ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರಿನಲ್ಲಿ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‌ಶಿಪ್‌ಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಚಾಲನೆ

Priyank Kharge: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಆತಿಥ್ಯದಲ್ಲಿ ನಡೆಯುತ್ತಿರುವ ಈ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟವು ರಾಜ್ಯದ ಕ್ರೀಡಾ ಆತಿಥ್ಯ ಪರಂಪರೆಗೆ ಮತ್ತೊಂದು ಹೆಮ್ಮೆಯ ಗರಿ ಮೂಡಿಸಲಿದೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರು, ನ.16: ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಆತಿಥ್ಯದಲ್ಲಿ ಆಯೋಜಿಸಲಾಗಿರುವ 27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‌ಶಿಪ್ 2026–27ರ ಪಂದ್ಯಾವಳಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಸೋಮವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರ ಪೊಲೀಸ್ ಸಂಸ್ಥೆಗಳ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಈ ಕ್ರೀಡಾಕೂಟವು ಕ್ರೀಡಾಸ್ಫೂರ್ತಿ, ಪರಸ್ಪರ ಸ್ನೇಹ ಮತ್ತು ಸೌಹಾರ್ದತೆಯನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ ಎಂದು ತಿಳಿಸಿದರು.

ಈ ಚಾಂಪಿಯನ್‌ಶಿಪ್‌ನಲ್ಲಿ ದೇಶದ 17 ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶ, ಆರು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಹಾಗೂ ಮೂರು ಕೇಂದ್ರ ಪೊಲೀಸ್ ಸಂಸ್ಥೆಗಳನ್ನು ಪ್ರತಿನಿಧಿಸುವ ಒಟ್ಟು 180 ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸುತ್ತಿರುವುದು ವಿಶೇಷವಾಗಿದೆ. ಪೊಲೀಸ್ ಅಧಿಕಾರಿಗಳ ವೃತ್ತಿಪರ ಜವಾಬ್ದಾರಿಗಳ ಜತೆಗೆ ಅವರ ದೈಹಿಕ ಕ್ಷಮತೆ, ಮಾನಸಿಕ ಆರೋಗ್ಯ ಮತ್ತು ಕ್ರೀಡಾಸಕ್ತಿಯನ್ನು ಉತ್ತೇಜಿಸುವಲ್ಲಿ ಇಂತಹ ಪಂದ್ಯಾವಳಿಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು.‌

Home Minister Priyank Kharge

ಕರ್ನಾಟಕ ರಾಜ್ಯವು ಈ ಪ್ರತಿಷ್ಠಿತ ಚಾಂಪಿಯನ್‌ಶಿಪ್‌ಗೆ ಆತಿಥ್ಯ ವಹಿಸುತ್ತಿರುವುದು ಹೆಮ್ಮೆಯ ಸಂಗತಿ. ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆ (KSLTA) ಹಾಗೂ ಕಂಠೀರವ ಕ್ರೀಡಾಂಗಣದಲ್ಲಿ ಪಂದ್ಯಾವಳಿಗಳು ನಡೆಯಲಿದ್ದು, ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಪೊಲೀಸ್ ಕ್ರೀಡಾಪಟುಗಳಿಗೆ ಉತ್ತಮ ಆತಿಥ್ಯ ಮತ್ತು ಕ್ರೀಡಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

All India Police Lawn Tennis Championship

ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುತ್ತಿರುವ ಎಲ್ಲ ತಂಡಗಳು ಹಾಗೂ ಕ್ರೀಡಾಪಟುಗಳಿಗೆ ಅಭಿನಂದಿಸಿ, ಕ್ರೀಡಾಸ್ಫೂರ್ತಿಯಿಂದ ಸ್ಪರ್ಧಿಸಿ ಉತ್ತಮ ಪ್ರದರ್ಶನ ನೀಡುವಂತೆ ಶುಭಕೋರಿದೆ ಎಂದು ಹೇಳಿದರು.

ಸಿಎಂ ನೂತನ ಅಧಿಕೃತ ನಿವಾಸ ʼಗಂಗಾʼ ಗೃಹ ಪ್ರವೇಶ; ಹೊಸ್ತಿಲು ಪೂಜೆ, ಹಾಲು ಉಕ್ಕಿಸುವ ಶಾಸ್ತ್ರ ನೆರವೇರಿಸಿದ ಡಿ.ಕೆ.ಶಿವಕುಮಾರ್ ದಂಪತಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಆತಿಥ್ಯದಲ್ಲಿ ನಡೆಯುತ್ತಿರುವ ಈ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟವು ರಾಜ್ಯದ ಕ್ರೀಡಾ ಆತಿಥ್ಯ ಪರಂಪರೆಗೆ ಮತ್ತೊಂದು ಹೆಮ್ಮೆಯ ಗರಿ ಮೂಡಿಸಲಿದೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.