ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Cabinet Meeting: ಕಾರಾಗೃಹ ಇಲಾಖೆಯ ಆಧುನೀಕರಣಕ್ಕೆ ಮತ್ತಷ್ಟು ವೇಗ; ಅತ್ಯಾಧುನಿಕ ಉಪಕರಣಗಳ ಖರೀದಿಗೆ ಸಚಿವ ಸಂಪುಟ ಒಪ್ಪಿಗೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ ನಡೆದಿದೆ. ಈ ವೇಳೆ ಕಾರಾಗೃಹ ಇಲಾಖೆಯಲ್ಲಿ AI ಕ್ಯಾಮೆರಾ, ಪೋರ್ಟಬಲ್‌ ಜಾಮರ್‌ ಸೇರಿದಂತೆ ಅತ್ಯಾಧುನಿಕ ಉಪಕರಣಗಳ ಅಳವಡಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಬೆಂಗಳೂರು, ಆಗಸ್ಟ್‌ 21: ರಾಜ್ಯದ ಕಾರಾಗೃಹ ಇಲಾಖೆಯನ್ನು ಆಧುನಿಕ ತಂತ್ರಜ್ಞಾನ ಆಧಾರಿತವಾಗಿ ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಅತ್ಯಾಧುನಿಕ ಉಪಕರಣಗಳ ಖರೀದಿ ಮತ್ತು ಅಳವಡಿಕೆಗೆ ಸಚಿವ ಸಂಪುಟ ಅನುಮೋದನೆ (Cabinet Meeting) ನೀಡಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ದೊರೆತಿದ್ದು, ಕಾರಾಗೃಹಗಳ ಭದ್ರತೆ, ಮೇಲ್ವಿಚಾರಣೆ ಹಾಗೂ ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸುವುದು ಸರ್ಕಾರದ ಉದ್ದೇಶವಾಗಿದೆ.

ಕಾರಾಗೃಹಗಳಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಕ್ಯಾಮೆರಾಗಳು, ಪೋರ್ಟಬಲ್‌ ಸಿಗ್ನಲ್‌ ಜಾಮರ್‌ಗಳು ಹಾಗೂ ಕೈದಿಗಳ ದೂರವಾಣಿ ಕರೆ ವ್ಯವಸ್ಥೆ (Prisoner Calling System) ಸೇರಿದಂತೆ ಹಲವು ಆಧುನಿಕ ಉಪಕರಣಗಳನ್ನು ಅಳವಡಿಸಲಾಗುವುದು. ಇದರಿಂದ ಅನಧಿಕೃತ ಚಟುವಟಿಕೆಗಳನ್ನು ತಡೆಗಟ್ಟಲು ಹಾಗೂ ಭದ್ರತಾ ಮೇಲ್ವಿಚಾರಣೆಯನ್ನು ಪರಿಣಾಮಕಾರಿಗೊಳಿಸಲು ನೆರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

“ಬದಲಾಗುತ್ತಿರುವ ಸವಾಲುಗಳಿಗೆ ಅನುಗುಣವಾಗಿ ಕಾರಾಗೃಹ ಇಲಾಖೆಯಲ್ಲೂ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸುವುದು ಅಗತ್ಯ. ಸುರಕ್ಷತೆ ಮತ್ತು ಮೇಲ್ವಿಚಾರಣೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ,” ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ನಾವು ಚರ್ಚೆಗೆ ಸಿದ್ಧರಿದ್ದೇವೆ: ಪ್ರಿಯಾಂಕ್‌ ಖರ್ಗೆ

