ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Hubballi Love Jihad case: ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣದ ಸಮಗ್ರ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

Pralhad Joshi: ರಾಜ್ಯ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ಮತ್ತು ಸಡಿಲ ಕ್ರಮಗಳಿಂದಾಗಿ ಲವ್ ಜಿಹಾದ್‌ನಂತಹ ಪ್ರಕರಣಗಳಿಗೆ ಇಂಬು ನೀಡುವಂತಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್ ಪ್ರಕರಣ ಇಡೀ ಸಮಾಜ ತಲೆ ತಗ್ಗಿಸುವಂಥದ್ದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (ಸಂಗ್ರಹ ಚಿತ್ರ)

ಹುಬ್ಬಳ್ಳಿ, ಏ.7: ನಗರದಲ್ಲಿ ನಡೆದ ಲವ್ ಜಿಹಾದ್ ಪ್ರಕರಣವನ್ನು (Hubballi Love Jihad case) ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಂಗಳವಾರ ಸಂಜೆ ಸಂತ್ರಸ್ತೆ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಧೈರ್ಯ- ಸ್ಥೈರ್ಯ ತುಂಬಿದ ಸಚಿವರು, ಸರ್ಕಾರ ಶೀಘ್ರವೇ ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ಮತ್ತು ಸಡಿಲ ಕ್ರಮಗಳಿಂದಾಗಿ ಲವ್ ಜಿಹಾದ್‌ನಂತಹ ಪ್ರಕರಣಗಳಿಗೆ ಇಂಬು ನೀಡುವಂತಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್ ಪ್ರಕರಣ ಇಡೀ ಸಮಾಜ ತಲೆ ತಗ್ಗಿಸುವಂಥದ್ದು ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು. ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣದ ಪರಿಣಾಮವಾಗಿಯೇ ರಾಜ್ಯದಲ್ಲಿ ಇಂತಹ ಘಟನೆಗಳು ಸಂಭವಿಸುತ್ತಿದ್ದು, ಸಮಾಜ ವಿದ್ರೋಹಿ ಶಕ್ತಿಗಳಿಗೆ ಕಾನೂನಿನ ಯಾವುದೇ ಭಯವಿಲ್ಲದಂತಾಗಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

ಲೋಕಸಭೆ ಕ್ಷೇತ್ರ ಪುನರ್‌ ವಿಂಗಡಣೆ ಎಲ್ಲ ರಾಜ್ಯಗಳಲ್ಲೂ ಶೇಕಡಾವಾರು ಜನಸಂಖ್ಯೆ ಆಧಾರಿತ: ಪ್ರಲ್ಹಾದ್‌ ಜೋಶಿ

ಸಂತ್ರಸ್ಥೆಯ ಚಿತ್ರ, ವೀಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರ ಮೇಲೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ ಅವರು, ಭವಿಷ್ಯದಲ್ಲಿ ಎಲ್ಲೂ ಇಂಥ ಪ್ರಕರಣ ಮರುಕಳಿಸದಂತೆ ಬಿಗಿ ಕ್ರಮ ಕೈಗೊಳ್ಳಲೂ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.