Cabinet meeting: ಬರ ನಿರ್ವಹಣೆಗೆ ಪ್ರತಿ ಕ್ಷೇತ್ರಕ್ಕೆ 1 ಕೋಟಿ ರೂ. ಅನುದಾನ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ
Karnataka Drought: ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಭಾನುವಾರ ಸಚಿವ ಸಂಪುಟ ಸಭೆ ನಡೆದಿದೆ. 178 ತಾಲೂಕುಗಳಲ್ಲಿ ಮಳೆ ಕೊರತೆ ಇದೆ. ರಾಜ್ಯದ ಜಲಾಶಯಗಳಲ್ಲಿ ಶೇ.40 ಮಾತ್ರ ನೀರಿದೆ. ಹೀಗಾಗಿ 15 ದಿನಗಳಲ್ಲಿ ಬರ ಪರಿಸ್ಥಿತಿ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
-
ಬೆಂಗಳೂರು: ರಾಜ್ಯದಲ್ಲಿ ಶೇ. 60 ಮಳೆ ಕೊರತೆಯಾಗಿದ್ದು, 158 ತಾಲೂಕುಗಳಲ್ಲಿ ಮಳೆ ಕೊರತೆ ಇದೆ. ಹೀಗಾಗಿ ಬರ ಅಧ್ಯಯನಕ್ಕೆ (karnataka drought) ಸಿದ್ಧತೆ ನಡೆಸಲಾಗಿದ್ದು, ಪ್ರತಿ ತಾಲೂಕುಗಳಿಗೂ ಹೋಗಿ ಪರಿಶೀಲನೆಗೆ ನಡೆಸಲು ಸೂಚಿಸಲಾಗಿದೆ. ಬರ ನಿರ್ವಹಣೆಗೆ ಪ್ರತಿ ಕ್ಷೇತ್ರಕ್ಕೆ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ (Cabinet meeting) ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜಲಾಶಯಗಳಲ್ಲಿ ಶೇ.40 ಮಾತ್ರ ನೀರಿದೆ. ಬರ ಹಿನ್ನೆಲೆಯಲ್ಲಿ ಗೋಶಾಲೆಗಳನ್ನೂ ತೆರೆಯಬೇಕಾಗಿದೆ. 15 ದಿನಗಳಲ್ಲಿ ಬರ ಪರಿಸ್ಥಿತಿ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೃಷಿಗೆ ನೀರಿನ ಕೊರತೆ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಿಂದ ಯಾರನ್ನೂ ತೆಗೆಯುವ ಉದ್ದೇಶವಿಲ್ಲ
ಗೃಹಲಕ್ಷ್ಮೀಯ ಯೋಜನೆ ಮರು ಪರಿಶೀಲನೆ ಬಗ್ಗೆ ಪ್ರತಿಕ್ರಿಯಿಸಿ, ಅರ್ಜಿ ಯಾವ ರೀತಿ ಇರಬೇಕೆಂದು ಚರ್ಚೆಯಾಗಿದೆ. ಫಲಾನುಭವಿಗಳ ಮೊಬೈಲ್ ಸಂಖ್ಯೆ, ಖಾತೆಯೇ ಇರಬೇಕು, ಗಂಡ, ಮಕ್ಕಳ ಖಾತೆ ಇರಬಾರದು. ಯೋಜನೆಯಿಂದ ಯಾರನ್ನೂ ತೆಗೆಯುವ ಉದ್ದೇಶವಿಲ್ಲ ಎಂದು ಹೇಳಿದ್ದಾರೆ.
ಇನ್ನು ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಮಾಡಿರುವುದು ಸರಿ ಇದೆ, ರಾಜ್ಯಪಾಲರ ತೀರ್ಮಾನ ಸರಿ ಇದೆ ಎಂದು ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಬೆಂಗಳೂರು ಮೆಡಿಕಲ್ ಕಾಲೇಜಿನ ಹೊಸ ಹಾಸ್ಟೆಲ್ ಕಟ್ಟಡಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಹಿರಿಯೂರು ಅಭಿವೃದ್ಧಿಗೆ 244 ಕೋಟಿ ನೀಡಲು ಒಪ್ಪಿಗೆ ನೀಡಲಾಗಿದೆ. ಹಿರಿಯೂರಿನ 116 ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ನೀಡಿದ್ದು, ಇದು ಡಿ. ಸುಧಾಕರ್ ಅವರ ಕನಸಿನ ಯೋಜನೆ ಎಂದು ತಿಳಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಸುಳಿವು
ಇನ್ನು ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಸುಳಿವು ನೀಡಿದ್ದು, ಈ ವಾರದ ಒಳಗೆ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಆಗಸ್ಟ್ ಮೊದಲ ವಾರದಲ್ಲಿ ಮಳೆಗಾಲದ ಅಧಿವೇಶನ ಆರಂಭವಾಗಲಿದೆ. ಅಷ್ಟರೊಳಗೆ ಸಂಪುಟ ವಿಸ್ತರಣೆ ಆಗಬೇಕಲ್ಲವೇ? ಎಂದು ಹೇಳಿದ್ದಾರೆ.
15 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ
ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಸಿಕ್ಕಿದೆ. ಈಗಾಗಲೇ ವಿವಿಧ ಇಲಾಖೆಗಳಲ್ಲಿ ಭರ್ಜರಿ ನೇಮಕಾತಿಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಇದೀಗ 15 ಸಾವಿರ ಶಿಕ್ಷಕರ ನೇಮಕಾತಿಗೆ ಸಚಿವ ಸಂಪುಟದಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ.