ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಹಿಳಾ ಮೀಸಲಾತಿ ಕಾಯ್ದೆ ವಿರೋಧಿಸಲು ಸಜ್ಜಾದ ವಿಪಕ್ಷಗಳ ಇಂಡಿಯಾ ಒಕ್ಕೂಟ

ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸಲು ಸಜ್ಜಾಗುತ್ತಿದ್ದು, ಇದನ್ನು ವಿರೋಧಿಸಲು ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ಸಿದ್ಧತೆ ನಡೆಸಿದೆ. ವಿರೋಧ ಪಕ್ಷಗಳು ಮಹಿಳಾ ಮೀಸಲಾತಿಯನ್ನು ಬೆಂಬಲಿಸುತ್ತದೆ. ಆದರೆ ಕೇಂದ್ರ ಸರ್ಕಾರದ ಪ್ರಸ್ತಾವಿತ ಪುನರ್ವಿಂಗಡಣೆ ಮಸೂದೆಯನ್ನು ವಿರೋಧಿಸುತ್ತಿರುವುದಾಗಿ ಹೇಳಿದೆ. ಈ ಮಸೂದೆಯನ್ನು ಜಾರಿಗೊಳಿಸಲು ಸರ್ಕಾರ ಒರಟಾಗಿ ವರ್ತಿಸುತ್ತಿದೆ ಎಂದು ದೂರಿದೆ.

ಸಂಗ್ರಹ ಚಿತ್ರ

ನವದೆಹಲಿ: ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು (women's reservation bill) ಒದಗಿಸಲು ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಲು ವಿರೋಧ ಪಕ್ಷಗಳ ಬಣ ಇಂಡಿಯಾ ಒಕ್ಕೂಟ (INDIA bloc) ಸಜ್ಜಾಗಿದೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ. ಆದರೆ ಸರ್ಕಾರದ ಒರಟಾದ ನಡೆಯನ್ನು ನಾವು ವಿರೋಧಿಸುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ( Congress president Mallikarjun Kharge) ಹೇಳಿದರು. ಬುಧವಾರ ವಿಪಕ್ಷಗಳ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರವು ಸಂವಿಧಾನ ತಿದ್ದುಪಡಿ ಮಸೂದೆಗಳನ್ನು ದುರುಪಯೋಗ ಪಡಿಸುತ್ತಿದೆ ಎಂದು ಆರೋಪಿಸಿದ ಅವರು, ವಿರೋಧ ಪಕ್ಷಗಳು ಮಹಿಳಾ ಮೀಸಲಾತಿಯನ್ನು ಬೆಂಬಲಿಸುತ್ತದೆ. ಆದರೆ ಸರ್ಕಾರದ ಪ್ರಸ್ತಾವಿತ ಪುನರ್ವಿಂಗಡಣೆ ಮಸೂದೆಯನ್ನು ವಿರೋಧಿಸುತ್ತವೆ ಎಂದು ಹೇಳಿದರು.

ಅಕ್ಷಯ ತೃತೀಯ ಶಾಪಿಂಗ್‌ಗೂ ಮುನ್ನ ಗಮನದಲ್ಲಿಟ್ಟುಕೊಳ್ಳಬೇಕಾದ ಸಂಗತಿಗಳಿವು

ಮಹಿಳೆಯರಿಗೆ ಸಂಸತ್ತಿನಲ್ಲಿ ಶೇ. 33ರಷ್ಟು ಮೀಸಲಾತಿಯನ್ನು ಖಚಿತಪಡಿಸಿಕೊಳ್ಳಲು ಸಂವಿಧಾನ ತಿದ್ದುಪಡಿ ಮಸೂದೆಗಳೊಂದಿಗೆ ಸರ್ಕಾರವು ಒರಟಾಗಿ ವರ್ತಿಸುತ್ತಿದೆ ಎಂದ ಅವರು, ನಾವು ಮಹಿಳಾ ಮೀಸಲಾತಿಯನ್ನು ವಿರೋಧಿಸುವುದಿಲ್ಲ. ಆದರೆ ಅದನ್ನು ಜಾರಿಗೆ ತರುವ ವಿಧಾನವನ್ನು ವಿರೋಧಿಸುತ್ತೇವೆ. ಇದು ರಾಜಕೀಯ ಪ್ರೇರಿತವಾಗಿದೆ. ಹೀಗಾಗಿ ವಿರೋಧ ಪಕ್ಷಗಳ ಬಣ ಪುನರ್ವಿಂಗಡಣೆ ಮಸೂದೆಯನ್ನು ವಿರೋಧಿಸಲು ನಿರ್ಧರಿಸಿದೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಬುಧವಾರ ನಡೆದ ಕಾರ್ಯತಂತ್ರ ಸಭೆಯಲ್ಲಿ ಎಎಪಿ, ಆರ್‌ಜೆಡಿ, ಟಿಎಂಸಿ ಮತ್ತು ಡಿಎಂಕೆ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದವು. ಈ ವೇಳೆ ಮಾತನಾಡಿದ ಖರ್ಗೆ, ವಿರೋಧ ಪಕ್ಷಗಳನ್ನು ಹತ್ತಿಕ್ಕಲು ಮತ್ತು ನಿಗ್ರಹಿಸಲು, ಸರ್ಕಾರ ಇದನ್ನು ಮಾಡುತ್ತಿದೆ ಎಂದು ಹೇಳಿದರು.

