ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮೆಟ್ರೋ ವಿಸ್ತರಣೆ, ಟ್ರಾಫಿಕ್‌ ಸಮಸ್ಯೆಗೆ ಬಜೆಟ್‌ನಲ್ಲಿ ಮಾಸ್ಟರ್‌ ಪ್ಲಾನ್‌

Karnataka Budget 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್‌ ಮಂಡಿಸಿದ್ದು, ಬಜೆಟ್‌ನಲ್ಲಿ ಬೆಂಗಳೂರು ನಗರಕ್ಕೆ ಬಂಪರ್‌ ಕೊಡುಗೆಯನ್ನೇ ನೀಡಿದ್ದಾರೆ. ಮೆಟ್ರೋ ವಿಸ್ತರಣೆ, 2027ರ ಅಂತ್ಯದೊಳಗೆ ಬೆಂಗಳೂರಿಗೆ ಹೊಸ ಪರಿಷ್ಕೃತ ಮಾಸ್ಟರ್‌ ಪ್ಲಾನ್‌ ಸಮಗ್ರ ಮೊಬಿಲಿಟಿ ಯೋಜನೆಯನ್ನು ಘೋಷಿಸಲಾಗಿದೆ.

ಮೆಟ್ರೋ ವಿಸ್ತರಣೆ, ಟ್ರಾಫಿಕ್‌ ಸಮಸ್ಯೆಗೆ ಬಜೆಟ್‌ನಲ್ಲಿ ಮಾಸ್ಟರ್‌ ಪ್ಲಾನ್‌

ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) -

Profile
Siddalinga Swamy Mar 6, 2026 6:54 PM

ಬೆಂಗಳೂರು, ಮಾ.6: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್‌ (Karnataka Budget 2026) ಮಂಡಿಸಿದ್ದು, ಬಜೆಟ್‌ನಲ್ಲಿ ಬೆಂಗಳೂರು ನಗರಕ್ಕೆ ಬಂಪರ್‌ ಕೊಡುಗೆಯನ್ನೇ ನೀಡಿದ್ದಾರೆ. ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ.

2027ರ ಅಂತ್ಯದೊಳಗೆ ಬೆಂಗಳೂರಿಗೆ ಹೊಸ ಪರಿಷ್ಕೃತ ಮಾಸ್ಟರ್‌ ಪ್ಲಾನ್‌ ಸಮಗ್ರ ಮೊಬಿಲಿಟಿ ಯೋಜನೆಯನ್ನು ಘೋಷಿಸಲಾಗಿದೆ. ಅದೇ ರೀತಿ, ನಮ್ಮ ಮೆಟ್ರೋದಲ್ಲಿ ಒಟ್ಟು 41 ಕಿಲೋಮೀಟರ್‌ ಹೆಚ್ಚುವರಿ ಮಾರ್ಗ ನಿರ್ಮಾಣ ನಡೆಯಲಿದೆ. 40 ಕಿಲೋಮೀಟರ್‌ ಉದ್ದದ ಸುರಂಗ ಮಾರ್ಗವನ್ನು 40,000 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಬೆಂಗಳೂರು ಉಪನಗರ ರೈಲು ಯೋಜನೆಗೆ 500 ಕೋಟಿ ಸಿಗಲಿದೆ.

ವಿಮಾನ ನಿಲ್ದಾಣ ಅಭಿವೃದ್ಧಿಗೆ 200 ಕೋಟಿ ಮಂಜೂರಾಗಿದೆ. 7 ರೈಲ್ವೆ ಮಾರ್ಗ ನಿರ್ಮಾಣಕ್ಕೆ 600 ಕೋಟಿ. ರಸ್ತೆಗಳ ದೀರ್ಘ ಕಾಲದ ಬಾಳಿಕೆಗಾಗಿ ಮುಂದಿನ ಮೂರು ವರ್ಷಗಳಲ್ಲಿ 450 ಕಿ.ಮೀ. ಗೂ ಹೆಚ್ಚು ಉದ್ದದ ರಸ್ತೆಗಳನ್ನು 3,000 ಕೋಟಿ ರೂ.ಗಳ ವೆಚ್ಚದಲ್ಲಿ ವೈಟ್‌ ಟಾಪಿಂಗ್‌ ಮಾಡಲಾಗುವುದು. ‌

Karnataka Budget 2026: ವಿತ್ತೀಯ ಶಿಸ್ತು ಉಲ್ಲಂಘಿಸಿಲ್ಲ, ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದ ಸಿಎಂ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದಟ್ಟಣೆಯನ್ನು ತಗ್ಗಿಸಲು ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (AAI) ತಾಂತ್ರಿಕ ಅಭಿಪ್ರಾಯ ಪಡೆದು ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.