ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Karnataka By-Election Results: 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ: ಬಿ.ವೈ. ವಿಜಯೇಂದ್ರ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮಂಗಳವಾರ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣದ ನಮ್ಮ ಅಭ್ಯರ್ಥಿ ಉತ್ತಮವಾದ ಮತಗಳನ್ನು ಪಡೆದಿದ್ದಾರೆ. ನಮಗೆ ಈ ಬಾರಿ ಅದೃಷ್ಟ ಕೈ ಹಿಡಿಯಲಿಲ್ಲ. ಆದರೆ ಕಾಂಗ್ರೆಸ್ ಹಣದ ಹೊಳೆ ಹರಿಸಿದ ಬಗ್ಗೆ ನಾನೇನು ಮಾತಾಡೋದಿಲ್ಲ. ಅಭ್ಯರ್ಥಿ ಜತೆ ಅಕಾಂಕ್ಷಿಗಳು ಕೂಡ ಉತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ.

ದಾವಣಗೆರೆ, ಮೇ 5: ಬಿಜೆಪಿಯ ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra)‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉಪಚುನಾವಣೆಯಲ್ಲಿ ಸೋಲಿನ ಪರಾಮರ್ಶೆ ಹಾಗೂ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಮನೆಗೆ ಭೇಟಿ ನೀಡಿದ ಅವರು, ಜಿಲ್ಲಾ ಬಿಜೆಪಿ ನಾಯಕರ ಜತೆ ದಾವಣಗೆರೆಯಲ್ಲಿ ಪಕ್ಷ ಸಂಘಟನೆ ಚರ್ಚೆ ನಡೆಸಿದರು. 63000 ಮತ ನೀಡಿದ ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.

ಸಾಮಾನ್ಯ ಕಾರ್ಯಕರ್ತ ಇಷ್ಟೊಂದು ಮತ ಪಡೆದಿರುವುದು ಸುಲಭ ಅಲ್ಲ. ಆಗುವುದೆಲ್ಲ ಒಳ್ಳೆಯದಕ್ಕೆ ಎಂದು ಆತ್ಮವಿಶ್ವಾಸ ತುಂಬಿದರು. ವಿಜಯೇಂದ್ರ ಅವರು ಸಮಾಧಾನ ಪಡಿಸುವ ವೇಳೆ ಶ್ರೀನಿವಾಸ್ ದಾಸಕರಿಯಪ್ಪ ಭಾವುಕರಾದರು. ಅವರನ್ನು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮಾಧಾನಪಡಿಸಿದರು.

ಶ್ರೀನಿವಾಸ್ ಅವರ ಮನೆಯಲ್ಲಿ ವಿಜಯೇಂದ್ರ ಅವರು ದೋಸೆ ಸವಿದರು. ಉಪಚುನಾವಣೆಯ ಫಲಿತಾಂಶ ನಮ್ಮ ಕಣ್ಣ ಮುಂದೆ ಇದೆ. ಸಾಕಷ್ಟು ನಿರೀಕ್ಷೆಗಳನ್ನು ನಾವು ಇಟ್ಟುಕೊಂಡಿದ್ದೆವು ಎಂದ ಅವರು, ಎರಡು ಕ್ಷೇತ್ರದ ಕಾರ್ಯಕರ್ತರು ಬಿಜೆಪಿ ಗೆಲ್ಲಿಸಲು ಶ್ರಮ ವಹಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ದಾವಣಗೆರೆ ದಕ್ಷಿಣದ ನಮ್ಮ ಅಭ್ಯರ್ಥಿ ಉತ್ತಮವಾದ ಮತಗಳನ್ನು ಪಡೆದಿದ್ದಾರೆ. ನಾವು 70 ಸಾವಿರಕ್ಕೂ ಹೆಚ್ಚು ಮತಗಳು ಬೀಳುತ್ತವೆ ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದೆವು. ನಮಗೆ ಈ ಬಾರಿ ಅದೃಷ್ಟ ಕೈ ಹಿಡಿಯಲಿಲ್ಲ. ಆದರೆ ಕಾಂಗ್ರೆಸ್ ಹಣದ ಹೊಳೆ ಹರಿಸಿದ ಬಗ್ಗೆ ನಾನೇನು ಮಾತಾಡೋದಿಲ್ಲ. ಅಭ್ಯರ್ಥಿ ಜತೆ ಅಕಾಂಕ್ಷಿಗಳು ಕೂಡ ಉತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಚಿತ್ರದುರ್ಗದಲ್ಲಿ ಅಭಿಮಾನೋತ್ಸವ; ಮೇ 8ರಂದು ಮಿನಿ ದಸರಾ ಮಾದರಿಯಲ್ಲಿ ಬಿ.ಎಸ್.ಯಡಿಯೂರಪ್ಪ ಪುರಪ್ರವೇಶ

ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿಯವರು, ಅಮಿತ್ ಶಾ ಅವರ ಶ್ರಮದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಅದೇ ರೀತಿ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ವಿಜಯೇಂದ್ರ ಅವರ ಜತೆ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಸೇರಿದಂತೆ ಹಲವು ನಾಯಕರು ಆಗಮಿಸಿದ್ದರು.