ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kalaburagi News: ಕಲಬುರಗಿಯಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಬಿ.ವೈ. ವಿಜಯೇಂದ್ರ ಭೇಟಿ

BY Vijayendra: ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಹೊನಗುಂಟದಲ್ಲಿ ಅತಿವೃಷ್ಟಿಯಿಂದ ಹಾನಿಗೆ ಒಳಗಾದ ಪ್ರದೇಶಗಳಿಗೆ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಭೇಟಿ ನೀಡಿದರು.

ಕಲಬುರಗಿಯಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಬಿ.ವೈ.ವಿ ಭೇಟಿ

-

Profile
Siddalinga Swamy Sep 30, 2025 2:50 PM

ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಹೊನಗುಂಟದಲ್ಲಿ ಅತಿವೃಷ್ಟಿಯಿಂದ ಹಾನಿಗೆ ಒಳಗಾದ ಪ್ರದೇಶಗಳಿಗೆ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ಭೇಟಿ ನೀಡಿದರು. ಇದೇ ವೇಳೆ ಅವರು ಸಂಕಷ್ಟಕ್ಕೆ ಒಳಗಾದ ರೈತರ ಸಮಸ್ಯೆ ಆಲಿಸಿ ಆತ್ಮಸ್ಥೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಶಾಸಕ ಬಸವರಾಜ ಮತ್ತಿಮೂಡ, ಮಾಜಿ ಸಂಸದ ಡಾ. ಉಮೇಶ್ ಜಾಧವ್, ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್. ಪಾಟೀಲ್ ನಡಹಳ್ಳಿ, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ್, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ್ ಪಾಟೀಲ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಜಿಲ್ಲಾ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸುದ್ದಿಯನ್ನೂ ಓದಿ | Bus Ticket Price: ದಸರಾ ದುಬಾರಿ: ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಹೆಚ್ಚಳ, ಖಾಸಗಿ ಬಸ್ಸುಗಳಲ್ಲೂ ಏರಿಕೆ

ಜಾತಿಗಣತಿ ವಿಷಯದಲ್ಲಿ ಗೊಂದಲ ಮೂಡಿಸುತ್ತಿದೆ ರಾಜ್ಯ ಸರ್ಕಾರ, ಕಾಂಗ್ರೆಸ್ ಹೈಕಮಾಂಡ್: ಗೋವಿಂದ ಕಾರಜೋಳ

ಕಲಬುರಗಿ: ಜಾತಿ ಗಣತಿ ವಿಷಯದಲ್ಲಿ ನಾವು ಗೊಂದಲ ಸೃಷ್ಟಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಮತ್ತು ಕಾಂಗ್ರೆಸ್ ಹೈಕಮಾಂಡ್ ಗೊಂದಲ ಮೂಡಿಸುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ (Govinda Karajola) ಆರೋಪಿಸಿದರು. ಮಂಗಳವಾರ ಕಲಬುರಗಿಯಲ್ಲಿ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಕ್ರಿಶ್ಚಿಯನ್ ಲಿಂಗಾಯತರು ಇದ್ದಾರಾ? ಜೈನ ಪಂಚಮಸಾಲಿ ಇದ್ದಾರಾ? ಕ್ರಿಶ್ಚಿಯನ್ ದಲಿತರು ಇದ್ದಾರಾ? ಎಂದು ಪ್ರಶ್ನಿಸಿದರು.

ಕ್ರಿಶ್ಚಿಯನ್ ದಲಿತರು ಎನ್ನಬೇಡಿ; ಯಾವುದೇ ವ್ಯಕ್ತಿ ಧರ್ಮಾಂತರ ಆದರೆ, ಧರ್ಮಾಂತರ ಆದ ದಿನದಿಂದ ಅವನ ಪೂರ್ವಾಶ್ರಮದ ಹಂಗು ಇರುವುದಿಲ್ಲ. ಪೂರ್ವಾಶ್ರಮದ ಸಂಬಂಧ ಕಡಿದುಹೋಗುತ್ತದೆ ಎಂದು ತಿಳಿಸಿದರು. ಧರ್ಮಾಂತರ ಆದರೆ, ಕ್ರಿಶ್ಚಿಯನ್ ಆದರೆ ಕ್ರಿಶ್ಚಿಯನ್, ಇಸ್ಲಾಂಗೆ ಆಗಿದ್ದರೆ ಇಸ್ಲಾಂ ಧರ್ಮ ಇರುತ್ತದೆ ಎಂದು ಹೇಳಿದರು.

ಆರ್ಥಿಕ, ಶೈಕ್ಷಣಿಕ ಕಾಳಜಿ ಇದ್ದರೆ 2013ರಿಂದ 2018ರವರೆಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿದ್ದರು. ಕಾಂತರಾಜು ಅವರನ್ನು ನೇಮಿಸಿ ವರದಿ ತೆಗೆದುಕೊಂಡರು. 180 ಕೋಟಿ ಖರ್ಚು ಮಾಡಿದ ಆ ವರದಿ ಏನಾಗಿದೆ? ಕಸದ ಬುಟ್ಟಿಗೆ ಹಾಕಿದ್ದಾರೆ ಎಂದು ಟೀಕಿಸಿದರು.

ನಾವು ದಾರಿ ತಪ್ಪಿಸುತ್ತಿಲ್ಲ. ಸಿದ್ದರಾಮಯ್ಯನವರು- ಕಾಂಗ್ರೆಸ್ ಪಕ್ಷ ದಾರಿ ತಪ್ಪಿಸುತ್ತಿವೆ. ಆವತ್ತು ಜಾತಿಗಳ ಅಂಕಿ ಸಂಖ್ಯೆ ಬಿಡುಗಡೆ ಮಾಡಿದ್ದರು. ಗೌಪ್ಯವಾಗಿ ಇಡಬೇಕಾದ ಅಂಕಿ ಅಂಶವನ್ನು ಯಾಕೆ ಗೌಪ್ಯವಾಗಿಡಲಿಲ್ಲ? ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಪ್ರಶ್ನಿಸಿದರು.

ಈ ಸುದ್ದಿಯನ್ನೂ ಓದಿ | Bengaluru traffic: ವರ್ಕ್‌ ಫ್ರಂ ಹೋಮ್‌ ಅಂತ್ಯ, ನಾಳೆಯಿಂದ ಬೆಂಗಳೂರಿನಲ್ಲಿ ಟ್ರಾಫಿಕ್‌ ದುಪ್ಪಟ್ಟು