ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

10 ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ: ಸಿಎಂ ಸಿದ್ದರಾಮಯ್ಯ

CM Siddaramaiah: ವಿರೋಧಪಕ್ಷದವರು ರಾಜಕಾರಣಕ್ಕಾಗಿ ಸುಳ್ಳನ್ನೇ ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಮೂಲಸೌಕರ್ಯ ಕಾಮಗಾರಿಗಳಿಗೆ ಸರ್ಕಾರದಲ್ಲಿ ಅನುದಾನವಿಲ್ಲ ಎಂದು ಎಲ್ಲೆಡೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರ ದಿವಾಳಿಯಾಗಿದ್ದರೆ ಜೇವರ್ಗಿ ಮತಕ್ಷೇತ್ರ ಒಂದರಲ್ಲಿ 906 ಕೋಟಿಗಳನ್ನು ವೆಚ್ಚ ಮಾಡಲಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜಕಾರಣಕ್ಕಾಗಿ ಸುಳ್ಳನ್ನು ಹೇಳುವ ವಿರೋಧ ಪಕ್ಷಗಳು: ಸಿಎಂ ಸಿದ್ದರಾಮಯ್ಯ

ಯಡ್ರಾಮಿಯಲ್ಲಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. -

Profile
Siddalinga Swamy Jan 12, 2026 6:21 PM

ಕಲಬುರಗಿ, ಜ.12: ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಲಬುರಗಿ ಇವರ ಸಹಯೋಗದಲ್ಲಿ ಕೆಪಿಎಸ್ ಶಾಲಾ ಆವರಣ ಯಡ್ರಾಮಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಜಾಸೌಧ, ಕೆಪಿಎಸ್ ಶಾಲೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ, ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಿ, ಬಳಿಕ ಅವರು ಮಾತನಾಡಿದರು.

ನೂತನವಾಗಿ ಘೋಷಣೆಯಾಗಿರುವ ಯಡ್ರಾಮಿ ತಾಲೂಕಿನಲ್ಲಿ, ಜೇವರ್ಗಿ ಮತಕ್ಷೇತ್ರದಲ್ಲಿ 87 ಕಾಮಗಾರಿಗಳ ಕಾಮಗಾರಿಗಳನ್ನು 867.49 ಕೋಟಿ ವೆಚ್ಚದ, 38.29 ಕೋಟಿ ವೆಚ್ಚ ಕಾಮಗಾರಿಗಳಿಗೆ ಉದ್ಘಾಟನೆ ಮಾಡಲಾಗಿದೆ. ಒಟ್ಟಾರೆ 906 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ ಎಂದು ತಿಳಿಸಿದರು.

ರಾಜಕಾರಣಕ್ಕಾಗಿ ಸುಳ್ಳನ್ನು ಹೇಳುವ ವಿರೋಧ ಪಕ್ಷಗಳು

ವಿರೋಧಪಕ್ಷದವರು ರಾಜಕಾರಣಕ್ಕಾಗಿ ಸುಳ್ಳನ್ನೇ ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಮೂಲಸೌಕರ್ಯ ಕಾಮಗಾರಿಗಳಿಗೆ ಸರ್ಕಾರದಲ್ಲಿ ಅನುದಾನವಿಲ್ಲ ಎಂದು ಎಲ್ಲೆಡೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರ ದಿವಾಳಿಯಾಗಿದ್ದರೆ ಜೇವರ್ಗಿ ಮತಕ್ಷೇತ್ರ ಒಂದರಲ್ಲಿ 906 ಕೋಟಿಗಳನ್ನು ವೆಚ್ಚ ಮಾಡಲಾಗುತ್ತಿರಲಿಲ್ಲ ಎಂದರು.

CM Siddaramaiah: ಅಭಿಯೋಜಕರ ಅಕಾಡೆಮಿ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ರೈತರ ಪರವಾದ ಸರ್ಕಾರ

ಈ ಬಾರಿ ಮಳೆ ಹೆಚ್ಚಾಗಿ ಬೆಳೆ ಹಾನಿಯಾಗಿರುವುದರಿಂದ ವೈಮಾನಿಕ ಸಮೀಕ್ಷೆ ಕೈಗೊಂಡು ಪರಿಶೀಲಿಸಿ ಪರಿಹಾರ ಕೊಡಲು ನಿರ್ಧರಿಸಿ ಎಸ್ ಡಿ.ಆರ್.ಎಫ್ ನಿಂದ 1218 ಕೋಟಿ ಜತೆಗೆ ಸರ್ಕಾರದ ವತಿಯಿಂದ ಒಟ್ಟು 1031 ಕೋಟಿ ಹೆಚ್ಚುವರಿಯಾಗಿ ಒದಗಿಸಲಾಗಿದೆ. ರಾಜ್ಯದಲ್ಲಿ ಒಟ್ಟು 14.21 ಲಕ್ಷ ರೈತರ ಬೆಳೆ ಹಾನಿಯಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ 7,21,786 ರೈತರ ಬೆಳೆ ಹಾನಿಗೊಳಗಾಗಿದೆ. 1072 ಕೋಟಿ ಬೆಳೆ ಹಾನಿಗೆ ಪರಿಹಾರ ನೀಡಿದೆ. ಕಲಬುರ್ಗಿ ಜಿಲ್ಲೆಯಲ್ಲಿ 3,23,318 ರೈತರ ಬೆಳೆ ಹಾನಿಯಾಗಿದ್ದು 498 ಕೋಟಿ ಪರಿಹಾರ ನೀಡಲಾಗಿದೆ ಎಂದರು.

