ಬೆಂಗಳೂರು, ಫೆ.28: ಶಾಸಕರು ದೆಹಲಿಗೆ ಹೋಗುವುದೂ ಗೊತ್ತಿಲ್ಲ. ಫಾರಿನ್‌ಗೆ ಹೋಗುವುದೂ ಗೊತ್ತಿಲ್ಲ. ಈ ಬಗ್ಗೆ ನನ್ನನ್ನು ಯಾರೂ ಕೇಳಿಯೂ ಇಲ್ಲ, ಈ ವಿಚಾರದಲ್ಲಿ ನಾನು ಬಾಯಿ ಹಾಕುವುದೂ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು. ನಗರದ ಚಿತ್ರಕಲಾ ಪರಿಷತ್ತಿನ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಪ್ರಸಕ್ತ ರಾಜಕೀಯ ಬೆಳಣಿಗೆಗಳು, ಶಾಸಕರು ದೆಹಲಿ ಪ್ರವಾಸ ಹೋಗುವುದಾಗಿ ಹೇಳಿರುವ ಬಗ್ಗೆ ಕೇಳಿದಾಗ ಅವರು ಹೀಗೆ ಉತ್ತರಿಸಿದರು.
ಅಣ್ಣನ ಹಣೆಬರಹದಲ್ಲಿ ಬರೆದಿದ್ದರೆ ಮುಖ್ಯಮಂತ್ರಿ ಆಗುವರು ಎನ್ನುವ ಸಹೋದರ ಡಿ.ಕೆ. ಸುರೇಶ್ ಅವರ ಮಾತಿನ ಬಗ್ಗೆ ಕೇಳಿದಾಗ, ʼಎಲ್ಲರೂ ಅದೇ ರೀತಿ ಹೇಳುತ್ತಾರೆ. ನಾನೇನು ಆ ಸುದ್ದಿಯನ್ನು ಮಾತನಾಡಿಲ್ಲವಲ್ಲʼ ಎಂದು ಹೇಳಿದರು.
ನಿಮ್ಮ ಪರವಾಗಿ ಜನರು, ಬೆಂಬಲಿಗರು, ಶಾಸಕರು ಮಾತನಾಡುತ್ತಿದ್ದಾರೆ ಎಂದು ಕೇಳಿದಾಗ, ʼ139 ಜನ ಶಾಸಕರು ಸೇರಿ ಮುಖ್ಯಮಂತ್ರಿಯವರು ನನ್ನ ಬೆಂಬಲಕ್ಕೆ ಇದ್ದೇ ಇದ್ದಾರೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಡಿ.ಕೆ. ಶಿವಕುಮಾರ್
ಬೆಂಗಳೂರು: ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಖಾಸಗಿ ಹೋಟೆಲ್ ಹಾಗೂ ಅರಮನೆ ಮೈದಾನದ ಗಾಯತ್ರಿ ವಿಹಾರ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಅವರು ಪ್ರತಿಕ್ರಿಯೆ ನೀಡಿದರು. ಗುರುವಾರದಂದು ಸಭೆ ಸೇರಿದ್ದ ಸಚಿವರು, ಶಾಸಕರು ದೆಹಲಿಗೆ ಹೋಗಿ ನಿಮ್ಮ ಪರವಾಗಿ ಮನವಿ ಮಾಡುತ್ತಾರಂತೆ ಎಂದು ಕೇಳಿದಾಗ, ‘ದಯವಿಟ್ಟು ಬೇಡ ಎಂದು ಮನವಿ ಮಾಡುತ್ತೇನೆ. ನಿಮ್ಮ ಸಮಸ್ಯೆಗಳು ಇದ್ದರೆ, ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರೆ, ಅಧಿಕಾರ, ಹುದ್ದೆ ಬೇಕು ಎಂದರೆ ಹೋಗಿ ಮನವಿ ಮಾಡಿಕೊಳ್ಳಿ. ನನ್ನ ವಿಚಾರಕ್ಕೆ ಹೋಗುವುದು ಬೇಡ’ ಎಂದು ಹೇಳಿದರು.
ಯಾವ ಶಕ್ತಿ ಪ್ರದರ್ಶನ ಇಲ್ಲ
ಬಾಲಕೃಷ್ಣ ಅವರ ಜನ್ಮದಿನದ ಹೆಸರಿನಲ್ಲಿ 40ಕ್ಕೂ ಹೆಚ್ಚು ಶಾಸಕರು ಸೇರಿದ್ದು, ಶಕ್ತಿ ಪ್ರದರ್ಶನ ಮಾಡಲಾಗುತ್ತಿದೆ ಎಂದು ಕೇಳಿದಾಗ, ʼಯಾವ ಶಕ್ತಿ ಪ್ರದರ್ಶನವೂ ಇಲ್ಲ. ಕೆಲವರು ವಿಶ್ರಾಂತಿ, ಅಧ್ಯಯನಕ್ಕೆ ವಿದೇಶಕ್ಕೆ ಹೋಗುತ್ತಾರೆ. ಕೆಲವರು ದೆಹಲಿಗೆ ಹೋದರೆ, ಮತ್ತೆ ಕೆಲವರು ಭೋಜನ ಕೂಟ ಸೇರುತ್ತಾರೆ. ಅವರ ವೈಯಕ್ತಿಕ ವಿಚಾರಕ್ಕೂ ಪಕ್ಷಕ್ಕೂ ಸಂಬಂಧವಿಲ್ಲʼ ಎಂದು ತಿಳಿಸಿದರು.
