#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Mamata Banerjee : 2026ರ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಇಲ್ಲ; ಮಮತಾ ಬ್ಯಾನರ್ಜಿಯಿಂದ ಮಹತ್ವದ ಘೋಷಣೆ

ಮುಂಬರಲಿರುವ ಪಶ್ಚಿಮ ಬಂಗಾಳದಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್​ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ, ತೃಣಮೂಲ ಕಾಂಗ್ರೆಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 294 ಸ್ಥಾನಗಳ ರಾಜ್ಯ ವಿಧಾನಸಭೆಯಲ್ಲಿ ಟಿಎಂಸಿ ಮೂರನೇ ಎರಡರಷ್ಟು ಬಹುಮತದೊಂದಿಗೆ 2026 ರ ಚುನಾವಣೆಯಲ್ಲಿ ಸ್ವಂತವಾಗಿ ಗೆಲ್ಲುತ್ತದೆ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಇಲ್ಲ ಎಂದ ಬಂಗಾಳ ಸಿಎಂ

Mamata Banerjee

Profile Vishakha Bhat Feb 11, 2025 12:47 PM

ಕೊಲ್ಕತ್ತಾ: 2026 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಚುನಾವಣೆ (West Bengal Election) ನಡೆಯಲಿದ್ದು, ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್​ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ, ತೃಣಮೂಲ ಕಾಂಗ್ರೆಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್, ಕಾಂಗ್ರೆಸ್ (Congress) ಅಥವಾ ಇತರ ಪಕ್ಷಗಳೊಂದಿಗೆ ಯಾವುದೇ ಮೈತ್ರಿಯನ್ನು ತಳ್ಳಿಹಾಕಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 294 ಸ್ಥಾನಗಳ ರಾಜ್ಯ ವಿಧಾನಸಭೆಯಲ್ಲಿ ಟಿಎಂಸಿ ಮೂರನೇ ಎರಡರಷ್ಟು ಬಹುಮತದೊಂದಿಗೆ 2026 ರ ಚುನಾವಣೆಯಲ್ಲಿ ಸ್ವಂತವಾಗಿ ಗೆಲ್ಲುತ್ತದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಕಾಂಗ್ರೆಸ್​ ಸಹಾಯ ಮಾಡಲಿಲ್ಲ, ಹರ್ಯಾಣದಲ್ಲಿ ಎಎಪಿ ಕಾಂಗ್ರೆಸ್​ಗೆ ಸಹಾಯ ಮಾಡಲಿಲ್ಲ, ಆದ್ದರಿಂದ ಎರಡೂ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ. ಎಲ್ಲರೂ ಒಗ್ಗಟ್ಟಾಗಿರಬೇಕು. ಆದರೆ ಬಂಗಾಳದಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ, ನಾವು ಒಂಟಿಯಾಗಿ ಹೋರಾಡುತ್ತೇವೆ, ನಾವೇ ಸಾಕು ಎಂದು ಬ್ಯಾನರ್ಜಿ ಹೇಳಿದ್ದಾರೆ. ಬಿಜೆಪಿ ಮೇಲೆ ಹರಿಹಾಯ್ದ ಮಮತಾ ಬ್ಯಾನರ್ಜಿ ಬಿಜೆಪಿ ವಿದೇಶಿಯರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸಬಹುದು, ಆದ್ದರಿಂದ ತಮ್ಮ ಪಕ್ಷದ ನಾಯಕರನ್ನು ಎಚ್ಚರದಿಂದಿರಿ ಎಂದು ಹೇಳಿದ್ದಾರೆ.



ಮಮತಾ ಬ್ಯಾನರ್ಜಿ ಅವರ ಈ ಹೇಳಿಕೆ ಬಂದ ನಂತರ ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಮಮತಾ ಬ್ಯಾನರ್ಜಿ ಅವರು ಯಾವಾಗಲೂ ಪಶ್ಚಿಮ ಬಂಗಾಳ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡಿದ್ದಾರೆ. ಕಾಂಗ್ರೆಸ್ ಇಂಡಿ ಮೈತ್ರಿಕೂಟದ ದೊಡ್ಡ ಭಾಗವಾಗಿದ್ದು, ಟಿಎಂಸಿ ಕಾಂಗ್ರೆಸ್‌ನೊಂದಿಗೆ ಸಂವಾದವನ್ನು ಮುಂದುವರೆಸಬೇಕು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Suvendu Adhikari: ಅಧಿಕಾರಕ್ಕೆ ಬಂದರೆ ಮಮತಾ ಬ್ಯಾನರ್ಜಿಯನ್ನು ಜೈಲಿಗೆ ಕಳಿಸ್ತೇವೆ: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಗುಡುಗು

ದೆಹಲಿ ಚುನಾವಣೆಯ ಪೂರ್ವದಲ್ಲಿ ಆಮ್‌ ಆದ್ಮಿ ಕೂಡ ಸ್ವತಂತ್ರವಾಗಿ ಸ್ವರ್ಧಿಸುವುದಾಗಿ ಹೇಳಿತ್ತು. ಆಪ್‌ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಕಾಂಗ್ರೆಸ್‌ ಮೈತ್ರಕೂಟದಿಂದ ಹೊರಬಂದು ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಇದೀಗ ಮಮತಾ ಬ್ಯಾನರ್ಜಿ ಕೂಡ ಇದೇ ನಿರ್ಧಾರ ಕೈಗೊಂಡಿದ್ದು, ಇಂಡಿಯಾ ಮೈತ್ರಿಕೂಟ ಇಲ್ಲಿಗೆ ಕೊನೆಗಾಣಲಿದೆಯಾ ಎಂಬ ಪ್ರಶ್ನೆ ಮೂಡಿದೆ.