ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕೆ.ಸಿ.ವೇಣುಗೋಪಾಲ್ ಸಲಹೆ ನೀಡಿದ್ದಾರೆ, ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿ.ಕೆ. ಶಿವಕುಮಾರ್

DK Shivakumar: ಕೆ.ಸಿ. ವೇಣುಗೋಪಾಲ್, ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಟೀಕೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ವೇಣುಗೋಪಾಲ್ ಅವರು ನಮ್ಮ ನಾಯಕರು, ನಮಗೆ ಸಲಹೆ ನೀಡುವ ಎಲ್ಲಾ ಅಧಿಕಾರ ಅವರಿಗಿದೆ. ನಮ್ಮದು ರಾಷ್ಟ್ರೀಯ ಪಕ್ಷ. ನಮ್ಮಲ್ಲಿ ರಾಷ್ಟ್ರೀಯ ನಾಯಕರು ಸಲಹೆ ನೀಡುತ್ತಾರೆ. ಈ ಹಿಂದೆಯೂ ಅನೇಕ ಸಲಹೆ ನೀಡಿದ್ದಾರೆ, ಈಗಲೂ ನೀಡಿದ್ದಾರೆ, ಮುಂದೆಯೂ ನೀಡುತ್ತಾರೆ. ಆದರೆ ಎಂದಿಗೂ ಅವರು ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದರು.

ಬೆಂಗಳೂರು, ಡಿ. 29: ಕೆ.ಸಿ. ವೇಣುಗೋಪಾಲ್ ಅವರು (KC Venugopal) ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದರು. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.

ವೇಣುಗೋಪಾಲ್ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಟೀಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, ‘ಅವರು ನಮ್ಮ ನಾಯಕರು, ನಮಗೆ ಸಲಹೆ ನೀಡುವ ಎಲ್ಲಾ ಅಧಿಕಾರ ಅವರಿಗಿದೆ. ನಮ್ಮದು ರಾಷ್ಟ್ರೀಯ ಪಕ್ಷ. ನಮ್ಮಲ್ಲಿ ರಾಷ್ಟ್ರೀಯ ನಾಯಕರು ಸಲಹೆ ನೀಡುತ್ತಾರೆ. ಈ ಹಿಂದೆಯೂ ಅನೇಕ ಸಲಹೆ ನೀಡಿದ್ದಾರೆ, ಈಗಲೂ ನೀಡಿದ್ದಾರೆ, ಮುಂದೆಯೂ ನೀಡುತ್ತಾರೆ’ ಎಂದು ಹೇಳಿದರು.

ಇನ್ನು ಸಂತ್ರಸ್ತರ ಪುನರ್ವಸತಿ ಬಗ್ಗೆ ಮಾತನಾಡಿ, ‘ಅನೇಕರು ತಮಗೆ ಬೇರೆ ಕಡೆ ಮನೆಗಳಿದ್ದರೂ ಇಲ್ಲಿ ಗುಡಿಸಲು ಹಾಕಿಕೊಂಡಿದ್ದರು. ಉದ್ಯೋಗ ಅರಸಿ ಬಂದು ಇಲ್ಲಿ ವಾಸವಾಗಿದ್ದಾರೆ. ಯಾರಿಗೆ ನಿಜವಾಗಿಯೂ ವಾಸಕ್ಕೆ ಮನೆ ಇಲ್ಲವೊ ಅವರಿಗೆ ಮುಖ್ಯಮಂತ್ರಿಗಳ 1 ಲಕ್ಷ ವಸತಿ ಯೋಜನೆಯಲ್ಲಿ ಮನೆ ನೀಡಲಾಗುವುದು. ಇದಕ್ಕೆ ಅವರು ಒಂದೂವರೆಯಿಂದ ಎರಡು ಲಕ್ಷ ಹಣ ಪಾವತಿಸಬೇಕು. ಇದಕ್ಕೆ ಸಾಲ ಸೌಲಭ್ಯ ಕಲ್ಪಿಸುವ ಜವಾಬ್ದಾರಿಯನ್ನು ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ವಹಿಸಲಾಗಿದೆ. ನಾವು ಮನೆ ನೀಡುವ ಮುನ್ನ, ಅವರು ಯಾರು, ಎಲ್ಲಿಂದ ಬಂದಿದ್ದಾರೆ ಎಂದೆಲ್ಲಾ ಆಧಾರ್ ಹಾಗೂ ಇತರೆ ದಾಖಲೆ ಪರಿಶೀಲಿಸುತ್ತೇವೆ. ಅಲ್ಲಿಯವರೆಗೆ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು. ಮಾನವೀಯತೆ ದೃಷ್ಟಿಯಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಡಿ.ಕೆ.ಶಿವಕುಮಾರ್‌ ಭರವಸೆ

