ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Karnataka Cabinet expansion: ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

30 ರಿಂದ 40 ಮಂದಿ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಜಾತಿ ಮತ್ತು ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಳ್ಳುವುದು ಈ ಸಂಪುಟ ವಿಸ್ತರಣೆಯ ಮುಖ್ಯ ಉದ್ದೇಶವಾಗಿದೆ. ಪ್ರಸ್ತುತ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದ ಹಲವು ಜಿಲ್ಲೆಗಳ ಶಾಸಕರಿಗೆ ಈ ಬಾರಿ ಮಂತ್ರಿಗಿರಿ ಸಿಗುವುದು ಖಚಿತವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತೆ: ಸಚಿವ ಪ್ರಿಯಾಂಕ್ ಖರ್ಗೆ

-

Prabhakara R
Prabhakara R Aug 2, 2026 7:45 PM

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ (Karnataka Cabinet expansion) ಪ್ರಕ್ರಿಯೆಗೆ ಕೊನೆಗೂ ಚಾಲನೆ ಸಿಗುವ ಲಕ್ಷಣಗಳು ಕಂಡುಬರುತ್ತಿವೆ. ಸಂಪುಟ ವಿಸ್ತರಣೆಯ ಕುರಿತಂತೆ ಹೈಕಮಾಂಡ್ ನಾಯಕರೊಂದಿಗೆ ಸುದೀರ್ಘ ಚರ್ಚೆ ನಡೆಸಲು ರಾಜ್ಯ ನಾಯಕರು ನವದೆಹಲಿಗೆ ತೆರಳಿ ಭೇಟಿ ಮಾಡಿದ್ದರು. ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ನಾಳೆ ಸಚಿವ ಸಂಪುಟ ವಿಸ್ತರಣೆಯಾಗುವ ಸುಳಿವು ನೀಡಿದ್ದಾರೆ.

ದೆಹಲಿ ಪ್ರವಾಸ ಮುಗಿಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, "ನಾಳೆಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ನಾಳೆ ನೂತನ ಸಚಿವರನ್ನು ಒಳಗೊಂಡ ಹೊಸ ಸಂಪುಟ ರಚನೆಯಾಗಲಿದೆ" ಎಂದು ತಿಳಿಸಿದ್ದಾರೆ. ಇದರಿಂದಾಗಿ ಶಾಸಕಾಂಗ ಪಕ್ಷದಲ್ಲಿ ಹಾಗೂ ಸಚಿವ ಆಕಾಂಕ್ಷಿಗಳಲ್ಲಿ ಹೊಸ ಸಂಚಲನ ಮೂಡಿದ್ದು, ಯಾರೆಲ್ಲಾ ಹೊಸದಾಗಿ ಸಂಪುಟ ಸೇರಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.

ಮತ್ತೊಂದೆಡೆ, ಮುಖ್ಯಮಂತ್ರಿಗಳ ಅಧಿಕೃತ ನಿವಾಸ 'ಕೃಷ್ಣಾ'ದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, "ಸಚಿವ ಸಂಪುಟ ವಿಸ್ತರಣೆಯಾಗುವುದು ಖಚಿತ. ಆದರೆ ಯಾವ ನಿರ್ದಿಷ್ಟ ದಿನಾಂಕದಂದು ಎನ್ನುವುದನ್ನು ಸೂಕ್ತ ಸಮಯದಲ್ಲಿ ತಿಳಿಸಲಾಗುವುದು," ಎಂದು ಹೇಳಿದ್ದಾರೆ.