ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Cabinet Meeting: ಬ್ಯಾಲೆಟ್ ಪೇಪರ್‌ನಲ್ಲೇ ಗ್ರಾಮ ಪಂಚಾಯಿತಿಗಳ ಚುನಾವಣೆ; ಸಚಿವ ಸಂಪುಟ ಮಹತ್ವದ ನಿರ್ಧಾರ

ಗ್ರೇಟರ್ ಬೆಂಗಳೂರು ಪ್ರಾಧಿಕಾರ, ವಿವಿಧ ಮಹಾನಗರ ಪಾಲಿಕೆಗಳು ಸೇರಿ ಮುಂಬರುವ ಜಿಪಂ ಹಾಗೂ ತಾಪಂ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಮತಪತ್ರಗಳನ್ನು ಬಳಸುವ ಮಹತ್ವದ ನಿರ್ಧಾರವನ್ನು ರಾಜ್ಯ ಚುನಾವಣಾ ಆಯೋಗ ಇತ್ತೀಚೆಗೆ ಕೈಗೊಂಡಿತ್ತು. ಇದೀಗ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲೂ ಬ್ಯಾಲೆಟ್‌ ಪೇಪರ್‌ ಮೂಲಕವೇ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಗ್ರಾಪಂಗಳ ಚುನಾವಣೆಯನ್ನು ಬ್ಯಾಲೆಟ್ ಪೇಪರ್‌ನಲ್ಲೇ ನಡೆಸಲು ಸಂಪುಟ ಒಪ್ಪಿಗೆ

ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) -

Prabhakara R
Prabhakara R Feb 5, 2026 9:44 PM

ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಬ್ಯಾಲೆಟ್ ಪೇಪರ್‌ನಲ್ಲಿ ನಡೆಸಲು ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆದಿದೆ. ಈ ವೇಳೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿಯೂ ಮತಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್‌ನಲ್ಲಿ ಎಲೆಕ್ಷನ್‌ ನಡೆಸಲು ತೀರ್ಮಾನಿಸಲಾಗಿದೆ.

ಈ ಬಗ್ಗೆ ಸಂಪುಟ ಸಭೆಯ ಬಳಿಕ ಸಚಿವ ಎಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ. ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ರದ್ದು ಮಾಡಲಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿನ ಸಾಲ ವಸೂಲಾತಿಗೆ ಸಂಬಂಧಿಸಿದೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ 2013-14 ರಿಂದ 2018- 19 ನೇ ಸಾಲಿಗೆ ವಿವಿಧ ಯೋಜನೆ ನೀಡಲಾಗಿರುವ ಸಾಲವನ್ನು ಒನ್ ಟೈಮ್ ಸೆಟ್ಲ್ಮೆಂಟ್ ಮೂಲಕ ವಸೂಲಾತಿ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ನಿಗಮದಲ್ಲಿ 981 ಕೋಟಿ ರೂಪಾಯಿ ವಸೂಲಾತಿ ಬಾಕಿ ಇದೆ. ರಿಕವರಿ ಮಾಡಲು ಅವಕಾಶ ಇರುವುದು 740 ಕೋಟಿ ರೂ. ಆಗಿದ್ದು, ಇದಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ.

ಇನ್ನು ಐತಿಹಾಸಿಕವಾಗಿ ಅತ್ಯಂತ ಶ್ರೀಮಂತ ಪ್ರದೇಶವಾಗಿರುವ ನಮ್ಮ ಲಕ್ಕುಂಡಿಯಲ್ಲಿ ಸ್ಮಾರಕಗಳ ರಕ್ಷಣಾ ಕಾರ್ಯವನ್ನು ಮುಂದುವರಿಸಿದ್ದೇವೆ. ಈಗಾಗಲೇ ಲಕ್ಕುಂಡಿಯಲ್ಲಿರುವ ಪುರಾತನ ದೇವಸ್ಥಾನಗಳು ಸೇರಿದಂತೆ ವಿವಿಧ ಐತಿಹ್ಯಗಳ ಅಭಿವೃದ್ಧಿಗೆ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಇದೀಗ ಈ ಸಾಲಿಗೆ ಮತ್ತೊಂದು ಸೇರ್ಪಡೆ ಎಂಬಂತೆ ಲಕ್ಕುಂಡಿಯ ಪ್ರಾಚೀನ 5 ದೇವಸ್ಥಾನಗಳು ಹಾಗೂ 1 ಪ್ರಾಚೀನ ಬಾವಿಯ ಸಮಗ್ರ ಅಭಿವೃದ್ಧಿಗಾಗಿ 10 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿದ್ದೇವೆ ಎಂದು ಹೇಳಿದರು.

ಜಿಬಿಎ ಚುನಾವಣೆಯಲ್ಲೂ ಮತಪತ್ರಗಳ ಬಳಕೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರ, ವಿವಿಧ ಮಹಾನಗರ ಪಾಲಿಕೆಗಳು ಸೇರಿ ಮುಂಬರುವ ಜಿಪಂ ಹಾಗೂ ತಾಪಂ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಮತಪತ್ರಗಳನ್ನು ಬಳಸುವ ಮಹತ್ವದ ನಿರ್ಧಾರವನ್ನು ರಾಜ್ಯ ಚುನಾವಣಾ ಆಯೋಗ ಇತ್ತೀಚೆಗೆ ಕೈಗೊಂಡಿತ್ತು. ಇದೀಗ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲೂ ಬ್ಯಾಲೆಟ್‌ ಪೇಪರ್‌ ಮೂಲಕವೇ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ತಮಿಳುನಾಡು ವಿಧಾನಸಭಾ ಚುನಾವಣೆಗೂ ಮೊದಲೇ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ ಮುಂದಿನ ನಡೆ ಏನು?

ಇನ್ನು ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಮುಗಿಯಲಿದೆ. ಹೀಗಾಗಿ 2026ರ ಏಪ್ರಿಲ್‌- ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರಕಾರ ಸಜ್ಜಾಗಿದ್ದು, ಪೂರ್ವಸಿದ್ಧತೆಗೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ಕೂಡ ನೀಡಿದೆ.