ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Winter Session: ಕೆಳಮನೆಯಲ್ಲಿ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಅಂಗೀಕಾರ

DK Shivakumar: ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಜಿಬಿಎ ಮೂಲಕ ಐದು ಪಾಲಿಕೆಗಳನ್ನು ಮಾಡಲಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದಲ್ಲಿ ಬಿಬಿಎಂಪಿ ಮೇಯರ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರು ಎಂಬುದನ್ನು ಗ್ರೇಟರ್ ಬೆಂಗಳೂರಿನ ವಿವಿಧ ನಗರ ಪಾಲಿಕೆಯ ಹೆಸರುಗಳನ್ನು ಸೇರಿಸಿ ಬದಲಾವಣೆ ಮಾಡಲಾಗುತ್ತಿದೆ. ಇದರ ಹೊರತಾಗಿ ಬೇರೆ ಯಾವುದೇ ಬದಲಾವಣೆ ಇಲ್ಲ. ಕಾನೂನು ಪ್ರಕಾರ ಇದನ್ನು ಮಾಡಲೇಬೇಕಾಗಿರುವ ಕಾರಣ ಈ ತಿದ್ದುಪಡಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೆಳಮನೆಯಲ್ಲಿ ಬೆಂಗಳೂರು ಭೂಸಾರಿಗೆ ಪ್ರಾಧಿಕಾರ ಮಸೂದೆ ಅಂಗೀಕಾರ

ಡಿಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ) -

Profile
Siddalinga Swamy Dec 17, 2025 7:58 PM

ಬೆಳಗಾವಿ, ಡಿ.17: ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ (Karnataka Winter Session) ಅಂಗೀಕರಿಸಲಾಯಿತು. 2025ನೇ ಸಾಲಿನ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿ, ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಬುಧವಾರ ಮಾತನಾಡಿದರು.

ಜಿಬಿಎ ಮೂಲಕ ಐದು ಪಾಲಿಕೆಗಳನ್ನು ಮಾಡಲಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದಲ್ಲಿ ಬಿಬಿಎಂಪಿ ಮೇಯರ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರು ಎಂಬುದನ್ನು ಗ್ರೇಟರ್ ಬೆಂಗಳೂರಿನ ವಿವಿಧ ನಗರ ಪಾಲಿಕೆಯ ಹೆಸರುಗಳನ್ನು ಸೇರಿಸಿ ಬದಲಾವಣೆ ಮಾಡಲಾಗುತ್ತಿದೆ. ಇದರ ಹೊರತಾಗಿ ಬೇರೆ ಯಾವುದೇ ಬದಲಾವಣೆ ಇಲ್ಲ. ಕಾನೂನು ಪ್ರಕಾರ ಇದನ್ನು ಮಾಡಲೇಬೇಕಾಗಿರುವ ಕಾರಣ ಈ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್‌ಗಳಿಗೆ ಆಯುಷ್ಯವಿಲ್ಲ: ಡಿಕೆಶಿ

ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿ: ಗ್ರೇಟರ್ ಬೆಂಗಳೂರು ಆಡಳಿತ (2ನೇ ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ) ಮಂಡಿಸಿ ಮಾತನಾಡಿದರು.

ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ, ಚಿಕ್ಕಬಳ್ಳಾಪುರದ ಸಂಸದ ಸುಧಾಕರ್ ಅವರ ಕ್ಷೇತ್ರದ ಕೆಲವು ಭಾಗ ಪಾಲಿಕೆ ವ್ಯಾಪ್ತಿಗೆ ಬರುತ್ತಿವೆ. ಜತೆಗೆ ಜಿಬಿಎ ಸದಸ್ಯರ ಪಟ್ಟಿಯಲ್ಲಿ ಪಾಲಿಕೆ ವ್ಯಾಪ್ತಿಯ ನಿವಾಸಿಯಾಗಿರುವ ಜನಪ್ರತಿನಿಧಿಗಳ ಹೆಸರು ಬಿಟ್ಟು ಹೋಗಿದ್ದು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಪರಿಷತ್ ಸದಸ್ಯರನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸಲು ಈ ತಿದ್ದುಪಡಿ ತರಲಾಗಿದೆ. ಇನ್ನು ಮುಖ್ಯಮಂತ್ರಿಗಳೇ ಜಿಬಿಎ ಮುಖ್ಯಸ್ಥರಾಗಿರುವ ಹಿನ್ನೆಲೆಯಲ್ಲಿ ಮುಖ್ಯಕಾರ್ಯದರ್ಶಿಗಳು ಹಾಗೂ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರ ಹೆಸರು ಸೇರಿಸಲಾಗಿದೆ. ಹಣಕಾಸು ಇಲಾಖೆ ಕಾರ್ಯದರ್ಶಿಗಳನ್ನು ಈ ಸದಸ್ಯರ ಸಮಿತಿಯಲ್ಲಿ ಸೇರಿಸಲು ನಿರ್ಧರಿಸಲಾಗಿದೆ.

