ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಹಾಲಿನ ದರ ಏರಿಕೆ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

CM DK Shivakumar: ಹಾಲಿನ ದರ ಏರಿಕೆ ವಿಚಾರ ಕುರಿತು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್, 'ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ನನ್ನನ್ನು ಭೇಟಿಯಾಗಿ 12 ರೂ. ಹೆಚ್ಚಳ ಮಾಡಿ. ಅದರಲ್ಲಿ 2 ರೂ. ಸಂಘಗಳಿಗೆ ಕೊಡಿ ಎಂದು ಮನವಿ ಮಾಡಿದ್ದಾರೆ. ನೆರೆಯ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿನ ಪರಿಸ್ಥಿತಿಯ ಬಗ್ಗೆ ವರದಿಗಳನ್ನು ಪಡೆದು, ಪರಿಶೀಲಿಸಿದ ನಂತರ ಮುಂದಿನ ತೀರ್ಮಾನ ಮಾಡುತ್ತೇವೆ' ಎಂದು ಹೇಳಿದ್ದಾರೆ.

ಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ)

ಬೆಂಗಳೂರು, ಸೆ.26: ಹಾಲಿನ ದರ (Milk Price)‌ ಹೆಚ್ಚಳದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (CM DK Shivakumar) ಹೇಳಿದರು. ಫ್ರೀಡಂ ಪಾರ್ಕ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಅವರು ಪ್ರತಿಕ್ರಿಯೆ ನೀಡಿದರು.

ಹಾಲಿನ ದರ ಏರಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, 'ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ನನ್ನನ್ನು ಭೇಟಿಯಾಗಿ 12 ರೂ. ಹೆಚ್ಚಳ ಮಾಡಿ. ಅದರಲ್ಲಿ 2 ರೂ. ಸಂಘಗಳಿಗೆ ಕೊಡಿ ಎಂದು ಮನವಿ ಮಾಡಿದ್ದಾರೆ. ನೆರೆಯ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿನ ಪರಿಸ್ಥಿತಿಯ ಬಗ್ಗೆ ವರದಿಗಳನ್ನು ಪಡೆದು, ಪರಿಶೀಲಿಸಿದ ನಂತರ ಮುಂದಿನ ತೀರ್ಮಾನ ಮಾಡುತ್ತೇವೆ' ಎಂದು ಹೇಳಿದರು.

Congress Protest: ಎಸ್‌ಐಆರ್‌ ರದ್ದುಗೊಳಿಸಿ, ಹೊಸ ಪ್ರಕ್ರಿಯೆ ನಡೆಸಿ: ಕೇಂದ್ರ ಚುನಾವಣಾ ಆಯೋಗಕ್ಕೆ ಸಿಎಂ ಡಿಕೆಶಿ ಒತ್ತಾಯ

ಹಾಲಿನ ಪ್ರಸ್ತುತ ದರದಿಂದ ಸಂಘಗಳಿಗೆ ನಷ್ಟವಾಗುತ್ತಿದೆ. ಬೆಲೆ ವಿಚಾರದಲ್ಲಿ ರೈತರಲ್ಲಿ ಆಕ್ರೋಶವಿದೆ. 50 ಸಾವಿರ ಹಾಲು ಉತ್ಪಾದಕರು ಹಾಲಿನ ದರ ಏರಿಕೆಗೆ ಆಗ್ರಹಿಸಿದ್ದಾರೆ. ರೈತರನ್ನು ಹಾಗೂ ಒಕ್ಕೂಟಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.