ರೈತರ ಖಾತೆಗಳಿಗೆ ಅನುದಾನವನ್ನು ತಲುಪಿಸುವ ಕೆಲಸ ಮಾಡಿದ್ದೇವೆ. ರೈತರ ಸಹಾಯಕ್ಕೆ ಸರ್ಕಾರ ಸದಾ ಮುಂದಾಗಿದೆ. ನೆಟ್ಟೆ ರೋಗಕ್ಕೆ ತುತ್ತಾದ ತೊಗರಿ ಬೆಳೆಗೆ 233 ಕೋಟಿ ರೂ. ಗಳನ್ನು ಒದಗಿಸಲಾಗಿದೆ. ಕಬ್ಬಿನ ಬೆಲೆ ಕಡಿಮೆ ಎಂದು ರೈತರು ಪ್ರತಿಭಟಿಸಿದಾಗ ಅವರ ನೆರವಿಗೆ ಸರ್ಕಾರ ಧಾವಿಸಿ ಸರ್ಕಾರದಿಂದ 50 ಹಾಗೂ ಕಾರ್ಖಾನೆಯಿಂದ 50 ರೂ. ನಿಗದಿ ಮಾಡಿ 300 ಕೋಟಿಗಳನ್ನು ಸರ್ಕಾರದಿಂದ ಕಬ್ಬಿನ ಬೆಳೆಗಾರರಿಗೆ ನೀಡಲಾಗಿದೆ ಎಂದರು.

371 ಜೆ ಜಾರಿಯಲ್ಲಿ ಬಿಜೆಪಿಯ ಪಾತ್ರವಿಲ್ಲ

ಬಿಜೆಪಿ ಕೇವಲ ಸುಳ್ಳು ಆರೋಪಗಳನ್ನು ಮಾತ್ರ ಮಾಡುತ್ತದೆ. 371 ಜೆ ಜಾರಿಯಾಗಿದ್ದರೆ ಅದಕ್ಕೆ ಕಾರಣ ಮಲ್ಲಿಕಾರ್ಜುನ ಖರ್ಗೆ, ಧರ್ಮ ಸಿಂಗ್ ಅವರು ಕಾರಣ. ಇದರಲ್ಲಿ ಬಿಜೆಪಿಯ ಪಾತ್ರವಿಲ್ಲ ಎಂದರು. ಬಿಜೆಪಿ ಬೊಗಳೆದಾಸರು, ಸುಳ್ಳು ಹೇಳುವುದು, ಅಪಪ್ರಚಾರ ಬಿಟ್ಟರೆ ಬೇರೇನೂ ಮಾಡುವುದಿಲ್ಲ ಎಂದು ಆರೋಪಿಸಿದರು.

ಅಸಮಾನತೆ ಹೋಗಲಾಡಿಸಲು ನಂಜುಂಡಪ್ಪ ಅವರ ವರದಿಯನ್ನು ಆಧರಿಸಿ ಶಿಫಾರಸ್ಸುಗಳನ್ನು ಜಾರಿಗೆ ತರಲಾಗಿದೆ. ಇದರ ಪರಿಣಾಮಗಳ ಬಗ್ಗೆ ವರದಿ ಸಲ್ಲಿಸಲು ಗೋವಿಂದ ರಾವ್ ಸಮಿತಿ ರಚಿಸಲಾಗಿದೆ. ಶೀಘ್ರದಲ್ಲಿ ವರದಿಯ ಶಿಫಾರಸುಗಳನ್ನು ಜಾರಿ ಮಾಡಲಾಗುವುದು ಎಂದರು.

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಲಕ್ಷ್ಮಿ ಹೆಬ್ಬಾಳ್ಕರ್

ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರು, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್, ಸಚಿವರಾದ ಪ್ರಿಯಾಂಕ ಖರ್ಗೆ, ಕೃಷ್ಣಭೈರೇಗೌಡ, ಶರಣಬಸಪ್ಪ ದರ್ಶನಾಪುರ, ಶರಣ ಪ್ರಕಾಶ್ ಪಾಟೀಲ್, ಮಧು ಬಂಗಾರಪ್ಪ, ರಹೀಂ ಖಾನ್, ಶಾಸಕರು ಉಪಸ್ಥಿತರಿದ್ದರು.