ಇತ್ತೀಚೆಗೆ ನಡೆದ ಜಿಬಿಎ ಮೊದಲ ಸಭೆಯಲ್ಲಿ ನಾವು ಈ ವಿಚಾರವನ್ನು ಗಮನಿಸಿದೆವು. ವಿರೋಧ ಪಕ್ಷದ ಸದಸ್ಯರು ತಮ್ಮ ರಾಜಕೀಯ ನಿಲುವಿನಿಂದಾಗಿ ಈ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಹೀಗಾಗಿ ನಾವು ಈ ತಿದ್ದುಪಡಿ ತಂದು ಇವರುಗಳನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸಲಾಗುತ್ತಿದೆ ಎಂದು ತಿಳಿಸಿದರು.

ವಿಪಕ್ಷದ ಸಲಹೆಯಂತೆ ಜಿಬಿಎ ನಾಮನಿರ್ದೇಶಿತ ಸದಸ್ಯತ್ವವನ್ನು ಕೈಬಿಡುತ್ತೇವೆ

ಈ ವೇಳೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಮಾತನಾಡಿ, ʼಈಗಾಗಲೇ 369 ಪಾಲಿಕೆ ಸದಸ್ಯರಿರುತ್ತಾರೆ. ಸರ್ಕಾರ 20 ಸಾವಿರ ಜನರಿಗೆ ಒಬ್ಬ ನಾಮನಿರ್ದೇಶಿತ ಸದಸ್ಯರನ್ನಾಗಿ ಮಾಡಿದರೆ, ಮತ್ತೆ 369 ಮಂದಿ ಸದಸ್ಯರು ಬರುತ್ತಾರೆ. ಇದು ಯಾವ ರೀತಿ ಸೂಕ್ತ ಎಂಬ ಗೊಂದಲ ಜನರಲ್ಲಿದೆʼ ಎಂದು ಕೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ʼಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಯಾವುದೇ ರೀತಿಯ ಚುನಾವಣೆ ನಡೆಯುವುದಿಲ್ಲ. ಇದು ರಾಜ್ಯಮಟ್ಟದ ಸಂಸ್ಥೆಯಾಗಿದೆ. ಈ ವಿಚಾರವಾಗಿ ಸದ್ಯಕ್ಕೆ ಸಮಸ್ಯೆ ಬರುವುದಿಲ್ಲ. ಮುಂದೆ ಹೊಸ ಪ್ರದೇಶವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಂಡಾಗ ಆ ಭಾಗದಲ್ಲಿ 6 ತಿಂಗಳ ಒಳಗಾಗಿ ಚುನಾವಣೆ ನಡೆಸಬೇಕಾಗುತ್ತದೆ. ಈ ಪ್ರದೇಶದಲ್ಲಿ ಯಾರಾದರೂ ಪಂಚಾಯ್ತಿ ಸದಸ್ಯನಾಗಿದ್ದರೆ, ಅವರಿಗೆ ಇದರಲ್ಲಿ ಮತದಾನದ ಹಕ್ಕು ಬರುವುದಿಲ್ಲ. ಈ ಬದಲಾವಣೆಯ ಹಂತದಲ್ಲಿ ಆ ಪ್ರದೇಶವನ್ನು ಪ್ರತಿನಿಧಿಸಲು ಒಂದು ಅವಕಾಶ ಕಲ್ಪಿಸಿದ್ದೇವೆ. ಇದು ಅಗತ್ಯವಿಲ್ಲ, ಬೇಡ ಎಂದರೆ ಇದನ್ನು ತೆಗೆದುಹಾಕಲು ಸಿದ್ಧವಿದ್ದೇನೆ. ನಿಮ್ಮ ಸಲಹೆಯಂತೆ ನಾಮನಿರ್ದೇಶಿತ ಸದಸ್ಯರ ಸೇರ್ಪಡೆಯನ್ನು ಕೈಬಿಡುತ್ತೇನೆʼ ಎಂದರು.

ಜನಪ್ರತಿನಿಧಿಗಳಿಗೆ ಒಂದೇ ಕಡೆ ಮತದಾನದ ಹಕ್ಕು ಇರಬೇಕು

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ʼರಾಜ್ಯಸಭೆ ಹಾಗೂ ವಿಧಾನ ಪರಿಷತ್ತಿನ ಚುನಾಯಿತ ಪ್ರತಿನಿಧಿಗಳು ಒಂದೊಂದು ನಗರ ಸಭೆ, ಪುರಸಭೆಗಳಿಗೆ ಬದಲಾವಣೆ ಮಾಡಿಕೊಂಡು ಹೋಗುತ್ತಿರುತ್ತಾರೆ. ಬೆಂಗಳೂರು ಪಾಲಿಕೆ ಚುನಾವಣೆ, ಬಳ್ಳಾರಿ ನಗರಸಭೆ ಚುನಾವಣೆ, ಬೀದರ್‌ನಲ್ಲಿ ನಡೆಯುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೋಗಿ ಮತ ಚಲಾಯಿಸುತ್ತಾರೆ. ಇದು ನಕಲಿ ಮತದಾನದಂತಾಗುತ್ತದೆ. ಹೀಗಾಗಿ ಅವರು ಯಾವುದಾದರೂ ಒಂದು ಕಡೆ ಐದು ವರ್ಷ ತಮ್ಮ ಮತದಾನದ ಅಧಿಕಾರ ಹೊಂದಿರಬೇಕುʼ ಎಂದು ತಿಳಿಸಿದರು.

ಇದಕ್ಕೆ ಸ್ಪಷ್ಟನೆ ನೀಡಿದ ಡಿ.ಕೆ. ಶಿವಕುಮಾರ್, ʼನಾನು ವಿರೋಧ ಪಕ್ಷದ ನಾಯಕರ ಸಲಹೆಯನ್ನು ಒಪ್ಪುತ್ತೇನೆ. ಯಾರೇ ಆದರೂ ಒಂದೇ ಕಡೆ ಮತ ಹಾಕುವಂತಾಗಬೇಕು. ಆದರೆ ಜಿಬಿಎ ಚುನಾಯಿತ ಸಂಸ್ಥೆಯಲ್ಲʼ ಎಂದು ತಿಳಿಸಿದರು.

ಜಾಲಹಳ್ಳಿ ಅಂಡರ್‌ ಪಾಸ್ ಕಾಮಗಾರಿ; ವಿಪಕ್ಷ ನಾಯಕರ ಅಧ್ಯಕ್ಷತೆಯಲ್ಲಿ ಸಭೆ ಎಂದ ಡಿ.ಕೆ. ಶಿವಕುಮಾರ್

ಈ ವೇಳೆ ಮಾತನಾಡಿದ ಸಿಎಂ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರೆಡ್ಡಿ, ʼಈ ರೀತಿ ಮಾಡಲು ಜನಪ್ರತಿನಿಧಿಗಳ ಕಾಯ್ದೆ ಇದಕ್ಕೆ ಅವಕಾಶ ನೀಡುವುದಿಲ್ಲ. ವಿಳಾಸ ಬದಲಾವಣೆ ಮಾಡಿದರೆ, ನಾನು ಆ ಭಾಗದ ಮತದಾರನಾಗುತ್ತೇನೆ. ಹೀಗಾಗಿ ಜನಪ್ರತಿನಿಧಿಗಳ ಕಾಯ್ದೆಯನ್ನು ಪರಿಶೀಲಿಸಿ ತೀರ್ಮಾನಕ್ಕೆ ಬನ್ನಿʼ ಎಂದರು.‌