Tamil Nadu’s new CM Vijay: ನೀವು ಇತಿಹಾಸ ನಿರ್ಮಿಸಿದ್ದೀರಿ; ತಮಿಳುನಾಡು ನೂತನ ಸಿಎಂ ವಿಜಯ್‌ಗೆ ಸಿದ್ದರಾಮಯ್ಯ ಅಭಿನಂದನೆ
ವಿಧಾನಸಭಾ ಚುನಾವಣೆಯಲ್ಲಿ 234 ಕ್ಷೇತ್ರಗಳಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಬರೋಬ್ಬರಿ 108 ಕ್ಷೇತ್ರಗಳನ್ನು ಗೆದ್ದಿದೆ. ಕಾಂಗ್ರೆಸ್, ವಿಸಿಕೆ, ಸಿಪಿಐ, ಸಿಪಿಎಂ ಮತ್ತು ಮುಸ್ಲಿಂ ಲೀಗ್ ಪಕ್ಷಗಳ ಬೆಂಬಲದಿಂದ ತಮಿಳುನಾಡಿನ ನೂತನ ಸಿಎಂ ಆಗಿ ವಿಜಯ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಹಿನ್ನೆಲೆ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ತಮಿಳುನಾಡು ನೂತನ ಸಿಎಂ ವಿಜಯ್ -
ಬೆಂಗಳೂರು: ತಮಿಳುನಾಡು ನೂತನ ಸಿಎಂ ವಿಜಯ್ (Tamil Nadu’s new CM Vijay) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಅಭಿನಂದನೆ ಸಲ್ಲಿಸಿದ್ದಾರೆ. ದೂರವಾಣಿ ಕರೆ ಮಾಡಿರುವ ಸಿಎಂ ಅವರು, ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಮುಖ್ಯಮಂತ್ರಿಯಾಗಿರುವ ನೀವು ಇತಿಹಾಸ ನಿರ್ಮಿಸಿದ್ದೀರಿ. ಇದಕ್ಕಾಗಿ ನಿಮಗೆ ಅಭಿನಂದನೆ. ಬೆಂಗಳೂರಿಗೆ ಬಂದಾಗ ತಮ್ಮನ್ನು ಭೇಟಿ ಮಾಡುವಂತೆ ತಿಳಿಸಿದ್ದಾರೆ.
ತಮಿಳುನಾಡು ನೂತನ ಸಿಎಂ ವಿಜಯ್ ಅವರಿಗೆ ದೇಶದ ಪ್ರಮುಖ ರಾಜಕೀಯ ನಾಯಕರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರ ಅಭಿನಂದನೆ ಸಲ್ಲಿಸಿರುವ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Siddaramaiah calls Vijay to Congratulate
— Nagarjun Dwarakanath (@nagarjund) May 11, 2026
“Siddaramaiah speaking here” pic.twitter.com/br9yIyXRco
ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ 234 ಕ್ಷೇತ್ರಗಳಲ್ಲಿ ಟಿವಿಕೆ ಬರೋಬ್ಬರಿ 108 ಕ್ಷೇತ್ರಗಳನ್ನು ಗೆದ್ದಿದೆ. ವಿಸಿಕೆ, ಸಿಪಿಐ, ಸಿಪಿಎಂ ಮತ್ತು ಮುಸ್ಲಿಂ ಲೀಗ್ ಪಕ್ಷಗಳ ಬೆಂಬಲದಿಂದ ಒಟ್ಟು 120 ಶಾಸಕರ ಬೆಂಬಲದಿಂದ ತಮಿಳುನಾಡಿನಲ್ಲಿ ಟಿವಿಕೆ ಪಕ್ಷದ ವಿಜಯ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ.