ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

S Jaishankar: ಎಸ್.ಜೈಶಂಕರ್‌ರನ್ನು ಟಾರ್ಗೆಟ್ ಮಾಡಿದ ಕಾಂಗ್ರೆಸ್ ನಾಯಕ; ರಾಹುಲ್ ಗಾಂಧಿಯದ್ದು ‘ಪಾಕಿಸ್ತಾನದ ಭಾಷೆ’ ಎಂದ ಬಿಜೆಪಿ

S Jaishankar; ಆಪರೇಷನ್ ಸಿಂದೂರ್ ನಲ್ಲಿ ಭಾರತ ಕಳೆದುಕೊಂಡ ವಿಮಾನಗಳ ಸಂಖ್ಯೆಯ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರ “ಗಂಭೀರ ಮೌನ”ವನ್ನು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟೀಕಿಸಿದ ನಂತರ, ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಮವಾರ ತಿರುಗೇಟು ನೀಡಿದೆ. ರಾಹುಲ್ ಗಾಂಧಿಯವರು “ಪಾಕಿಸ್ತಾನದ ಭಾಷೆ”ಯಲ್ಲಿ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಜೈಶಂಕರ್ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತಿರುಗೇಟು

ಎಸ್.ಜೈಶಂಕರ್

Profile Sushmitha Jain May 19, 2025 10:27 PM

ನವದೆಹಲಿ: ಆಪರೇಷನ್ ಸಿಂದೂರ್ ನಲ್ಲಿ (Operation Sindoor) ಭಾರತ ಕಳೆದುಕೊಂಡ ವಿಮಾನಗಳ ಸಂಖ್ಯೆಯ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ (S Jaishankar) ಅವರ “ಗಂಭೀರ ಮೌನ”ವನ್ನು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಟೀಕಿಸಿದ ನಂತರ, ಭಾರತೀಯ ಜನತಾ ಪಕ್ಷ (ಬಿಜೆಪಿ) (BJP)ಸೋಮವಾರ ತಿರುಗೇಟು ನೀಡಿದೆ. ರಾಹುಲ್ ಗಾಂಧಿಯವರು “ಪಾಕಿಸ್ತಾನದ ಭಾಷೆ”ಯಲ್ಲಿ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಬಿಜೆಪಿಯಿಂದ ರಾಹುಲ್‌ಗೆ ತಿರುಗೇಟು

ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, “ರಾಹುಲ್ ಗಾಂಧಿಯವರು ಸತ್ಯವನ್ನು ವಿಕೃತಗೊಳಿಸುವುದನ್ನು ನಿಲ್ಲಿಸಬೇಕು” ಎಂದು ಕರೆ ನೀಡಿದ್ದಾರೆ. ಜೊತೆಗೆ, ಮೇ 11, 2025ರಂದು ಸೇನೆಯ ಸಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಅವರು ನೀಡಿದ ಹೇಳಿಕೆಯನ್ನು ಮತ್ತೆ ಪೋಸ್ಟ್ ಮಾಡಿದ್ದಾರೆ. ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ, ರಾಹುಲ್ ಗಾಂಧಿಯ ಆರೋಪಗಳನ್ನು ಪಾಕಿಸ್ತಾನದ ಜಿಯೋ ನ್ಯೂಸ್ ಟಿವಿಯಲ್ಲಿ ಪ್ರಸಾರ ಮಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಹುಲ್ ಗಾಂಧಿ ಮತ್ತು ಪಾಕಿಸ್ತಾನವು “ಒಂದೇ ಭಾಷೆ”ಯಲ್ಲಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಹುಲ್ ಗಾಂಧಿಯ ಆರೋಪ ಏನು?

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸೋಮವಾರ ವಿದೇಶಾಂಗ ಸಚಿವ ಜೈಶಂಕರ್ ಅವರ ವಿರುದ್ಧ ಹೊಸದಾಗಿ ಆಕ್ರಮಣ ಆರಂಭಿಸಿದ್ದಾರೆ. ಜೈಶಂಕರ್ ಮೌನವಾಗಿರುವುದನ್ನು ಟೀಕಿಸಿದ ಅವರು, ಪಿಐಬಿ ಫ್ಯಾಕ್ಟ್ ಚೆಕ್ ಪರಿಶೀಲನೆಯಲ್ಲಿ ಈ ಆರೋಪಗಳನ್ನು ತಳ್ಳಿಹಾಕಿದ್ದರೂ ರಾಹುಲ್ ಗಾಂಧಿ ಆರೋಪಗಳನ್ನು ಮಾಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ರಾಹುಲ್ ಗಾಂಧಿ, “ವಿದೇಶಾಂಗ ಸಚಿವ ಜೈಶಂಕರ್ ಅವರ ಮೌನವು ಕೇವಲ ಸ್ಪಷ್ಟವಾಗಿಲ್ಲ, ಅದು ಗಂಭೀರವಾಗಿದೆ. ಆದ್ದರಿಂದ ಮತ್ತೆ ಕೇಳುತ್ತೇನೆ ಭಾರತ ಎಷ್ಟು ವಿಮಾನಗಳನ್ನು ಕಳೆದುಕೊಂಡಿದೆ?” ಎಂದಿದ್ದಾರೆ. “ಇದು ತಪ್ಪಲ್ಲ, ಇದು ಅಪರಾಧ. ರಾಷ್ಟ್ರವು ಸತ್ಯವನ್ನು ತಿಳಿಯಲು ಅರ್ಹವಾಗಿದೆ,” ಎಂದು ರಾಹುಲ್ ಹೇಳಿದ್ದಾರೆ.

ಈ ಸುದ್ದಿಯನ್ನು ಓದಿ: Viral Video: ಕಪ್ಪೆ ತಿಂದ ಮುಂಬೈ ಫುಡ್ ವ್ಲಾಗರ್; ನೆಟ್ಟಿಗರ ರಿಯಾಕ್ಷನ್‌ ಹೇಗಿತ್ತು?

ಆಪರೇಷನ್ ಸಿಂದೂರ್ ನಲ್ಲಿ ಭಾರತದ ಪ್ರತಿಕ್ರಿಯೆಯ ಪ್ರಾರಂಭವನ್ನು ವಿದೇಶಾಂಗ ಸಚಿವರು ಪಾಕಿಸ್ತಾನಕ್ಕೆ ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ಪ್ರತಿಕ್ರಿಯೆಯಾಗಿ, ವಿದೇಶಾಂಗ ಸಚಿವಾಲಯವು ಕಾಂಗ್ರೆಸ್ ಸಂಸದರು ಸತ್ಯವನ್ನು ತಿರುಚಿದ್ದಾರೆ ಎಂದು ಆರೋಪಿಸಿದೆ. ವಿದೇಶಾಂಗ ಸಚಿವಾಲಯದ ಬಾಹ್ಯ ಪ್ರಚಾರ ವಿಭಾಗ ನೀಡಿದ ಸಂಕ್ಷಿಪ್ತ ಹೇಳಿಕೆಯಲ್ಲಿ, “ವಿದೇಶಾಂಗ ಸಚಿವರು, ಆಪರೇಷನ್ ಸಿಂಧೂರ್ ಆರಂಭವಾದ ನಂತರದ ಆರಂಭಿಕ ಹಂತದಲ್ಲಿ ನಾವು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದೇವೆ ಎಂದು ಹೇಳಿದ್ದಾರೆ. ಇದನ್ನು ಕಾರ್ಯಾಚರಣೆ ಆರಂಭವಾಗುವ ಮೊದಲೇ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ಈ ಸಂಪೂರ್ಣ ತಪ್ಪು ಹೇಳಿಕೆಯನ್ನು ಖಂಡಿಸಲಾಗುತ್ತದೆ” ಎಂದು ತಿಳಿಸಿದೆ.