2023ರಲ್ಲಿ ಅಂಗೀಕರಿಸಲ್ಪಟ್ಟ ನಾರಿ ಶಕ್ತಿ ವಂದನ್ ಅಧಿನಿಯಮ್ ಮಸೂದೆಯನ್ನು ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರ ಮೂರು ದಿನಗಳ ಅಧಿವೇಶನದಲ್ಲಿ ಮೂರು ತಿದ್ದುಪಡಿ ಮಸೂದೆಗಳನ್ನು ಪರಿಚಯಿಸಲಿದೆ. ಇದರಲ್ಲಿ ವಿವಾದಕ್ಕೆ ಕಾರಣವಾಗಿರುವುದು ಡಿಲಿಮಿಟೇಶನ್ ಮಸೂದೆ. ಇದು ಇತ್ತೀಚಿನ ಜನಗಣತಿ ಅಂಕಿಅಂಶಗಳ ಆಧಾರದ ಮೇಲೆ ಕ್ಷೇತ್ರ ಗಡಿಗಳನ್ನು ಮರುರೂಪಿಸಲು ಕೇಂದ್ರವು ಆಯೋಗವನ್ನು ಸ್ಥಾಪಿಸಲು ಅನುವು ಮಾಡಿಕೊಡುತ್ತದೆ. ಇದರೊಂದಿಗೆ ಸಂವಿಧಾನ 131ನೇ ಮಸೂದೆಯಡಿ ಲೋಕಸಭೆಯ ಒಟ್ಟು ಬಲವನ್ನು ಪ್ರಸ್ತುತ 543 ರಿಂದ 850 ಕ್ಕೆ ಹೆಚ್ಚಿಸುವ ಪ್ರಸ್ತಾಪವಿದೆ. ಇದರಲ್ಲಿ 273 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡುವ ಕುರಿತು ಪ್ರಸ್ತಾಪ ಮಾಡಲಾಗಿದೆ.

ಅಮೆರಿಕಕ್ಕೆ ಅನಿವಾಸಿ ಭಾರತೀಯರ ಕೊಡುಗೆ ಅಪಾರ: ಭಾರತೀಯ ಮೂಲದ ಅತ್ತೆ-ಮಾವಂದಿರನ್ನು ಕೊಂಡಾಡಿದ ಜೆಡಿ ವ್ಯಾನ್ಸ್

2023ರಲ್ಲಿ ಸಂಸತ್ತು ಅಂಗೀಕರಿಸಿರುವ 2027 ರ ಜನಗಣತಿಯ ಆಧಾರದ ಮೇಲೆ ಮಹಿಳಾ ಮೀಸಲಾತಿಯು 2034 ರಲ್ಲಿ ಜಾರಿಗೆ ಬರಬೇಕಿತ್ತು. ಆದರೆ ಕೇಂದ್ರ ಸರ್ಕಾರವು ತಾರಾತುರಿಯಾಗಿ ಇದನ್ನು 2029 ರ ಚುನಾವಣೆಗೆ ಮೊದಲೇ ಅನುಷ್ಠಾನಗೊಳಿಸಲು ಸಜ್ಜಾಗಿದೆ. ಇದನ್ನು ವಿರೋಧ ಪಕ್ಷಗಳು ಆಕ್ಷೇಪಿಸುತ್ತಿವೆ.

ವಿದ್ಯಾ ಇರ್ವತ್ತೂರು

View all posts by this author