ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Laxmi Hebbalkar: ನರೇಗಾ ಅನುದಾನ ವಿಳಂಬದ ಬಗ್ಗೆ ಬಿಜೆಪಿಗರು ಮಾತಾಡಲಿ: ಲಕ್ಷ್ಮಿ ಹೆಬ್ಬಾಳ್ಕರ್

Laxmi Hebbalkar: ದುಡಿಯುವ ಕೈಗಳಿಗೆ ಹಣ ಸಿಗಲಿ ಎಂಬ ಉದ್ದೇಶದಿಂದ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ನರೇಗಾ ಯೋಜನೆ ಆರಂಭಿಸಿದರು. ಆದರೆ, ಕಳೆದ ಐದು ತಿಂಗಳಿಂದ ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರಿಗೆ ಸಂಬಳ ಆಗಿಲ್ಲ. ಕೇಂದ್ರದ ನಾಯಕರೊಂದಿಗೆ ಮಾತನಾಡಿ ಬಿಜೆಪಿ ನಾಯಕರು ನರೇಗಾ ಯೋಜನೆಯ ಹಣ ಬಿಡುಗಡೆ ಮಾಡಿಸಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ.

ನರೇಗಾ ಅನುದಾನ ವಿಳಂಬದ ಬಗ್ಗೆ ಬಿಜೆಪಿಗರು ಮಾತಾಡಲಿ: ಲಕ್ಷ್ಮಿ ಹೆಬ್ಬಾಳ್ಕರ್

Profile Siddalinga Swamy Jun 20, 2025 11:30 PM

ಉಡುಪಿ: ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪಲು ಒಂದು ತಿಂಗಳು ತಡವಾದರೂ ಟೀಕಿಸುವ ಬಿಜೆಪಿ ನಾಯಕರು, ದುಡಿಯುವ ಕೈಗಳಿಗೆ ಸಿಗುವ ನರೇಗಾ ಅನುದಾನ ನೀಡದ ಕೇಂದ್ರ ಸರ್ಕಾರದ ವಿರುದ್ಧ ಮಾತಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಆಗ್ರಹಿಸಿದರು. ದುಡಿಯುವ ಕೈಗಳಿಗೆ ಹಣ ಸಿಗಲಿ ಎಂಬ ಉದ್ದೇಶದಿಂದ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ನರೇಗಾ ಯೋಜನೆ ಆರಂಭಿಸಿದರು. ಆದರೆ, ಕಳೆದ ಐದು ತಿಂಗಳಿಂದ ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರಿಗೆ ಸಂಬಳ ಆಗಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಗೃಹಲಕ್ಷ್ಮಿ ಯೋಜನೆ ನಿರಂತರವಾಗಿ ನಡೆಯುತ್ತಿದ್ದು, ಒಂದು ತಿಂಗಳು ಹಣ ಬರುವುದು ತಡವಾದರೂ ಲಕ್ಷ್ಮೀ ಅಕ್ಕ ಗೃಹಲಕ್ಷ್ಮಿ ದುಡ್ ಎಲ್ಲಿ ಅಕ್ಕ ಅಂತಾರೆ, ಕೇಂದ್ರದ ನಾಯಕರೊಂದಿಗೆ ಮಾತನಾಡಿ ಬಿಜೆಪಿ ನಾಯಕರು ನರೇಗಾ ಯೋಜನೆಯ ಹಣ ಬಿಡುಗಡೆ ಮಾಡಿಸಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಈ ಸುದ್ದಿಯನ್ನೂ ಓದಿ | Flight Cancelled: 16 ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಏರ್‌ ಇಂಡಿಯಾ ಕಾರ್ಯಾಚರಣೆ ಕಡಿತ; ಮಹತ್ವದ ನಿರ್ಧಾರ ಘೋಷಿಸಿದ ಸಂಸ್ಥೆ

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5ರಷ್ಟು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆಯಷ್ಟೇ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಕಿಡಿ ಕಾರಿದರು‌. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ರಾಜಕಾರಣ ಮಾಡಲು ಬೇರೆ ವಿಚಾರ ಉಳಿದಿಲ್ಲ. ಮೊದಲು ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದರು. ಗ್ಯಾರಂಟಿ ಯೋಜನೆಗಳು ಯಶಸ್ವಿ ಆಗುವುದಿಲ್ಲ ಎಂದರು. ನಾವು 136 ಸೀಟು ಗೆದ್ದರೂ ಆರು ತಿಂಗಳು ಸರ್ಕಾರ ಉಳಿಯಲ್ಲ ಎಂದರು, ಜನರ ಭಾವನೆಗಳ ಜತೆ ಬಿಜೆಪಿ ಆಟವಾಡುತ್ತದೆ. ಮಾತನಾಡಲು ಅವರಿಗೆ ಬೇರೇನೂ ಉಳಿದಿಲ್ಲ ಎಂದು ಆರೋಪಿಸಿದರು.

ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ

ಈ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಲಕ್ಷಣ ಇದೆ.‌ ಹೀಗಾಗಿ ಮಳೆ ಅವಾಂತರ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಯಾವುದೇ ಪ್ರಮಾಣದಲ್ಲಿ ಮಳೆ ಬಂದರೂ ನಾವು ಸಿದ್ಧವಾಗಿದ್ದೇವೆ ಎಂದು ಸಚಿವರು ಹೇಳಿದರು.

ಸೂಲಿಬೆಲೆ ಸುಳ್ಳಿನ ಚಕ್ರವರ್ತಿ

ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸಕ್ಕೆ ಎನ್ಎಸ್‌ಯುಐ ಆಕ್ಷೇಪ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ, ಭಗವದ್ಗೀತೆ, ಮಹಾಭಾರತ ಹೇಳುತ್ತಾರೆ. ಆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು ಎಂದು ಆರೋಪಿಸಿದರು.

ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ, ಬೆಳ್ಳಗೆ ಇರುವುದನ್ನು ಕಪ್ಪು ಮಾಡುವುದರಲ್ಲಿ ನಿಸ್ಸೀಮರು. ನಾವು ಚಕ್ರವರ್ತಿ ಸೂಲಿಬೆಲೆ ಅವರಿಂದ ಪಾಠ ಕೇಳಬೇಕಾಗಿಲ್ಲ. ಮೂರು ದಿನ ಉಡುಪಿ ಜಿಲ್ಲೆಯಲ್ಲಿ ಸೂಲಿಬೆಲೆ ಇರುವ ವಿಚಾರ ಪೊಲೀಸ್ ವರಿಷ್ಠಾಧಿಕಾರಿಗಳಿಂದ ತಿಳಿಯಿತು. ಖಂಡಿತವಾಗಿ ಸೂಲಿಬೆಲೆ ತಮ್ಮ ಪ್ರವಾಸ ಮಾಡಬಹುದು. ದ್ವೇಷದ ಭಾಷಣ, ಸುಳ್ಳು ಬಿತ್ತುವ ಕೆಲಸ, ವಿಷ ಬೀಜ ಬಿತ್ತುವ ಕೆಲಸ ಮಾಡದಿರಲಿ. ಯಾಕೆಂದರೆ ಉಡುಪಿ ಶಾಂತಿ ಪ್ರಿಯರ ಜಿಲ್ಲೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನೂ ಓದಿ | Karnataka Rains: ನಾಳೆ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್‌ ಘೋಷಣೆ