ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

L R Shivaramegowda: ಅಂಬರೀಶ್ ಬಗ್ಗೆ ಕೇವಲ ಮಾತು: ಶಿವರಾಮೇಗೌಡರದ್ದು ಎನ್ನಲಾದ ಆಡಿಯೋ ವೈರಲ್

Ambareesh: ಮಾಜಿ ಸಂಸದ ಎಲ್‌.ಆರ್‌. ಶಿವರಾಮೇಗೌಡ ಅವರು ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಇತ್ತೀಚೆಗೆ ವಾಗ್ದಾಳಿ ನಡೆಸಿದ್ದರು. ಮಂಡ್ಯದವರನ್ನು ನರಸತ್ತವರು, ಗಂಡಸರಾಗಿ, ಕೈಗೆ ಬಳೆ ತೊಟ್ಟುಕೊಳ್ಳಬೇಡಿ ಎಂದು ಜಿಲ್ಲೆಯ ರಾಜಕೀಯ ಮುಖಂಡರಿಗೆ ಶಿವರಾಮೇಗೌಡ ಅವರು ಹೇಳಿದ್ದರು. ಇದೀಗ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಮತ್ತು ಜೆಡಿಎಸ್ ಕಾರ್ಯಕರ್ತನೊಬ್ಬರೊಂದಿಗೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ.

ಶಿವರಾಮೇಗೌಡ

ಮಾಜಿ ಸಂಸದ ಎಲ್‌.ಆರ್‌. ಶಿವರಾಮೇಗೌಡ (Shivaramegowda) ಅವರು ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಇತ್ತೀಚೆಗೆ ವಾಗ್ದಾಳಿ ನಡೆಸಿದ್ದರು. ಮಂಡ್ಯದವರನ್ನು ನರಸತ್ತವರು, ಗಂಡಸರಾಗಿ, ಕೈಗೆ ಬಳೆ ತೊಟ್ಟುಕೊಳ್ಳಬೇಡಿ ಎಂದು ಜಿಲ್ಲೆಯ ರಾಜಕೀಯ ಮುಖಂಡರಿಗೆ ಶಿವರಾಮೇಗೌಡ ಅವರು ಹೇಳಿದ್ದರು. ಇದೀಗ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಮತ್ತು ಜೆಡಿಎಸ್ ಕಾರ್ಯಕರ್ತನೊಬ್ಬರೊಂದಿಗೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಹಾಗೂ ಮಾಜಿ ಸಚಿವ ದಿವಂಗತ ನಟ ಅಂಬರೀಶ್ (ambreesh) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಇದೀಗ ಜೆಡಿಎಸ್ ಕಾರ್ಯಕರ್ತನೊಬ್ಬರೊಂದಿಗೆ ದೂರವಾಣಿ ಸಂಭಾಷಣೆ ವೇಳೆ ಅವರು ಅಶ್ಲೀಲ ಹಾಗೂ ಅವಾಚ್ಯ ಪದಗಳನ್ನು ಬಳಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ದಿವಂಗತ ನಟ ಅಂಬರೀಶ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ ಈ ದೂರವಾಣಿ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: Karthi: ಎರಡೇ ವಾರಕ್ಕೆ ಒಟಿಟಿಗೆ ಬಂತು ಕಾರ್ತಿ ಸಿನಿಮಾ! ಸ್ಟ್ರೀಮಿಂಗ್‌ ಎಲ್ಲಿ?

ವೈರಲ್ ಆಗಿರುವ ಸಂಭಾಷಣೆಯಲ್ಲಿ, ಮಾತಿನ ಭರದಲ್ಲಿ ಶಿವರಾಮೇಗೌಡ ಹಲವು ರಾಜಕೀಯ ವಿಚಾರಗಳು ಹಾಗೂ ತಮ್ಮ ಅಸಮಾಧಾನಗಳನ್ನು ಬಹಿರಂಗಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ ಕಿಡಿಕಾರಿರುವ ಅವರು, “ಲೋಕಸಭೆ ಉಪಚುನಾವಣೆಗೆ ಟಿಕೆಟ್ ನೀಡಿ ನನ್ನಿಂದ ಸುಮಾರು 36 ಕೋಟಿ ರೂಪಾಯಿ ಖರ್ಚು ಮಾಡಿಸಿದರು. ಆದರೆ ನಂತರ ಮತ್ತೆ ಟಿಕೆಟ್ ನೀಡದೆ ನನ್ನನ್ನು ಮೋಸಗೊಳಿಸಿದರು” ಎಂದು ಆರೋಪಿಸಿದ್ದಾರೆ.

ಮಾಜಿ ಸಂಸದ ದಿವಂಗತ ಮಾದೇಗೌಡ ಹಾಗೂ ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧವೂ ಅವಾಚ್ಯ ಭಾಷೆಯಲ್ಲಿ ಟೀಕೆ ಮಾಡಿರುವುದು ಆಡಿಯೋದಲ್ಲಿ ಕೇಳಿ ಬಂದಿದೆ ಎನ್ನಲಾಗಿದೆ. “ಅಂಬರೀಶ್ ಅವರನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಬಂದೆ, ಆದರೆ ಆತ ತೊಳೆದುಬಿಟ್ಟು ಹೋದ ” ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Border 3: ‘ಬಾರ್ಡರ್ 3’ ಬರೋದು ಕನ್ಫರ್ಮ್‌; ರಿಲೀಸ್‌ ಯಾವಾಗ?

ಪಕ್ಷದೊಳಗಿನ ನಾಯಕತ್ವದ ರಾಜಕಾರಣವನ್ನು ಪ್ರಶ್ನಿಸಿರುವ ಅವರು, ತಮ್ಮದೇ ಪಕ್ಷದ ಚಲುವರಾಯಸ್ವಾಮಿ, ಮಾಜಿ ಸಂಸದ ದಿವಂಗತ ಮಾದೇಗೌಡ ಹಾಗೂ ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧವೂ ಅವಾಚ್ಯ ಭಾಷೆಯಲ್ಲಿ ಟೀಕೆ ಮಾಡಿರುವುದು ಆಡಿಯೋದಲ್ಲಿ ಕೇಳಿಬರುತ್ತಿದೆ.

Yashaswi Devadiga

View all posts by this author