2028ರ ವೇಳೆಗೆ ಸುಮಾರು 50 ಸಾವಿರ ವಿದ್ಯಾರ್ಥಿಗಳಿಗೆ ಎವಿಜಿಸಿ- ಎಕ್ಸ್‌ಆರ್ ತರಬೇತಿ ಗುರಿ: ಡಿ.ಕೆ. ಶಿವಕುಮಾರ್
ನಾವು ಹಳಬರಾಗಿದ್ದೇವೆ, ಹೊಸಬರು ಮಂತ್ರಿಯಾಗುವ ಆಸೆ ಹೊಂದಿದ್ದಾರೆ
ನೀವು ಸಿಎಂ ಆಗಬೇಕು ಎಂದು ಕೆಲಸ ಶಾಸಕರು ಹೇಳಿಕೆ ನೀಡಿದ್ದಾರೆ ಎಂದು ಕೇಳಿದಾಗ, ʼಈ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಜತೆ ಅವರು ಯಾರು ಮಾತನಾಡಿಲ್ಲ. ಕೆಲವರು ಆಸೆ ಇಟ್ಟುಕೊಂಡಿದ್ದಾರೆ. ಹೊಸಬರಿಗೆ ಮಂತ್ರಿ ಆಗುವ ಆಸೆ ಇರುತ್ತದೆ. ನಾನು, ಪರಮೇಶ್ವರ್, ಎಚ್.ಕೆ. ಪಾಟೀಲ್, ಮಹದೇವಪ್ಪ, ಸಿದ್ದರಾಮಯ್ಯ ಸೇರಿದಂತೆ ನಾವು ಈಗ ಹಳಬರಾದೆವು. ಚಿಕ್ಕ ವಯಸ್ಸಿನಲ್ಲೇ ಮಂತ್ರಿಯಾದವರು. ಈಗ ಹೊಸಬರು ಮಂತ್ರಿ ಆಗಬೇಕು ಎಂಬ ಆಸೆ ವ್ಯಕ್ತಪಡಿಸುತ್ತಿದ್ದಾರೆ. ನೋಡೋಣ, ನಾನು ಈ ವಿಚಾರವನ್ನು ದೆಹಲಿ ಅವರ ಗಮನಕ್ಕೆ ತರುತ್ತೇನೆʼ ಎಂದು ತಿಳಿಸಿದರು.
ಸಿರಿವಂತರು ಗ್ಯಾರಂಟಿ ಯೋಜನೆ ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ? ಡಿ.ಕೆ. ಶಿವಕುಮಾರ್ ಪ್ರಶ್ನೆ
ವಿವಿಧ ಹುದ್ದೆಗಳ ನೇಮಕಾತಿಗೆ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿರುವ ಬಗ್ಗೆ ಕೇಳಿದಾಗ, ʼನಾವು ಹೊಸ ಮೀಸಲಾತಿ ಮಾಡಿದ್ದರೂ 2022ರ ನ್ಯಾಯಾಲಯ ಆದೇಶ ಅನುಸಾರ ಹಳೆ ಮೀಸಲಾತಿ ಮೇಲೆ ಮೊದಲ ಹಂತದಲ್ಲಿ 56 ಸಾವಿರ ನೇಮಕಾತಿ ಮಾಡಲು ತೀರ್ಮಾನ ಮಾಡಲಾಗಿದೆ. ಉದ್ಯೋಗ ನೇಮಕಾತಿ ಮಾಡುವುದಾಗಿ ನಾವು ಯುವಕರಿಗೆ ಮಾತು ನೀಡಿದ್ದು, ನಾವು ಅದರಂತೆ ನೇಮಕಾತಿ ಮಾಡುತ್ತೇವೆ. 1 ಲಕ್ಷಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಬೇಕು. ಎಲ್ಲವನ್ನು ಏಕ ಕಾಲಕ್ಕೆ ಮಾಡಿದರೆ ಕೆಲವರಿಗೆ ಅವಕಾಶ ಸಿಗುವುದಿಲ್ಲ ಎಂದು ಹಂತ ಹಂತವಾಗಿ ಮಾಡಲಾಗುವುದು. ನ್ಯಾಯಾಲಯಕ್ಕೆ ತಲೆಬಾಗಿ ಕಾನೂನಿನಲ್ಲಿ ಇರುವ ಅವಕಾಶವನ್ನು ಬಳಸಿಕೊಂಡು ನೇಮಕಾತಿ ಮಾಡುತ್ತೇವೆ. 2.84 ಲಕ್ಷ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ತುಂಬಲಾಗುವುದುʼ ಎಂದು ತಿಳಿಸಿದರು.