ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Laxmi Hebbalkar: ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

Laxmi Hebbalkar: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಾಂಗ್ರೆಸ್ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಹೊಂದಿರುವ ಪಕ್ಷ. ಸರ್ವಜನಾಂಗಕ್ಕೂ ಬೇಕಾಗಿರುವ ಪಕ್ಷ ಕಾಂಗ್ರೆಸ್ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

Profile Siddalinga Swamy Apr 1, 2025 8:10 PM

ಬೆಳಗಾವಿ: ಕರ್ನಾಟಕ ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿ. ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೇಂದ್ರ ಸರ್ಕಾರವೇ ಜನ ಸಾಮಾನ್ಯರಿಗೆ ಆರ್ಥಿಕೆ ಹೊರೆ ಹೆಚ್ಚಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಕಿಡಿಕಾರಿದರು. ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಧನ ಬೆಲೆ ಏರಿಕೆ, ಗ್ಯಾಸ್, ಪ್ರತಿಯೊಂದು ದಿನಸಿ ಬೆಲೆಗಳ ಏರಿಕೆಯಾಗಿದೆ. ಇದರ ಬಗ್ಗೆ ಮೊದಲು ಬಿಜೆಪಿಯವರು ಪ್ರಶ್ನಿಸಲಿ, ಹಾಲಿನ ದರ ಏರಿಸಿರುವುದರಿಂದ ರೈತರಿಗೆ ಅನುಕೂಲ ಆಗಿದೆ ಎಂದು ತಿರುಗೇಟು ನೀಡಿದರು.

ರಾಜ್ಯ ಬಿಜೆಪಿಯಲ್ಲಿ ಘಟಾನುಘಟಿ ನಾಯಕರಿದ್ದಾರೆ, ರಾಜ್ಯಕ್ಕೆ ನ್ಯಾಯ ಕೊಡಿಸಲಿ. ನಮ್ಮ ಹಕ್ಕು ನಮ್ಮ ತೆರಿಗೆ ಅಂತ ಹೋರಾಟ ಮಾಡಿದರೂ ಪ್ರಯೋಜವಾಗಲಿಲ್ಲ. ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗೆ ಇದ್ಯಾ?. ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿದರೆ ಪ್ರಯೋಜನವಿಲ್ಲ. ಕೇಂದ್ರದಲ್ಲಿ ಪ್ರಶ್ನಿಸಲಾಗದ ನಾಯಕರು ಈಗ ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಲು ಮುಂದಾಗಿರುವುದು ಹಾಸ್ಯಸ್ಪದ ಎಂದು ಸಚಿವರು ಟೀಕಿಸಿದರು.

ಗುತ್ತಿಗೆದಾರರ ಸಂಕಷ್ಟಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಹೊಣೆ

ಬಿಜೆಪಿ ಸರ್ಕಾರ ಕಡೇ ದಿನಗಳಲ್ಲಿ ಮಾಡಿದ ತಪ್ಪಿನಿಂದಾಗಿ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಕ್ಕ ಸಿಕ್ಕಂತೆ ಟೆಂಡರ್ ಮಾಡಿ, ಯಾವುದೇ ಹಣ ಬಿಡುಗಡೆ ಮಾಡದೇ ಹೋದರು. ಇದೀಗ ಹಣ ಬಿಡುಗಡೆ ಮಾಡಿ ಅಂತ ನಮ್ಮನ್ನು ಕೇಳುತ್ತಿದ್ದಾರೆ. ಗುತ್ತಿಗೆದಾರರ ಸಂಕಷ್ಟಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಹೊಣೆ ಎಂದು ದೂರಿದರು.

ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಾಂಗ್ರೆಸ್ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಹೊಂದಿರುವ ಪಕ್ಷ. ಸರ್ವಜನಾಂಗಕ್ಕೂ ಬೇಕಾಗಿರುವ ಪಕ್ಷ ಕಾಂಗ್ರೆಸ್ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಈ ಸುದ್ದಿಯನ್ನೂ ಓದಿ | DK Shivakumar: ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ʼಭಾರತ ರತ್ನʼ ನೀಡಲು ಕೇಂದ್ರ ಸರ್ಕಾರಕ್ಕೆ ಡಿ.ಕೆ.ಶಿವಕುಮಾರ್ ಮನವಿ

ಗೃಹಲಕ್ಷ್ಮಿ ಹಣ ಬಿಡುಗಡೆ

ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವೂ ಈಗಾಗಲೇ ಫಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಜತೆಗೆ ಫೆಬ್ರವರಿ ತಿಂಗಳ ಹಣ ಕೂಡ ಈಗಾಗಲೇ ಬಿಡುಗಡೆಯಾಗಿದ್ದು, ಶೀಘ್ರವೇ ಫೆಬ್ರವರಿ ತಿಂಗಳ ಹಣ ಸಂದಾಯವಾಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.