ಕಾರವಾರ: ಜಿಲ್ಲೆಯ ಶಾಸಕರು ಉತ್ತರ ಕನ್ನಡಕ್ಕೆ ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆಯನ್ನಿಟ್ಟಿದ್ದಾರೆ. ಅವರು ಈ ಬಗ್ಗೆ ಚಿಂತಿಸಬೇಕಿಲ್ಲ, ಆ ಬೇಡಿಕೆಯನ್ನು ನಾವು ಈಡೇರಿಸಲಿದ್ದೇವೆ. ಕರಾವಳಿ ಮತ್ತು ಮಲೆನಾಡು ಭಾಗಕ್ಕೆ ಪ್ರತ್ಯೇಕವಾದ ಪ್ರವಾಸೋದ್ಯಮ ನೀತಿಯನ್ನು ರೂಪಿಸುವ ಮೂಲಕ ಈ ಭಾಗದ ಅಭಿವೃದ್ಧಿಗೆ ಹೊಸ ನಾಂದಿ ಹಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಕಾರವಾರದ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ ಭಾನುವಾರ ರಾತ್ರಿ ನಡೆದ ಕರಾವಳಿ ಉತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಾಸಕ ಸತೀಶ್ ಸೈಲ್ ಅವರು ನಮ್ಮ ಜನರು ಗೋವಾ, ಉಡುಪಿ, ಮಂಗಳೂರಿಗೆ ಉತ್ತಮ ಚಿಕಿತ್ಸೆಗೆ ಹೋಗಲು ಆಗುವುದಿಲ್ಲ. ಅದಕ್ಕೆ ನಮಗೆ ಅತ್ಯುತ್ತಮ ‌ಆಸ್ಪತ್ರೆ ಬೇಕು ಎಂದಿದ್ದಾರೆ. ನಾವು ನಿಮ್ಮ ಜತೆ ಇದ್ದೇವೆ ಎಂದು ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಜನತೆ ಐದು ಜನ‌ ಶಾಸಕರನ್ನು ನೀಡಿ ಸರ್ಕಾರಕ್ಕೆ ಶಕ್ತಿ ತುಂಬಿದ್ದೀರಿ. ನೀವು ಶಕ್ತಿ ಕೊಟ್ಟ ಕಾರಣಕ್ಕೆ ಐದು ಗ್ಯಾರಂಟಿಗಳನ್ನು ನೀಡಿದ್ದೇವೆ. ನಿಮ್ಮಿಂದ ಈ ಕೈ ಗಟ್ಟಿಯಾಗಿದೆ. ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದರು.

ನಿಮಗಾಗಿ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಮಾಡಿ ಉದ್ಯೋಗ ಸೃಷ್ಟಿ ಮಾಡುತ್ತೇವೆ. ಯುವ ಜನರ ವಲಸೆ ತಪ್ಪಿಸುತ್ತೇವೆ. ಮನೆ ಬಾಗಿಲಲ್ಲಿ ಉದ್ಯೋಗ ನೀಡುತ್ತೇವೆ. ಜನವರಿ 10ರಂದು ಮಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ ರೂಪಿಸಲು ಸಭೆ: ಡಿಕೆ ಶಿವಕುಮಾರ್

ಪಶ್ಚಿಮ ಘಟ್ಟ, ಸಮುದ್ರ ತೀರ ಹೊಂದಿರುವ ವಿಶಿಷ್ಟವಾದ ಪ್ರದೇಶವಿದು. ವಿಭಿನ್ನವಾದ ಸಾಹಿತ್ಯ, ಸಂಸ್ಕೃತಿ, ಭಾಷೆ, ಆಚರಣೆ, ಪರಿಸರ ಹೀಗೆ ವೈವಿಧ್ಯಮಯವಾದ ಪ್ರದೇಶವಿದು. ಸಮುದ್ರ ಎಂದರೆ ಶಕ್ತಿ, ಸಂಪತ್ತು, ಸಮುದ್ರ ಎಂದರೆ ಜೀವನ, ಮೀನುಗಾರರ ಬದುಕಿಗೆ ದೊಡ್ಡ ಆಧಾರ, ವ್ಯಾಪಾರಿಗರ ನಿಧಿ, ಪ್ರವಾಸಿಗರ ಸ್ವರ್ಗ ಈ ಸಮುದ್ರ ಎಂದು ಕರಾವಳಿಯ ವೈಭವವನ್ನು ಬಣ್ಣಿಸಿದರು.

