ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಿಲ್ಲಿಸದಿದ್ರೆ ನಾಳೆ ಎಲ್ಲಾ ಪೊಲೀಸ್ ಠಾಣೆಗಳಿಗೆ ಮುತ್ತಿಗೆ: ಎಚ್‌ಡಿಕೆ ಎಚ್ಚರಿಕೆ

HD Kumaraswamy: ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಮೇಲೆ ಸುಳ್ಳು ದೂರುಗಳನ್ನು ದಾಖಲಿಸಿ, ಅವರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸುವುದನ್ನು ನಿಲ್ಲಿಸಬೇಕು. ಪೊಲೀಸ್ ಇಲಾಖೆಯನ್ನು ಈ ರೀತಿ ದುರ್ಬಳಕೆ ಮಾಡಿಕೊಳ್ಳಬಾರದು. ರಾಜ್ಯ ಸರ್ಕಾರ ಈ ರೀತಿಯ ಕಾನೂನುಬಾಹಿರ ಕ್ರಮಗಳನ್ನು ಕೈಗೊಳ್ಳುವುದನ್ನು ಮುಂದುವರಿಸಿದರೆ ನಾವು ಕೈಕಟ್ಟಿ ಕೂರಲು ಸಾಧ್ಯವಿಲ್ಲ. ಅದರ ವಿರುದ್ಧ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕುವ ಚಳವಳಿ ಶುರು ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ದಬ್ಬಾಳಿಕೆ ನಿಲ್ಲಿಸದಿದ್ರೆ ಪೊಲೀಸ್ ಠಾಣೆಗಳಿಗೆ ಮುತ್ತಿಗೆ: ಎಚ್‌ಡಿಕೆ

-

Profile
Siddalinga Swamy Oct 5, 2026 11:37 PM

ಬೆಂಗಳೂರು, ಅ.05: ಎಸ್‌ಐಆರ್ ವಿಷಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಮೇಲೆ ಸುಳ್ಳು ದೂರುಗಳನ್ನು ದಾಖಲಿಸಿ, ಅವರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸುವುದನ್ನು ನಿಲ್ಲಿಸದಿದ್ದರೆ ನಾಳೆ (ಮಂಗಳವಾರ) 10 ಗಂಟೆಯ ನಂತರ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ನೇರ ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ಸೋಮವಾರ ರಾಜ್ಯ ಕಾಂಗ್ರೆಸ್ ಸರ್ಕಾರವು ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಾ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ, ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ ನಂತರ ಅವರು ಎನ್‌ಡಿಎ ನಾಯಕರೊಂದಿಗೆ ಮಾಧ್ಯಮಗಳ ಜತೆ ಮಾತನಾಡಿದರು.

ಈ ವೇಳೆ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಸರ್ಕಾರವು ಎಫ್‌ಐಆರ್ ಹಾಕುವ ವಿಚಾರದಲ್ಲಿ ರಾಜಕೀಯ ಡ್ರಾಮಾವನ್ನು ನಡೆಸುತ್ತಿದೆ ಎಂದು ಖಂಡಿಸಿದರು.

ಇದು ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟವೇ ನಾಚಿಕೆಗೇಡಿನ ಪ್ರದರ್ಶನ ನಡೆಸಿದೆ. ಗೂಂಡಾ ಸರ್ಕಾರವು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದೆ. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿರುವಾಗ ಇದು ಗೂಂಡಾ ಸರ್ಕಾರವಲ್ಲದೆ ಮತ್ತೇನು ಎಂದು ಅವರು ಪ್ರಶ್ನಿಸಿದರು.

ಕಾನೂನುಬಾಹಿರ ಬಂಧನಗಳನ್ನು ತಕ್ಷಣ ನಿಲ್ಲಿಸುವಂತೆ ಮತ್ತು ಕೇಂದ್ರ ಚುನಾವಣಾ ಆಯೋಗದಿಂದ ಸ್ಪಷ್ಟನೆ ನೀಡುವಂತೆ ಮುಖ್ಯ ಚುನಾವಣಾಧಿಕಾರಿ ಅವರಿಗೆ ಮನವಿ ಮಾಡಿದ್ದೇವೆ. ಫಾರಂ-7 ಸಲ್ಲಿಕೆಯು ಕಾನೂನುಬಾಹಿರವಲ್ಲ. ಈ ಬಗ್ಗೆ ನ್ಯಾಯಾಲಯ ಸ್ಪಷ್ಟನೆ ನೀಡಿದೆ. ಸರ್ಕಾರವು ನೈಸ್, ಬಿಡದಿ ಟೌನ್ ಶಿಪ್ ಯೋಜನೆ, ಕೆಪಿಎಸ್ಸಿ ಹಗರಣಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ ಈ ಡ್ರಾಮಾ ಮಾಡುತ್ತಿದೆ ಎಂದು ಸಚಿವರು ಕಟುವಾಗಿ ಟೀಕಿಸಿದರು.

ಸರ್ಕಾರವು ಅಧಿಕಾರಿಗಳಿಗೆ ಸರಿಯಾದ ಸೂಚನೆ ನೀಡದಿದ್ದರೆ ಮತ್ತು ದಬ್ಬಾಳಿಕೆಯನ್ನು ಮುಂದುವರಿಸಿದರೆ ನಾಳೆ 10 ಗಂಟೆಯ ನಂತರ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ‌ ಎಚ್‌.ಡಿ. ಕುಮಾರಸ್ವಾಮಿ ಖಡಕ್ ಎಚ್ಚರಿಕೆ ನೀಡಿದರು.‌

ಶಿಕ್ಷಕರಿಗೆ ಬೆದರಿಕೆ ಹಾಕಿ ಅಧಿಕಾರ ದುರುಪಯೋಗ: ಸಿಎಂ ಡಿಕೆಶಿ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಮೇಲೆ ಸುಳ್ಳು ದೂರುಗಳನ್ನು ದಾಖಲಿಸಿ, ಅವರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸುವುದನ್ನು ನಿಲ್ಲಿಸಬೇಕು. ಪೊಲೀಸ್ ಇಲಾಖೆಯನ್ನು ಈ ರೀತಿ ದುರ್ಬಳಕೆ ಮಾಡಿಕೊಳ್ಳಬಾರದು. ರಾಜ್ಯ ಸರ್ಕಾರ ಈ ರೀತಿಯ ಕಾನೂನುಬಾಹಿರ ಕ್ರಮಗಳನ್ನು ಕೈಗೊಳ್ಳುವುದನ್ನು ಮುಂದುವರಿಸಿದರೆ ನಾವು ಕೈಕಟ್ಟಿ ಕೂರಲು ಸಾಧ್ಯವಿಲ್ಲ. ಅದರ ವಿರುದ್ಧ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕುವ ಚಳವಳಿ ಶುರು ಮಾಡುತ್ತೇವೆ ಎಂದು ಎಚ್ಚರಿಸಿದ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ರಾಜ್ಯದ ಐಜಿ, ಡಿಜಿ ಮತ್ತು ಕಮಿಷನರ್ ಅವರು ತಮ್ಮ ಅಧೀನದ ಅಧಿಕಾರಿಗಳಿಗೆ ಕಾನೂನುಬದ್ಧವಾಗಿ ನಡೆದುಕೊಳ್ಳಲು ಸರಿಯಾದ ಸೂಚನೆ ನೀಡಬೇಕು ಎಂದರು.