ಬಿಜೆಪಿ ಪ್ರತಿಭಟನೆ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿದ್ದು, ನಮ್ಮ ಸರ್ಕಾರವು ನಾಗೇಂದ್ರ ಅವರ ವಿಚಾರ, ಸಿಬಿಐ ಚಾರ್ಜ್‌ಶೀಟ್, ಸಿಐಡಿ, ಎಸ್‌ಐಟಿ ಎಲ್ಲದರ ಬಗ್ಗೆಯೂ ಚರ್ಚಿಸಲು ನಾವು ಸಿದ್ಧರಿದ್ದೇವೆ. ಆದರೆ ಬಿಜೆಪಿಯವರು ಚರ್ಚೆಗೆ ಬಾರದೆ ಗದ್ದಲ ನಡೆಸುವ ಮೂಲಕ ಕಲಾಪಕ್ಕೆ ಅಡ್ಡಿಪಡಿಸುತ್ತಿರುವುದು ನಾಚಿಕೆಗೇಡು. ಸದನದ ನಿಯಮದ ಪ್ರಕಾರ ಪ್ರತಿಭಟನೆ ಮಾಡಬೇಕು ಎಂದರೆ ಬಾವಿಗೆ ಇಳಿದು ಪ್ರತಿಭಟನೆ ಮಾಡಬೇಕು ಇದ್ದಲ್ಲಿಯೇ ಕೂಗಾಟ ಮಾಡುವುದಲ್ಲ ಎಂದು ಟೀಕಿಸಿದ್ದಾರೆ.

ಅವರು ಚರ್ಚೆಗೂ ಸಿದ್ಧರಿಲ್ಲ, ನಾವು ನೀಡುವ ಹೇಳಿಕೆಗಳನ್ನೂ ಸ್ವೀಕರಿಸುವುದಿಲ್ಲ. ರಾಜ್ಯದಲ್ಲಿ ಜ್ವಲಂತ ಸಮಸ್ಯೆಗಳಿವೆ, ಬರದ ಛಾಯೆ ಇದೆ, ಖಾಸಗಿ ಕಂಪನಿಗಳಿಂದ ರೈತರಿಗೆ ವಿಮೆ ಹಣ ತಲುಪಿಲ್ಲ, ಕೆಪಿಎಸ್‌ಸಿ ಹಗರಣ ನಡೆದಿದೆ, ಆದರೆ ಇದಾವುದೂ ಬಿಜೆಪಿಯವರಿಗೆ ಮುಖ್ಯ ಎನಿಸಿಲ್ಲ.

ಕೆಪಿಎಸ್‌ಸಿ ಹಗರಣ, ವಿಧಾನಪರಿಷತ್ ಚುನಾವಣೆಯಲ್ಲಿ 11 ಶಾಸಕರು ಅಡ್ಡಮತದಾನ ಮಾಡುವ ಮೂಲಕ ತಮ್ಮ ನಾಯಕತ್ವವನ್ನು ತಿರಸ್ಕರಿಸಿರುವುದನ್ನು, ಪಿಎಂ ಕೇರ್ಸ್ ಭ್ರಷ್ಟಾಚಾರ, ರಾಮಮಂದಿರದ ಚಂದಾ ಹಣ ಕದ್ದ ಪ್ರಕರಣಗಳನ್ನು ಮುಚ್ಚಿಡುವುದಕ್ಕೆ ಬಿಜೆಪಿಯವರು ಈ ನಾಟಕ ಮಾಡುತ್ತಿದ್ದಾರೆ.

ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಕೋರಿದ ತನಿಖಾ ಸಂಸ್ಥೆ: ನಾಗೇಂದ್ರಗೆ ಸಿಬಿಐ ತನಿಖೆಯ ಉರುಳು ?

ವಿಪಕ್ಷಗಳ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡುವುದಕ್ಕೆ ಸರ್ಕಾರ ಸಿದ್ಧವಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಎಷ್ಟೊಂದು ನಾಯಕರು ಕಳಂಕ ಹೊತ್ತಿದ್ದಾರೆ? ಬಿಜೆಪಿಯವರು ನೈತಿಕತೆ ಇಟ್ಟುಕೊಂಡು ರಾಜೀನಾಮೆ ಕೇಳಬೇಕು. ಅವರಿಗೆ ರಾಜ್ಯದ ಜನರು, ರೈತರು, ಯುವಕರ ಬಗ್ಗೆ ಕಾಳಜಿ ಇಲ್ಲ. ಆರೆಸ್ಸೆಸ್‌ ಅನ್ನು ಮೆಚ್ಚಿಸುವುದಷ್ಟೇ ಅವರ ಗುರಿಯಾಗಿದೆ ಎಂದು ಕಿಡಿ ಕಾರಿದ್ದಾರೆ.