ಕಳೆದ ಏಳು ವರ್ಷಗಳಿಂದ ಕರಾವಳಿ ಉತ್ಸವ ನಡೆದಿಲ್ಲ. ಈ ವರ್ಷ ನೀವು ಬರಲೇಬೇಕು ಎಂದು ಸತೀಶ್ ಸೈಲ್ ಅವರು ಜಿಲ್ಲಾ ಮಂತ್ರಿ ಮಂಕಾಳ್ ವೈದ್ಯ ಅವರು ಒತ್ತಾಯ ಪೂರ್ವಕವಾಗಿ ನನ್ನನ್ನು ಇಲ್ಲಿಗೆ ಕರೆತಂದಿದ್ದಾರೆ. ದೇವರು ವರ,‌ ಶಾಪ ಎರಡನ್ನೂ ನೀಡುವುದಿಲ್ಲ‌. ಆದರೆ ಅವಕಾಶ ಮಾತ್ರ ನೀಡುತ್ತಾನೆ. ಆ ಅವಕಾಶವನ್ನು ನಾವು ಬಳಸಿಕೊಳ್ಳಬೇಕು. ಇದನ್ನು ಸತೀಶ್ ಸೈಲ್ ಅವರು ಬಳಸಿಕೊಂಡು ಜಿಲ್ಲೆಯ ಕಲಾವಿದರು ಸೇರಿದಂತೆ ಅನೇಕರಿಗೆ ಅವಕಾಶ ಸೃಷ್ಟಿಸಿ ಕೊಟ್ಟಿದ್ದಾರೆ ಎಂದು ಹೇಳಿದರು.

ಕರಾವಳಿ ಉತ್ಸವದಿಂದ ಸ್ಥಳೀಯ ಪ್ರತಿಭೆಗಳ ಪ್ರತಿಭಾ ಪ್ರದರ್ಶನಕ್ಕೆ ದೊಡ್ಡ ಅವಕಾಶ ನೀಡಿದಂತಾಗಿದೆ. ಈ ರೀತಿ ಪ್ರೋತ್ಸಾಹ ನೀಡುವುದರಿಂದ ಯುವ ಕಲಾವಿದರ ಬೆಳವಣಿಗೆ ಸಾಧ್ಯ ಎಂದರು.

ನಾನು ಸಹ ಕಳೆದ 10-15 ವರ್ಷದಿಂದ ನನ್ನ ಕ್ಷೇತ್ರ ಕನಕಪುರದಲ್ಲಿ ಕನಕೋತ್ಸವ ನಡೆಸಿಕೊಂಡು ಬಂದಿದ್ದೇನೆ. ನನ್ನಿಂದಲೂ ಇಂತಹ ಭವ್ಯವಾದ ಕಾರ್ಯಕ್ರಮ ಮಾಡಲು ಅಗಿಲ್ಲ. ಆದರೆ ಸತೀಶ್ ಸೈಲ್ ಅವರು ಅತ್ಯಂತ ಭವ್ಯವಾದ ಕಾರ್ಯಕ್ರಮ ಮಾಡಿರುವುದು ನೋಡಿ ಸಂತೋಷವಾಗಿದೆ ಎಂದು ತಿಳಿಸಿದರು.

ಮಾಗಡಿಯಲ್ಲಿ ಶ್ರೀನಿವಾಸ ಕಲ್ಯಾಣ; ರಾಜ್ಯಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸಿದೆ ಎಂದ ಡಿಕೆಶಿ

ನಾವು ಯಾವುದೇ ಕಾರ್ಯಕ್ರಮ ‌ಮಾಡಿದರೂ ವಿರೋಧಿಗಳು, ಟೀಕೆ ಮಾಡುತ್ತಾರೆ. ಮಾತನಾಡುವ ಬಾಯಿಗಿಂತ ಕೆಲಸ ಮಾಡುವ ಕೈಗಳು ಮುಖ್ಯ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ನಾನು ಕೇವಲ ಭಾಷಣ ಮಾಡಲು ಬಂದಿಲ್ಲ, ನೃತ್ಯ ನೋಡಲು ಬಂದಿಲ್ಲ. ಕಾರವಾರದ ಜನತೆಯ ಜತೆ ಇದ್ದೇನೆ ಎಂದು ಹೇಳಲು ಬಂದಿದ್ದೇವೆ.‌ ಮುಂದಿನ ದಿನಗಳಲ್ಲಿ ಆರು ಮಂದಿ ಶಾಸಕರನ್ನು ಆಯ್ಕೆ ಮಾಡಿ ಕೈ ಬಲಪಡಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.