ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಂದೇ ಮಾತರಂ ಗೀತೆ ವಿವಾದ; ಆದೇಶ ಮರುಪರಿಶೀಲಿಸಲು ಸಿಎಂ ಡಿಕೆಶಿಗೆ ರಾಜ್ಯಪಾಲರ ಪತ್ರ

Vande Mataram row: ವಿಧಾನಮಂಡಲ ವಿಶೇಷ ಅಧಿವೇಶನದ ಮೊದಲ ದಿನವಾದ ಸೋಮವಾರ ವಿಧಾನ ಪರಿಷತ್ತಿನಲ್ಲಿ ‘ವಂದೇ ಮಾತರಂ’ ಗೀತೆಯ ಗಾಯನವನ್ನು ಎರಡು ಚರಣಗಳಿಗೆ ಮೊಟಕುಗೊಳಿಸಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿಬಿದ್ದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ.

ವಂದೇ ಮಾತರಂ ಗೀತೆ ವಿವಾದ; ಸಿಎಂ ಡಿಕೆಶಿಗೆ ರಾಜ್ಯಪಾಲರ ಪತ್ರ

-

Prabhakara R
Prabhakara R Sep 22, 2026 3:28 PM

ಬೆಂಗಳೂರು: ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ (Vande Mataram row) ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಕರ್ನಾಟಕ ಸರ್ಕಾರ ಹೊರಡಿಸಿರುವ ಆದೇಶಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಗವರ್ನರ್‌ ಪತ್ರ ಬರೆದಿದ್ದಾರೆ.

ರಾಜ್ಯ ಸರ್ಕಾರದ ನಿರ್ಧಾರವು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಪತ್ರದಲ್ಲಿ ರಾಜ್ಯಪಾಲರು ಉಲ್ಲೇಖಿಸಿದ್ದು, ಸಂವಿಧಾನಾತ್ಮಕ ಅಂಶಗಳು ಹಾಗೂ ಕೇಂದ್ರ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ವಂದೇ ಮಾತರಂ ಕುರಿತ ರಾಜ್ಯ ಸರ್ಕಾರದ ಆದೇಶವನ್ನು ಮರುಪರಿಶೀಲಿಸುವಂತೆ ಸೂಚಿಸಿದ್ದಾರೆ.

ವಂದೇ ಮಾತರಂನ ಅಧಿಕೃತ ಆವೃತ್ತಿಯನ್ನು ಕೇಂದ್ರ ಗೃಹ ಸಚಿವಾಲಯ ನಿಗದಿಪಡಿಸಿದೆ. ರಾಷ್ಟ್ರೀಯ ಗೀತೆ ಹಾಗೂ ರಾಷ್ಟ್ರಗಾನದ ಕುರಿತು ನಿರ್ದಿಷ್ಟ ಆದೇಶಗಳನ್ನು ಹೊರಡಿಸಲಾಗಿದ್ದು, ರಾಜ್ಯಗಳೂ ಕೇಂದ್ರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸಾಮೂಹಿಕ ಗಾಯನ ಸಂದರ್ಭದಲ್ಲೂ ವಂದೇ ಮಾತರಂನ ಅಧಿಕೃತ ಆವೃತ್ತಿಯನ್ನೇ ಹಾಡಬೇಕು ಎಂದು ಕೇಂದ್ರದ ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ. ರಾಜ್ಯ ಸರ್ಕಾರದ ಕಾರ್ಯಕ್ರಮಗಳಿಗೆ ಪ್ರತ್ಯೇಕವಾಗಿ ಸಂಕ್ಷಿಪ್ತ ಅಥವಾ ಬದಲಾದ ಆವೃತ್ತಿಯನ್ನು ನಿಗದಿಪಡಿಸಲು ಅವಕಾಶವಿಲ್ಲ. ಇದು ಕೇವಲ ಆಡಳಿತಾತ್ಮಕ ಅನುಕೂಲದ ವಿಚಾರವಲ್ಲ. ರಾಷ್ಟ್ರೀಯ ಚಿಹ್ನೆಗೆ ಸಂಬಂಧಿಸಿದ ನಿಯಮಗಳ ಪಾಲನೆಯ ವಿಚಾರವಾಗಿದೆ ಎಂದು ರಾಜ್ಯಪಾಲರು ಉಲ್ಲೇಖಿಸಿದ್ದಾರೆ.

'ವಂದೇ ಮಾತರಂ'ಗೆ ಕತ್ತರಿ; ಕಾಂಗ್ರೆಸ್ ವಿರುದ್ಧ ಸಂಸತ್ತಿನಲ್ಲಿ ರಣಕಹಳೆ ಮೊಳಗಲಿದೆ ಎಂದ ಪ್ರಲ್ಹಾದ್‌ ಜೋಶಿ

ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ–1971ರ ಸೆಕ್ಷನ್ 3ರ ಅಡಿ ರಾಷ್ಟ್ರ ಗೀತೆಗೆ ನೀಡಲಾಗಿರುವ ರಕ್ಷಣೆಯನ್ನು ವಂದೇ ಮಾತರಂಗೂ ವಿಸ್ತರಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಂದೇ ಮಾತರಂ ಕುರಿತ ರಾಜ್ಯ ಸರ್ಕಾರದ ಆದೇಶವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸೂಚಿಸಿದ್ದಾರೆ.