ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Laxmi Hebbalkar: ನಾವು ಕೂಡ ರೈತರು; ಕಬ್ಬು ಬೆಳೆಗಾರರಿಗೆ ಅನ್ಯಾಯ ಆಗದಂತೆ ಕ್ರಮ ಎಂದ ಹೆಬ್ಬಾಳ್ಕರ್

Sugarcane Farmers Protest: ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ. ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಕಾರ್ಖಾನೆ ಮಾಲೀಕರು, ರೈತರು ಸೇರಿ ಸಭೆ ಮಾಡುತ್ತೇವೆ. ದರದ ಬಗ್ಗೆ ಮಾತನಾಡಲು ಹೋದರೆ ಬೇರೆ ರೀತಿ ಆಗುತ್ತೆ. ರೈತರಿಗೆ ದಕ್ಕೆಯಾಗದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ‌ಅವರು ಹೇಳಿದ್ದಾರೆ.

ಕಬ್ಬು ಬೆಳೆಗಾರರಿಗೆ ಅನ್ಯಾಯ ಆಗದಂತೆ ಕ್ರಮ ಎಂದ ಹೆಬ್ಬಾಳ್ಕರ್

-

Profile Siddalinga Swamy Nov 4, 2025 7:04 PM

ಬೆಂಗಳೂರು‌, ನ.4: ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ. ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ತಿಳಿಸಿದ್ದಾರೆ. ಕಬ್ಬು ಬೆಲೆ ಹೆಚ್ಚಳಕ್ಕೆ ರೈತರ ಪ್ರತಿಭಟನೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದ ಸಚಿವರು,‌ ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದೆ. ನಾನು ಬ್ಯೂಸಿ ಇದ್ದ ಕಾರಣ ಮೀಟಿಂಗ್‌ನಲ್ಲಿ ಇರಲಿಲ್ಲ. ನನ್ನ ತಮ್ಮ ಹಾಗೂ ಮಗ ರೈತರ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.

ಕಾರ್ಖಾನೆ ಮಾಲೀಕರು, ರೈತರು ಸೇರಿ ಸಭೆ ಮಾಡುತ್ತೇವೆ. ದರದ ಬಗ್ಗೆ ಮಾತನಾಡಲು ಹೋದರೆ ಬೇರೆ ರೀತಿ ಆಗುತ್ತೆ. ರೈತರಿಗೆ ದಕ್ಕೆಯಾಗದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ‌ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ರೈತರ ಪ್ರತಿಭಟನೆಯಲ್ಲಿ ‌ಬಿಜೆಪಿ ನಾಯಕರು ಭಾಗಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ರೈತರ ಹೋರಾಟದಲ್ಲಿ ಎಲ್ಲರೂ ಭಾಗಿಯಾಗಲಿ, ರಾಜಕೀಯ ಬಿಟ್ಟು ಪ್ರತಿಭಟನೆಗೆ ಹೋಗಲಿ. ರೈತರ ಬಗೆಗಿನ ಬಿಜೆಪಿ ಹೋರಾಟ ನಮಗೂ ಗೊತ್ತಿದೆ, ನಿಮಗೂ ಗೊತ್ತಿದೆ ಎಂದರು.

ಕೇಂದ್ರ ಸರ್ಕಾರ ರೈತರ ಪ್ರತಿಭಟನೆಯನ್ನು ಹೇಗೆಲ್ಲಾ ಹತ್ತಿಕ್ಕಿತು. ಈ ಹೋರಾಟದಲ್ಲಿ ಎಷ್ಟು ಜನ ರೈತರು ತೀರಿಕೊಂಡರು ಎನ್ನುವುದು ಗೊತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇರಲಿ.‌ ಸದ್ಯಕ್ಕೆ ನಾನು ಈ ಬಗ್ಗೆ ಏನೂ ಮಾತನಾಡಲ್ಲ ಎಂದು‌ ಹೇಳಿದರು.

ರಾಹುಲ್ ಗಾಂಧಿ ಭಾಗಿ ನಿರೀಕ್ಷೆ

ನವೆಂಬರ್ 19ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಆಹ್ವಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಹುಲ್ ಗಾಂಧಿ ಅವರ ಬಳಿ‌ ನವೆಂಬರ್ 19 ಮತ್ತು 20ಕ್ಕೆ ಸಮಯ ಕೊಡಿ ಅಂತ ಕೇಳಿದ್ದೇವೆ. ಬೆಂಗಳೂರಿನಲ್ಲಿ ಟೆಕ್‌ ಶೃಂಗ ಸಭೆ ನಡೆಯಲಿದ್ದು, ಸಮಯ ಹೊಂದಿಸಿಕೊಂಡು ಹೇಳುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Bihar Assembly Election: ಬಿಹಾರ ವಿಧಾನಸಭಾ ಚುನಾವಣೆ ಯಾವಾಗ? ಎಷ್ಟು ಹಂತಗಳಲ್ಲಿ ಮತದಾನ? ಸಂಪೂರ್ಣ ವಿವರ ಇಲ್ಲಿದೆ

ಅಂಗನವಾಡಿಗಳನ್ನು ಪ್ರಥಮ ಬಾರಿಗೆ ಮೈಸೂರಲ್ಲಿ ಆರಂಭ ಮಾಡಿದ್ದು ಇಂದಿರಾ ಗಾಂಧಿ ಅವರು, ಎಲ್ಲಾ ಬಡ ಮಕ್ಕಳಿಗೆ ಪೌಷ್ಟಿಕಾಂಶ ಆಹಾರ ಕೊಡಬೇಕು ಅಂತ ಆರಂಭಿಸಲಾಯಿತು. ಇದೀಗ ಐವತ್ತು ವರ್ಷ ಪೂರೈಸಿದ್ದು, ಇಂತಹ ಒಂದು ಸುವರ್ಣ ಸಂಭ್ರಮವನ್ನು ಕಂಠೀರವ ಕ್ರೀಡಾಂಗಣದಲ್ಲಿ ಮಾಡಲಾಗುತ್ತಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.