಳಿದ್ದೇನೆ ಎಂದು ಕೇಂದ್ರ ಸಚಿವರು ಹೇಳಿದರು.

ಮೈಶುಗರ್‌ ಶಾಲೆ ಶಿಕ್ಷಕರಿಗೆ ನೆರವಾದ ಎಚ್.ಡಿ. ಕುಮಾರಸ್ವಾಮಿ; 19,94,200 ರೂ. ಚೆಕ್‌ ಹಸ್ತಾಂತರ

ಸಿದ್ದರಾಮಯ್ಯ ತಲೆಯಲ್ಲಿ ಇರುವುದು ಸಮಾಜದಲ್ಲಿ ಘರ್ಷಣೆ ಉಂಟು ಮಾಡುವುದಷ್ಟೆ. ಕಳೆದ 10 ವರ್ಷದಿಂದ ಅಹಿಂದ ಹೆಸರಿನಲ್ಲಿ ಸಿದ್ದರಾಮಯ್ಯ ಮಜಾ‌‌ ಮಾಡಿದ್ದಾರೆ. ಅವರಿಂದ ಅಹಿಂದಕ್ಕೆ ಸಿಕ್ಕ ಕೊಡುಗೆ ಏನು? ಅಹಿಂದ ಸಮಸ್ಯೆ ಎಷ್ಟು ಬಗೆಹರಿಸಿದ್ದಾರೆ? ಅಹಿಂದದಲ್ಲಿ ಅನೇಕ ಸಣ್ಣ ಜಾತಿ‌ಗಳಿವೆ. ಆ ಸಮಾಜಗಳಿಗೆ ಅವರ ಕೊಡುಗೆ ಏನು? ಅವರು ಯಾರಿಗೆ ಆದ್ಯತೆ ಕೊಟ್ಟಿದ್ದಾರೆ? ಸಂಬಂಧಿಕರ ಜತೆ ರಕ್ತದೋಕುಳಿ ನಡೆಸುವುದು ಬೇಡ ಅನ್ನುವುದು ಭಗವದ್ಗೀತೆಯಲ್ಲಿದೆ. ಭಗವದ್ಗೀತೆ ಸಾರಾಂಶ ಜನರಿಗೆ, ಮಕ್ಕಳಿಗೆ ಹೇಳುವ ಅವಶ್ಯಕತೆ ಇದೆ. ಈ ಸರ್ಕಾರ ಕಾನೂನುಬಾಹಿರ ಚಟುವಟಿಕೆ ಬೆಂಬಲಿಸುತ್ತದೆ ಎಂದು ಆರೋಪಿಸಿದ ಅವರು, ಇದರಿಂದ ಭಗವದ್ಗೀತೆ ಈ ಸಂದರ್ಭದಲ್ಲಿ ಅವಶ್ಯಕತೆ ಇದೆ ಎಂದು ನಾನು ಪ್ರತಿಪಾದಿಸಿದ್ದೇನೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.