ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

​ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣ ವಿರೋಧಿಸಿ ಜುಲೈ 16ಕ್ಕೆ ಬೃಹತ್‌ ಪ್ರತಿಭಟನೆ: ಬೊಮ್ಮಾಯಿ

Basavaraj Bommai: ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣ, ಕೋಮು ಸೌಹಾರ್ದತೆ ಕೆಡಿಸುವ ಸಂಚು ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ವಿರುದ್ಧ ಬರುವ ಜುಲೈ 16ರಂದು ಹಾವೇರಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಕೊಲೆಯಾದ ಶಿವಾಜಿರಾವ್ ಬೈರೋಜಿ ಮನೆಗೆ ಬಸವರಾಜ ಬೊಮ್ಮಾಯಿ ಭೇಟಿ.

ಹಾವೇರಿ, ಜು.6: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಜಿಲ್ಲಾಡಳಿತ ತನ್ನ ಹಿಡಿತವನ್ನು ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಕೊಲೆಯಾದ ಶಿವಾಜಿರಾವ್ ಬೈರೋಜಿ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಭರತ್ ಮತ್ತು ಅವರ ತಂದೆ ಕಳೆದ 60 ವರ್ಷಗಳಿಂದ ಅಲ್ಲಿ ವ್ಯಾಪಾರ ಮಾಡಿಕೊಂಡಿದ್ದಾರೆ. ಮೊಟ್ಟೆ ಕೇಳಲು ಬಂದು, ಹಣದ ವಿಚಾರವಾಗಿ ಗಲಾಟೆ ಮಾಡಿದ್ದು ಕೇವಲ ಒಂದು ಸಣ್ಣ ಕಾರಣವಷ್ಟೇ. ಆದರೆ ಇದರ ಹಿಂದಿನ ಅಸಲಿ ಉದ್ದೇಶ ಅವರನ್ನು ಅಲ್ಲಿಂದ ಒಕ್ಕಲೆಬ್ಬಿಸಿ, ಅಲ್ಲಿರುವ ಎಲ್ಲಾ ಅಂಗಡಿಗಳನ್ನು ತಮ್ಮ ವಶಕ್ಕೆ ಪಡೆಯುವುದಾಗಿದೆ ಎಂದು ಅವರು ಆರೋಪಿಸಿದರು.

ಜಿಲ್ಲೆಯಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸುವ ದುರುದ್ದೇಶ ಇಟ್ಟುಕೊಳ್ಳಲಾಗಿದೆ ಎಂದು ದೂರಿದ ಅವರು, ಇಂತಹ ಶಕ್ತಿಗಳಿಗೆ ದೊಡ್ಡ ಪ್ರಮಾಣದಲ್ಲಿ ರಾಜಕೀಯ ಬೆಂಬಲ ಮತ್ತು ಕುಮ್ಮಕ್ಕು ಸಿಗುತ್ತಿರುವುದರಿಂದಲೇ ಇಷ್ಟೊಂದು ಧೈರ್ಯ ಬಂದಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಸಣ್ಣ ಕೋಮು ಗಲಭೆಯೂ ನಡೆದಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಹಾವೇರಿ ಜಿಲ್ಲೆಯಲ್ಲಿ 7-8 ಗಂಭೀರ ಪ್ರಕರಣಗಳು ನಡೆದಿವೆ ಎಂದು ಹೇಳಿದರು.

ಕೋಮು ಸೌಹಾರ್ದತೆಗೆ ಹೆಸರಾಗಿದ್ದ ಜಿಲ್ಲೆಯಲ್ಲಿ ಶಾಂತಿ ಕದಡುತ್ತಿರುವ ಶಕ್ತಿಗಳನ್ನು ಮಟ್ಟಹಾಕದಿದ್ದರೆ ಇಂತಹ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ. ಹೀಗಾಗಿ ಇದರ ವಿರುದ್ಧ ದೊಡ್ಡ ಮಟ್ಟದ ಜಾಗೃತಿ ಹಾಗೂ ಪ್ರತಿಭಟನೆ ನಡೆಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಜುಲೈ 16ರಂದು ಬೃಹತ್ ಪ್ರತಿಭಟನೆ

ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣ, ಕೋಮು ಸೌಹಾರ್ದತೆ ಕೆಡಿಸುವ ಸಂಚು ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ವಿರುದ್ಧ ಬರುವ ಜುಲೈ 16ರಂದು ಹಾವೇರಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಈ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಇಂತಹ ಕೃತ್ಯ ಎಸಗುವವರು ಯಾರೇ ಇರಲಿ, ಯಾವ ಪಕ್ಷಕ್ಕೆ ಸೇರಿರಲಿ, ಮುಲಾಜಿಲ್ಲದೆ ಜೈಲಿಗಟ್ಟಬೇಕು. ಪೊಲೀಸರು ಹಾಗೂ ಸರ್ಕಾರ ತಪ್ಪಿತಸ್ಥರಿಗೆ ಪಾಠ ಕಲಿಸದಿದ್ದರೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳಿಗೇ ಇದು ಕುತ್ತಾಗಿ ಪರಿಣಮಿಸಲಿದೆ ಮತ್ತು ಸರ್ಕಾರಕ್ಕೆ ದೊಡ್ಡ ಕೆಟ್ಟ ಹೆಸರು ಬರಲಿದೆ ಎಂದರು.

SIR in Karnataka: ರಾಜ್ಯ ಸರಕಾರದಿಂದ SIR ದುರುಪಯೋಗ; ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಜೆಡಿಎಸ್‌-ಬಿಜೆಪಿ ನಿಯೋಗ ದೂರು

ಈ ಸಂದರ್ಭದಲ್ಲಿ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕ ಅರುಣಕುಮಾರ ಪೂಜಾರ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಮುಖಂಡರು ಹಾಜರಿದ್ದರು.