ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka CM Row: ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದ ಸಿದ್ದರಾಮಯ್ಯ

CM Siddaramaiah: 2013ರಲ್ಲಿ 2023ರಲ್ಲಿಯೂ ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ. ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ.

ಬೆಳಗಾವಿ, ಡಿ.16: 2023ರಂತೆ 2028ರಲ್ಲಿಯೂ ಜನಾಶೀರ್ವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು. ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಸಭಾ ಕಲಾಪದಲ್ಲಿ (Karnataka Winter Session) ಮಂಗಳವಾರ ವಿರೋಧಪಕ್ಷದವರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡಿದ ಅವರು, ಗಾದೆ ಮಾತಿನಂತೆ ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಎಂಬ ಗಾದೆ ಮಾತಿದೆ. ವಿರೋಧಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು ಎಂದು ಕಿಡಿಕಾರಿದರು.

ವಿರೋಧಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. 140 ಶಾಸಕರು ನಮ್ಮೊಂದಿಗಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ ಎಂದು ಕಿಡಿಕಾರಿದರು.

ಜನರ ನಾಡಿಮಿಡಿತ ಕಾಂಗ್ರೆಸ್ ಸರ್ಕಾರಕ್ಕೆ ತಿಳಿದಿದೆ

2023ರಲ್ಲಿ ಜನರು ಆಶೀರ್ವಾದ ಮಾಡಿದಂತೆ 2028ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದೆ. ಕರ್ನಾಟಕದ ಜನ ಬಿಜೆಪಿಗೆ ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎರಡು ಬಾರಿ ಅಧಿಕಾರ ನಡೆಸಿದರೂ, ಒಂದು ಬಾರಿಯೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. 2008, 2018ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಜೆಡಿಎಸ್‌ನೊಂದಿಗೆ ಸರ್ಕಾರ ರಚಿಸಲಾಯಿತು. ಆದರೆ ಬಿಜೆಪಿಯವರು, ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿರುವ ಉದ್ದೇಶದ ಬಗ್ಗೆ ಪ್ರಶ್ನಿಸಿದರು.‌

ಹೊಸ ಕೈಗಾರಿಕಾ ನೀತಿಯಿಂದ ರಾಜ್ಯದಲ್ಲಿ 93,925 ಉದ್ಯೋಗ ಸೃಷ್ಟಿ: ಎಂ.ಬಿ.ಪಾಟೀಲ್

ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ

ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಮಾತು ಅಂತಿಮವಾಗಿರುತ್ತದೆ. ಆದರೆ ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕ್ಆರಕ್ಕೆ ಬರಲಿದೆ. 2013 ರಲ್ಲಿ 2023ರಲ್ಲಿಯೂ ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ. ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದೆ. “ ʼನಾನು’ ಹೋದರೆ ಹೋದೇನು” ಅಂತ ಕನಕದಾಸರು ಹೇಳಿದ್ದರು. “ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ”. ಈಗಲೂ ನಾನೇ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.