ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರು- ವಿಜಯಪುರ ಎಕ್ಸ್‌ಪ್ರೆಸ್‌ ರೈಲಿಗೆ ಆಗ್ರಹ: ಸಚಿವ ಅಶ್ವಿನಿ ವೈಷ್ಣವ್, ಸೋಮಣ್ಣಗೆ ಎಂ‌.ಬಿ. ಪಾಟೀಲ್‌ ಪತ್ರ

ಬೆಂಗಳೂರು-ವಿಜಯಪುರ ನಡುವೆ ಬಹುಕಾಲದ ಬೇಡಿಕೆಯಾಗಿರುವ ಎಕ್ಸ್‌ಪ್ರೆಸ್‌ ರೈಲು ಸೇವೆ ಆರಂಭಿಸಬೇಕು ಎಂದು ಕೋರಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ, ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ವಿ. ಸೋಮಣ್ಣ ಅವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು- ವಿಜಯಪುರ ಎಕ್ಸ್‌ಪ್ರೆಸ್‌ ರೈಲಿಗೆ ಎಂ‌.ಬಿ. ಪಾಟೀಲ್‌ ಆಗ್ರಹ

ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ (ಸಂಗ್ರಹ ಚಿತ್ರ) -

Profile
Siddalinga Swamy Apr 1, 2026 7:45 PM

ಬೆಂಗಳೂರು, ಏ.1: ಆಲಮಟ್ಟಿ-ವಂಡಾಳ್ ನಡುವಿನ 9.60 ಕಿ.ಮೀ. ಉದ್ದ ಜೋಡಿಹಳಿ ಕಾಮಗಾರಿ ಮುಗಿದು, ಮಾರ್ಚ್ 25ರಿಂದ ಸಂಚಾರಕ್ಕೆ ಮುಕ್ತವಾಗಿದೆ. ಆದ್ದರಿಂದ ಬೆಂಗಳೂರು-ವಿಜಯಪುರ ನಡುವೆ ಬಹುಕಾಲದ ಬೇಡಿಕೆಯಾಗಿರುವ ಎಕ್ಸ್‌ಪ್ರೆಸ್‌ ರೈಲು ಸೇವೆ ಆರಂಭಿಸಬೇಕು ಎಂದು ಕೋರಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ (MB Patil) ಅವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ವಿ. ಸೋಮಣ್ಣ ಅವರಿಗೆ ಪತ್ರ ಬರೆದಿದ್ದಾರೆ.

ಗದಗ-ಹೊಟಗಿ ಹಳಿ ದ್ವಿಪಥೀಕರಣ ಯೋಜನೆಯ ಭಾಗವಾಗಿ ಆಲಮಟ್ಟಿ-ವಂಡಾಳ್ ನಡುವಿನ‌ ಕಾಮಗಾರಿ ಈಗ ಮುಗಿದಿದೆ. ಇದು ಮುಗಿದರೆ ಬೆಂಗಳೂರು-ವಿಜಯಪುರ ನಡುವೆ ಎಕ್ಸ್‌ಪ್ರೆಸ್‌ ರೈಲು ಆರಂಭಿಸಬಹುದು ಎಂದು ಹಿಂದಿನ ಭೇಟಿಯಲ್ಲಿ ಹೇಳಿದ್ದಿರಿ. ಈಗ ಇದಕ್ಕೆ ಆದ್ಯತೆ ಕೊಡಬೇಕು. ಶೈಕ್ಷಣಿಕ, ವೈದ್ಯಕೀಯ, ಆಡಳಿತಾತ್ಮಕ, ವಾಣಿಜ್ಯ ವಹಿವಾಟು ಇತ್ಯಾದಿಗಳಿಗೆ ನಿತ್ಯವೂ ಬೆಂಗಳೂರಿಗೆ ಬರುವ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸಾವಿರಾರು ಜನರಿಗೆ ಅನುಕೂಲವಾಗಲಿದೆ ಎಂದು ಅವರು ಪತ್ರದಲ್ಲಿ ಗಮನ ಸೆಳೆದಿದ್ದಾರೆ.

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಸಚಿವ ಎಂ.ಬಿ. ಪಾಟೀಲ್‌ ಆಗ್ರಹ

ಇದೇ ರೀತಿಯಲ್ಲಿ ಈಗ ಎರಡೂ ನಗರಗಳ ನಡುವೆ ರೈಲು ಪ್ರಯಾಣಕ್ಕೆ 15 ಗಂಟೆಗಳ ಕಾಲ ಹಿಡಿಯುತ್ತಿದೆ. ಇದು ಅನಾನುಕೂಲಕ್ಕೆ ಕಾರಣವಾಗಿದೆ. ಇದನ್ನು 10 ಗಂಟೆಗಳಿಗೆ ಇಳಿಸಬೇಕಾದ ಜರೂರಿದೆ. ಬೆಂಗಳೂರಿನಿಂದ ಹೊರಡುವ ರೈಲುಗಳಿಗೆ ಹುಬ್ಬಳ್ಳಿಯ ತನಕ ನಿಗದಿತ ನಿಲುಗಡೆ ನೀಡುವುದು ಮತ್ತು ನಂತರ ವಿಜಯಪುರಕ್ಕೆ ಸಾಗುವ ರೈಲುಗಳು ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗಗಳಲ್ಲಿ ಸಂಚರಿಸಲು ವ್ಯವಸ್ಥೆ ಮಾಡಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಪತ್ರದಲ್ಲಿ ಕೋರಿದ್ದಾರೆ.