ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Laxmi Hebbalkar: ಮಹಿಳೆಯರನ್ನು ಅಪಮಾನ ಮಾಡುವುದು ಬಿಜೆಪಿಗರಿಗೆ ಚಾಳಿಯಾಗಿ ಬಿಟ್ಟಿದೆ: ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

Laxmi Hebbalkar: ಮಹಿಳೆಯರನ್ನು ಅಪಮಾನ ಮಾಡುವುದು ಬಿಜೆಪಿಗರಿಗೆ ಚಾಳಿಯಾಗಿ ಬಿಟ್ಟಿದೆ. ಎಂಎಲ್‌ಸಿ ರವಿಕುಮಾರ್ ಹೇಳಿಕೆಯಿಂದ ಬಿಜೆಪಿಯವರ ಎಲ್ಲರ ಮನಸ್ಥಿತಿ ಒಂದೇ ರೀತಿ ಇದೆ ಎಂಬಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

ಮಹಿಳೆಯರನ್ನು ಅವಮಾನಿಸುವುದು ಬಿಜೆಪಿಗರಿಗೆ ಚಾಳಿಯಾಗಿದೆ: ಹೆಬ್ಬಾಳ್ಕರ್

Profile Siddalinga Swamy Jul 4, 2025 3:32 PM

ಬೀದರ್: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೈತಿಕ ಸ್ಥೈರ್ಯ ಕುಗ್ಗಬೇಕು, ಮಹಿಳೆಯರು ಯಾರೂ ಮುಂದೆ ಬರಬಾರದು ಎಂಬುದು ಬಿಜೆಪಿಗರ ಮನಸ್ಥಿತಿ. ಬಿಜೆಪಿಯವರು ತತ್ವ ಸಿದ್ದಾಂತ ಅಂತ ಹೇಳುತ್ತಾರೆ. ಆದರೆ ಈ ರೀತಿ ಮನುಸ್ಮೃತಿಯನ್ನು ಎಲ್ಲಾ ಕಡೆ ಬಿತ್ತನೆ ಮಾಡಲು ಹೊರಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಆರೋಪಿಸಿದ್ದಾರೆ. ಬೀದರ್‌ನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರನ್ನು ಅಪಮಾನ ಮಾಡುವುದು ಬಿಜೆಪಿಗರಿಗೆ ಚಾಳಿಯಾಗಿ ಬಿಟ್ಟಿದೆ. ಎಂಎಲ್‌ಸಿ ರವಿಕುಮಾರ್ ಹೇಳಿಕೆಯಿಂದ ಬಿಜೆಪಿಯವರ ಎಲ್ಲರ ಮನಸ್ಥಿತಿ ಒಂದೇ ರೀತಿ ಇದೆ ಎಂಬಂತಾಗಿದೆ ಎಂದು ದೂರಿದರು.

ಬಿಜೆಪಿಗರು ಪದೇ ಪದೆ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಇದು ಅವರ ಹಾಗೂ ಆ ಪಕ್ಷದ ಮನಸ್ಥಿತಿಯನ್ನು ತೋರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಚಿವರು, ಕೆಟ್ಟ ಬಾಯಿ, ಹೊಲಸು ಬಾಯಿ ಏನು ಮಾತಾಡಿದರೂ ಜನ ಸಹಿಸುತ್ತಾರೆ, ಕರ್ನಾಟಕ ರಾಜ್ಯದ ಜನ ಅವರನ್ನು ಬದುಕಿಸುತ್ತಾರೆ ಎಂಬ ಭಾವನೆ ಅವರಿಗೆ ಬಂದು ಬಿಟ್ಟಿದೆ. ಇದು ಅತ್ಯಂತ ಖಂಡನೀಯ ಎಂದರು.

ಈ ಸುದ್ದಿಯನ್ನೂ ಓದಿ | Laxmi Hebbalkar: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನಗಳು ದೂರವಿಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ನಾನು ಪಕ್ಷದ ಶಿಸ್ತಿನ ಸಿಪಾಯಿ

ರಾಜ್ಯದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ವಿಚಾರ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ನನ್ನ ಕಡೆಯಿಂದ ಯಾವುದೇ ಉತ್ತರ ನಿಮಗೆ ಸಿಗುವುದಿಲ್ಲ. ನಾನು ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ, ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ದ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.