Karnataka Cabinet Portfolios: ಡಿ.ಕೆ.ಶಿವಕುಮಾರ್ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ, ಅಧಿಕೃತ ಪಟ್ಟಿಗೆ ರಾಜ್ಯಪಾಲರ ಅನುಮೋದನೆ; ಯಾರಿಗೆ ಯಾವ ಖಾತೆ?
ರಾಜ್ಯ ಕ್ಯಾಬಿನೆಟ್ ವಿಸ್ತರಣೆಯಾಗಿ 10 ದಿನಗಳ ಬಳಿಕ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ 23 ಸಚಿವರಿಗೆ ಖಾತೆ ಹಂಚಿಕೆ ನಡೆದಿದ್ದು, ಯಾರಿಗೆ ಯಾವ ಖಾತೆ ನೀಡಲಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
-
Prabhakara R
Aug 12, 2026 6:39 PM
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಳಿಕ ಇದೀಗ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದ ಸಚಿವರಿಗೆ ಖಾತೆ ಹಂಚಿಕೆ ನಡೆದಿದೆ. ಸಂಪುಟ ಖಾತೆ ಹಂಚಿಕೆಗೆ (Karnataka Cabinet Portfolios) ಅನುಮೋದನೆ ನೀಡಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ 23 ಸಚಿವರಿಗೆ ಖಾತೆ ಹಂಚಿಕೆ ನಡೆದಿದ್ದು, ಯಾರಿಗೆ ಯಾವ ಖಾತೆ ನೀಡಲಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಯಾರಿಗೆ ಯಾವ ಖಾತೆ ಹಂಚಿಕೆ?
- ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ:
ಹಣಕಾಸು, ಸಂಪುಟ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗುಪ್ತಚರ, ಮಾಹಿತಿ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ, ಕೃಷಿ ಮಾರಾಟ, ನಗರಾಭಿವೃದ್ಧಿ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯ, ಬಿಡಿಎ (BDA) ಮತ್ತು ಬಿಎಂಆರ್‌ಡಿಎ (BMRDA) ವ್ಯಾಪ್ತಿಗೆ ಬರುವ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಹಂಚಿಕೆಯಾಗದ ಎಲ್ಲಾ ಇಲಾಖೆಗಳು. - ಬಿ. ಝಡ್. ಜಮೀರ್ ಅಹಮದ್ ಖಾನ್: ವಸತಿ ಇಲಾಖೆ
- ರಾಮಲಿಂಗಾರೆಡ್ಡಿ: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ
- ಲಕ್ಷ್ಮಣ ಸವದಿ: ಸಹಕಾರ (ಕೃಷಿ ಮಾರಾಟ ಹೊರತುಪಡಿಸಿ)
- ರುದ್ರಪ್ಪ ಮಾನಪ್ಪ ಲಮಾಣಿ: ಸಕ್ಕರೆ ಮತ್ತು ಜವಳಿ
- ಕೆ. ಎಚ್. ಮುನಿಯಪ್ಪ: ಸಮಾಜ ಕಲ್ಯಾಣ
- ಶಿವರಾಜ್ ತಂಗಡಗಿ: ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ
- ಯು. ಟಿ. ಖಾದರ್: ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ
- ಟಿ. ರಘುಮೂರ್ತಿ: ಪರಿಶಿಷ್ಟ ಪಂಗಡಗಳ ಕಲ್ಯಾಣ
- ಡಾ. ಅಜಯ್ ಸಿಂಗ್: ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ
- ಚೆಲುವರಾಯಸ್ವಾಮಿ: ಬೃಹತ್ ಮತ್ತು ಮಧ್ಯಮ ನೀರಾವರಿ
- ಮಧು ಬಂಗಾರಪ್ಪ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
- ಬಸವರಾಜ ರಾಯರೆಡ್ಡಿ: ಉನ್ನತ ಶಿಕ್ಷಣ
- ಕೆ. ಎಂ. ಶಿವಲಿಂಗೇಗೌಡ: ಅಬಕಾರಿ
- ಪುಟ್ಟರಂಗಶೆಟ್ಟಿ: ಪಶುಸಂಗೋಪನೆ ಮತ್ತು ರೇಷ್ಮೆ
- ವಿಜಯಾನಂದ ಕಾಶಪ್ಪನವರ್: ಸಣ್ಣ ಪ್ರಮಾಣದ ಕೈಗಾರಿಕೆಗಳು, ಸಾರ್ವಜನಿಕ ಉದ್ದಿಮೆಗಳು
- ಸಂತೋಷ್ ಲಾಡ್: ಕಾರ್ಮಿಕ ಮತ್ತು ಉದ್ಯೋಗ
- ಕೆ. ಎಸ್ . ಬಸವಂತಪ್ಪ: ಮುಜರಾಯಿ, ಮೀನುಗಾರಿಕೆ, ಬಂದರುಗಳು ಮತ್ತು ಒಳನಾಡು ಜಲಸಾರಿಗೆ
- ಎಸ್. ಎಸ್. ಮಲ್ಲಿಕಾರ್ಜುನ್: ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ
- ರಿಜ್ವಾನ್ ಅರ್ಷದ್: ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು
- ನರೇಂದ್ರ ಸ್ವಾಮಿ: ಕೃಷಿ
- ಎಚ್. ಸಿ. ಬಾಲಕೃಷ್ಣ: ಪೌರಾಡಳಿತ
- ಬಿ. ನಾಗೇಂದ್ರ: ಯೋಜನೆ ಮತ್ತು ಸಾಂಖ್ಯಿಕ