ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka Budget 2026: ಕನ್ನಡಿಗರಿಗೆ ಖಾಲಿ ಚೊಂಬು; ರಾಜ್ಯ ಬಜೆಟ್‌ ವಿರುದ್ಧ ಬಿಜೆಪಿ ನಾಯಕರ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಖಾಲಿ ಚೊಂಬಿನಂತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಶುಕ್ರವಾರ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಲಾಯಿತು. ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ ಎಂಬ ಪೋಸ್ಟರ್ ಹಿಡಿದು ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಪ್ರಮುಖರು ಕೈಯಲ್ಲಿ ಖಾಲಿ ಚೊಂಬನ್ನು ಪ್ರತಿಭಟನೆಯ ವೇಳೆ ಪ್ರದರ್ಶಿಸಿದರು.

ರಾಜ್ಯ ಬಜೆಟ್‌ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ರಾಜ್ಯ ಬಜೆಟ್‌ ಖಂಡಿಸಿ, ಬಿಜೆಪಿಯಿಂದ ಪ್ರತಿಭಟನೆ -

Profile
Siddalinga Swamy Mar 6, 2026 4:20 PM

ಬೆಂಗಳೂರು, ಮಾ.6: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮಂಡಿಸಿದ ರಾಜ್ಯ ಬಜೆಟ್ (Karnataka Budget 2026) ಖಾಲಿ ಚೊಂಬಿನಂತಿದೆ ಎಂದು ರಾಜ್ಯ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಬಜೆಟ್‌ ವಿರುದ್ಧ ಬಿಜೆಪಿ ವತಿಯಿಂದ (BJP Protest) ಶುಕ್ರವಾರ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಲಾಯಿತು. ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ ಎಂಬ ಪೋಸ್ಟರ್ ಹಿಡಿದು ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಪ್ರಮುಖರು ಕೈಯಲ್ಲಿ ಖಾಲಿ ಚೊಂಬನ್ನು ಪ್ರತಿಭಟನೆಯ ವೇಳೆ ಪ್ರದರ್ಶಿಸಿದರು.

ಯುವಕರಿಗೆ ಮೋಸ ಮಾಡಿದ ಸರ್ಕಾರಕ್ಕೆ ಧಿಕ್ಕಾರ, 3 ವರ್ಷದಲ್ಲಿ ಮೂರೂವರೆ ಲಕ್ಷ ಕೋಟಿ ಸಾಲ ಮಾಡಿದ ಸರ್ಕಾರಕ್ಕೆ ಧಿಕ್ಕಾರ, ಬಜೆಟ್ಟಂತೆ ಬಜೆಟ್ ಖಾಲಿ ಚೊಂಬಿನ ಬಜೆಟ್- ಎಂಬಿತ್ಯಾದಿ ಘೋಷಣೆಗಳನ್ನು ಕೂಗಲಾಯಿತು.

ರಾಜ್ಯದ ಜನರಿಗೆ ಖಾಲಿ ಚೊಂಬು ನೀಡಿದ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ, ಕನ್ನಡಿಗರಿಗೆ ಖಾಲಿ ಚೊಂಬು ನೀಡಿದ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ, ರಾಜ್ಯದ ರೈತರಿಗೆ ಖಾಲಿ ಚೊಂಬು ಕೊಟ್ಟ ಸರ್ಕಾರಕ್ಕೆ ಧಿಕ್ಕಾರ ಎಂದು ಪ್ರತಿಭಟನೆಯಲ್ಲಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.‌

ಎಸ್‍ಸಿಪಿ, ಟಿಎಸ್‍ಪಿ ಹಣ ಗ್ಯಾರಂಟಿಗಳಿಗೆ ಬಳಸಿ ರಾಜ್ಯ ಸರ್ಕಾರದಿಂದ ದಲಿತರಿಗೆ ಮೋಸ: ಅರವಿಂದ ಬೆಲ್ಲದ್

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರ ವಿಕುಮಾರ್, ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.