ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Karnataka by-elections: ಕಾಂಗ್ರೆಸ್‌ ಪರ ಪ್ರಚಾರ; ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಲಿ ವಜಾಕ್ಕೆ ಬಿಜೆಪಿ ಒತ್ತಾಯ

Chandrashekar Nugli: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ, ಸರಕಾರಿ ನೌಕರ ಚಂದ್ರಶೇಖರ ನುಗ್ಲಿ ಅವರು ಬಾಗಲಕೋಟೆಗೆ ಮುಖ್ಯಮಂತ್ರಿಗಳು ತೆರಳಿದಾಗ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಹೀಗಾಗಿ ಅವರನ್ನು ವಜಾ ಮಾಡಬೇಕು ಎಂದು ರಾಜ್ಯ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

ಕಾಂಗ್ರೆಸ್‌ ಪರ ಪ್ರಚಾರ; ಶಿಕ್ಷಕರ ಸಂಘದ ಅಧ್ಯಕ್ಷರ ವಜಾಕ್ಕೆ ಬಿಜೆಪಿ ಒತ್ತಾಯ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಲಿ. -

Prabhakara R
Prabhakara R Apr 1, 2026 7:22 PM

ಬೆಂಗಳೂರು: ಬಾಗಲಕೋಟೆ ಉಪಚುನಾವಣೆ (Karnataka by-elections) ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ, ಸರಕಾರಿ ನೌಕರ ಚಂದ್ರಶೇಖರ ನುಗ್ಲಿ (Chandrashekar Nugli) ಅವರನ್ನು ಸೇವೆಯಿಂದ ವಜಾ ಮಾಡಬೇಕೆಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.

ಈ ಕುರಿತು ಸಿ.ಕೆ. ರಾಮಮೂರ್ತಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಅವರು ಇಂದು ಮಹಾರಾಣಿ ಕಾಲೇಜು ಸರ್ಕಲ್ ಬಳಿ ಇರುವ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದ್ದಾರೆ.

ಈ ವೇಳೆ ಮಾತನಾಡಿರುವ ಎಸ್. ಹರೀಶ್ ಅವರು, ಬಾಗಲಕೋಟೆ ಉಪ ಚುನಾವಣೆ ವೇಳೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ, ಸರಕಾರಿ ನೌಕರ ಚಂದ್ರಶೇಖರ ನುಗ್ಲಿ ಅವರು ಮುಖ್ಯಮಂತ್ರಿಗಳು ಬಂದಾಗ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈಗಲೂ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಹೀಗಾಗಿ ಅವರನ್ನು ವಜಾ ಮಾಡಬೇಕು. ಈ ಸಂಬಂಧ ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ. ಇನ್ನು ಕಾಂಗ್ರೆಸ್, ಧರ್ಮದ ಆಧಾರದಲ್ಲಿ ಚುನಾವಣೆ ನಡೆಸುತ್ತಿದೆ. ಇದು ನೀತಿಸಂಹಿತೆಯ ಉಲ್ಲಂಘನೆ ಎಂದು ಆರೋಪಿಸಿದ್ದಾರೆ.



ಪ್ರದೀಪ್ ಈಶ್ವರ್ ವಿರುದ್ಧ ಕ್ರಮಕ್ಕೆ ಆಗ್ರಹ:

ಶಾಸಕ ಪ್ರದೀಪ್ ಈಶ್ವರ್ ಅವರು ಅವಹೇಳನಕಾರಿ ಮಾತನಾಡುತ್ತಿದ್ದು, ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಇಂದು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದೇವೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರು ತಿಳಿಸಿದ್ದಾರೆ.

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆ ನಡೆಯುತ್ತಿದೆ. ಪ್ರದೀಪ್ ಈಶ್ವರ್ ಒಬ್ಬ ಹುಚ್ಚ; ಅವರು ಬಿಜೆಪಿ ನಾಯಕರನ್ನು ಕೋತಿಗಳು, ಅಯೋಗ್ಯರೆಂದು ಸಂಬೋಧಿಸಿದ್ದಾರೆ. ಅವಹೇಳನಕಾರಿ ಮಾತನಾಡಿದ್ದಾರೆ. ಇವೆಲ್ಲ ಸಂವಿಧಾನ ವಿರೋಧಿ ಮತ್ತು ನೀತಿಸಂಹಿತೆ ಉಲ್ಲಂಘನೆಯಾಗಿದೆ. ಹೀಗಾಗಿ ಪ್ರದೀಪ್ ಈಶ್ವರ್ ವಿರುದ್ಧ ಕ್ರಮ ಕೈಗೊಂಡು ಅವರನ್ನು ಅಲ್ಲಿಂದ ಹೊರಕ್ಕೆ ಕಳಿಸುವಂತೆ ಒತ್ತಾಯಿಸಿದ್ದೇವೆ. ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ ರೂಪಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.