ಬೆಂಗಳೂರು: ರಾಜ್ಯದ ಸಿನಿಮಾ ಪ್ರಿಯರಿಗೆ ಸರ್ಕಾರದಿಂದ ಶಾಕ್ ನೀಡಿದ್ದು, ಸಿನಿಮಾ ಟಿಕೆಟ್‌ಗಳ (cinema tickets) ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್ (Cess)) ವಿಧಿಸಲು ನಿರ್ಧಾರ ಕೈಗೊಂಡಿದೆ. ಈ ಹೊಸ ನಿಯಮವು ಸೆಪ್ಟೆಂಬರ್ 30 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.
ರಾಜ್ಯ ಸರ್ಕಾರವು 2024 ರಲ್ಲಿ ಮಂಡಿಸಿದ್ದ ‘ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕಕ್ಕೆ 2024ರ ಸೆಪ್ಟೆಂಬರ್ 23 ರಂದು ಕರ್ನಾಟಕದ ರಾಜ್ಯಪಾಲರು ಅಧಿಕೃತವಾಗಿ ಅಂಕಿತ ಹಾಕಿದ್ದರು. ಅದರ ಮರುದಿನವೇ, ಅಂದರೆ ಸೆಪ್ಟೆಂಬರ್ 24 ರಂದು ಸರ್ಕಾರದ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿತ್ತು. ಇದೀಗ ಎರಡು ವರ್ಷಗಳ ಸುದೀರ್ಘ ಪ್ರಕ್ರಿಯೆಯ ಬಳಿಕ ಈ ಅಧಿನಿಯಮವನ್ನು ಜಾರಿಗೆ ತರಲಾಗುತ್ತಿದೆ.
ಹೊಸ ನಿಯಮದ ಪ್ರಕಾರ, ಮಲ್ಟಿಪ್ಲೆಕ್ಸ್ ಸಿನಿಮಾ ಮಂದಿರಗಳಲ್ಲಿ ಸಿನಿಮಾ ನೋಡುವ ಗ್ರಾಹಕರು ಟಿಕೆಟ್ ದರದ ಜೊತೆಗೆ 2% ಸೆಸ್ ಪಾವತಿಸಬೇಕಾಗುತ್ತದೆ. ಉದಾಹರಣೆಗೆ, 200 ರೂಪಾಯಿ ಮುಖಬೆಲೆಯ ಟಿಕೆಟ್‌ಗೆ ಹೆಚ್ಚುವರಿಯಾಗಿ 4 ರೂಪಾಯಿ ಸೆಸ್ ಕಟ್ಟಬೇಕು.
ಸಿನಿಮಾ ಟಿಕೆಟ್ ಮೂಲಕ ಸಂಗ್ರಹವಾಗುವ ಈ ಸೆಸ್ ಹಣವನ್ನು ಕೇವಲ ಸಿನಿಮಾ ಕಾರ್ಮಿಕರ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿ ಯೋಜನೆಗಳಿಗಾಗಿ ಮಾತ್ರ ಬಳಸಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
Bigg Boss Kannada 13: ಮುಚ್ಚೋ ಬಾಯಿ; ಶಾಸ್ತ್ರಿ ಕಿರಿಕ್, ಆಸಿಯಾ ಆವಾಜ್!