ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಗಣೇಶ್ ನಚಿಕೇತು ಅವರನ್ನು ಯಾವುದೇ ಹುದ್ದೆಗೆ ನೇಮಿಸಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

ಗಣೇಶ್ ನಚಿಕೇತು ಅವರನ್ನು ರಾಜ್ಯ ಮುಖ್ಯಸ್ಥರು - ಸಾರ್ವಜನಿಕ ಸಂಪರ್ಕ ಮತ್ತು ಸಂವಹನ ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವುದು ಕರ್ನಾಟಕ ಸರ್ಕಾರದ ಗಮನಕ್ಕೆ ಬಂದಿದೆ. ಆದರೆ, ಗಣೇಶ್ ನಚಿಕೇತು ಅವರನ್ನು ಸರ್ಕಾರವು ಅಂತಹ ಯಾವುದೇ ಹುದ್ದೆಗೆ ನೇಮಿಸಿಲ್ಲ ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ.

ಬೆಂಗಳೂರು: ಗಣೇಶ್ ನಚಿಕೇತು (Ganesh Nachikethu) ಅವರನ್ನು ರಾಜ್ಯ ಮುಖ್ಯಸ್ಥರು - ಸಾರ್ವಜನಿಕ ಸಂಪರ್ಕ ಮತ್ತು ಸಂವಹನ (State Head - PR & Communication) ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದ ವರದಿಗಳನ್ನು ರಾಜ್ಯ ಸರ್ಕಾರ ತಳ್ಳಿಹಾಕಿದೆ. ಅಲ್ಲದೆ ಗಣೇಶ್ ನಚಿಕೇತು ಅವರನ್ನು ಸರ್ಕಾರದಲ್ಲಿ ಯಾವುದೇ ಹುದ್ದೆಗೆ ನೇಮಿಸಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಗಣೇಶ್ ನಚಿಕೇತು ಅವರನ್ನು ರಾಜ್ಯ ಮುಖ್ಯಸ್ಥರು - ಸಾರ್ವಜನಿಕ ಸಂಪರ್ಕ ಮತ್ತು ಸಂವಹನ ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವುದು ಕರ್ನಾಟಕ ಸರ್ಕಾರದ ಗಮನಕ್ಕೆ ಬಂದಿದೆ. ಆದರೆ, ಗಣೇಶ್ ನಚಿಕೇತು ಅವರನ್ನು ಸರ್ಕಾರವು ಅಂತಹ ಯಾವುದೇ ಹುದ್ದೆಗೆ ನೇಮಿಸಿಲ್ಲ ಮತ್ತು ಯಾವುದೇ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಜವಾಬ್ದಾರಿ ನೀಡಲಾಗಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.