ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Laxmi Hebbalkar: ಗ್ರಾಮ ಲೆಕ್ಕಾಧಿಕಾರಿಗಳು ಜನ ಸ್ನೇಹಿಯಾಗಿ ಕಾರ್ಯ ನಿರ್ವಹಿಸಿ-ಲಕ್ಷ್ಮೀ ಹೆಬ್ಬಾಳ್ಕರ್

Laxmi Hebbalkar: ಕಂದಾಯ ಇಲಾಖೆಯಲ್ಲಿ ಜನ ಸಾಮಾನ್ಯರ ಕೆಲಸ ಕಾರ್ಯಗಳು ಮತ್ತಷ್ಟು ಚುರುಕಾಗುವ ದೃಷ್ಟಿಯಿಂದ ‌ನಮ್ಮ ಸರ್ಕಾರದ ವತಿಯಿಂದ ‌ಗ್ರಾಮ ಲೆಕ್ಕಾಧಿಕಾರಿಗಳಿಗೆ (ವಿಎ) ಲ್ಯಾಪ್‌ಟಾಪ್ ನೀಡಲಾಗಿದೆ‌. ಇದರಿಂದ ಅಧಿಕಾರಿ ವರ್ಗ ಜನ ಸಾಮಾನ್ಯರಿಗೆ ಉತ್ತಮ ಸೇವೆ ನೀಡಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಉಡುಪಿ: ಗ್ರಾಮ ಲೆಕ್ಕಾಧಿಕಾರಿಗಳು (ವಿಎ) ಜನ ಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು, ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಹೇಳಿದರು. ಉಡುಪಿಯ ‌ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲೆಯ ‌ಗ್ರಾಮ ಲೆಕ್ಕಾಧಿಕಾರಿಗಳಿಗೆ (ವಿಎ) ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯಲ್ಲಿ ಜನ ಸಾಮಾನ್ಯರ ಕೆಲಸ ಕಾರ್ಯಗಳು ಮತ್ತಷ್ಟು ಚುರುಕಾಗುವ ದೃಷ್ಟಿಯಿಂದ ‌ನಮ್ಮ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ನೀಡಲಾಗಿದೆ‌. ಇದರಿಂದ ಅಧಿಕಾರಿ ವರ್ಗ ಜನ ಸಾಮಾನ್ಯರಿಗೆ ಉತ್ತಮ ಸೇವೆ ನೀಡಲಿ ಎಂಬುದೇ ನನ್ನ ಆಶಯ ಎಂದರು‌‌‌.

ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ, ಕೆಲಸದ ಬಗ್ಗೆ ನಿಸ್ವಾರ್ಥ ಇರುವ ವ್ಯಕ್ತಿ. ಹಿಂದಿನ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಕೃಷಿ ಮಂತ್ರಿಯಾಗಿ ಕೃಷಿ ವಲಯದಲ್ಲಿ ಕ್ರಾಂತಿ ಮಾಡಿದರು. ಕೃಷಿ ಹೊಂಡ ತೆರೆಯುವ ರೈತರಿಗೆ ಅನುಕೂಲ ಮಾಡಿಕೊಟ್ಟರು. ಕುಮಾರಸ್ವಾಮಿ ಅವರ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿಯೂ ಕ್ರಾಂತಿಕಾರಿ ಬದಲಾವಣೆ ಮಾಡಿದರು‌. ಈಗಲೂ ಕಂದಾಯ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು‌. ಈ ವೇಳೆ ಜಿಲ್ಲಾಧಿಕಾರಿ ‌ಸ್ವರೂಪ ಟಿ.ಎಚ್, ಜಿಲ್ಲಾ ಪಂಚಾಯಿತಿಯ ಸಿಇಒ ಪ್ರತೀಕ್ ಬಾಯಲ್ ಉಪಸ್ಥಿತರಿದ್ದರು.

Laxmi Hebbalkar: ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5ರಷ್ಟು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆಯಷ್ಟೇ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಕಿಡಿ ಕಾರಿದರು‌. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ರಾಜಕಾರಣ ಮಾಡಲು ಬೇರೆ ವಿಚಾರ ಉಳಿದಿಲ್ಲ. ಮೊದಲು ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದರು. ಗ್ಯಾರಂಟಿ ಯೋಜನೆಗಳು ಯಶಸ್ವಿ ಆಗುವುದಿಲ್ಲ ಎಂದರು. ನಾವು 136 ಸೀಟು ಗೆದ್ದರೂ ಆರು ತಿಂಗಳು ಸರ್ಕಾರ ಉಳಿಯಲ್ಲ ಎಂದರು, ಜನರ ಭಾವನೆಗಳ ಜತೆ ಬಿಜೆಪಿ ಆಟವಾಡುತ್ತದೆ. ಮಾತನಾಡಲು ಅವರಿಗೆ ಬೇರೇನೂ ಉಳಿದಿಲ್ಲ ಎಂದು ಆರೋಪಿಸಿದರು.

ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ

ಈ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಲಕ್ಷಣ ಇದೆ.‌ ಹೀಗಾಗಿ ಮಳೆ ಅವಾಂತರ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಯಾವುದೇ ಪ್ರಮಾಣದಲ್ಲಿ ಮಳೆ ಬಂದರೂ ನಾವು ಸಿದ್ಧವಾಗಿದ್ದೇವೆ ಎಂದು ಸಚಿವರು ಹೇಳಿದರು.

ಸೂಲಿಬೆಲೆ ಸುಳ್ಳಿನ ಚಕ್ರವರ್ತಿ

ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸಕ್ಕೆ ಎನ್ಎಸ್‌ಯುಐ ಆಕ್ಷೇಪ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ, ಭಗವದ್ಗೀತೆ, ಮಹಾಭಾರತ ಹೇಳುತ್ತಾರೆ. ಆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು ಎಂದು ಆರೋಪಿಸಿದರು.

ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ, ಬೆಳ್ಳಗೆ ಇರುವುದನ್ನು ಕಪ್ಪು ಮಾಡುವುದರಲ್ಲಿ ನಿಸ್ಸೀಮರು. ನಾವು ಚಕ್ರವರ್ತಿ ಸೂಲಿಬೆಲೆ ಅವರಿಂದ ಪಾಠ ಕೇಳಬೇಕಾಗಿಲ್ಲ. ಮೂರು ದಿನ ಉಡುಪಿ ಜಿಲ್ಲೆಯಲ್ಲಿ ಸೂಲಿಬೆಲೆ ಇರುವ ವಿಚಾರ ಪೊಲೀಸ್ ವರಿಷ್ಠಾಧಿಕಾರಿಗಳಿಂದ ತಿಳಿಯಿತು. ಖಂಡಿತವಾಗಿ ಸೂಲಿಬೆಲೆ ತಮ್ಮ ಪ್ರವಾಸ ಮಾಡಬಹುದು. ದ್ವೇಷದ ಭಾಷಣ, ಸುಳ್ಳು ಬಿತ್ತುವ ಕೆಲಸ, ವಿಷ ಬೀಜ ಬಿತ್ತುವ ಕೆಲಸ ಮಾಡದಿರಲಿ. ಯಾಕೆಂದರೆ ಉಡುಪಿ ಶಾಂತಿ ಪ್ರಿಯರ ಜಿಲ್ಲೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನೂ ಓದಿ | Flight Cancelled: 16 ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಏರ್‌ ಇಂಡಿಯಾ ಕಾರ್ಯಾಚರಣೆ ಕಡಿತ; ಮಹತ್ವದ ನಿರ್ಧಾರ ಘೋಷಿಸಿದ ಸಂಸ್ಥೆ