ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ದ್ವೇಷ ಭಾಷಣ ತಡೆ ಕಾಯ್ದೆಯಡಿ ಪ್ರಿಯಾಂಕ್ ಖರ್ಗೆ ಮೊದಲ ಅಪರಾಧಿ; ಕ್ಷಮೆಗೆ ಗೋವಿಂದ ಕಾರಜೋಳ ಆಗ್ರಹ

Govind Karjol: ಆಡಳಿತ- ವಿಪಕ್ಷದ ನಡುವೆ ಟೀಕೆ -ಟಿಪ್ಪಣಿ ನಡೆಯುವುದು ಪ್ರಜಾಪ್ರಭುತ್ವದ ಸೌಂದರ್ಯ. ಟೀಕೆ ಟಿಪ್ಪಣಿಗಳು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಇರಬೇಕು. ಜನರ ಕಲ್ಯಾಣಕ್ಕಾಗಿ ಇರಬೇಕು. ವೈಯಕ್ತಿಕ ದ್ವೇಷದಿಂದ ಹಿರಿಯರನ್ನು ಅಪಮಾನ ಮಾಡುವ ಶಬ್ದ ಬಳಸುವುದು ಯೋಗ್ಯವಲ್ಲ, ತರವಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ ಮಾತನಾಡಿದರು.

ಬೆಂಗಳೂರು, ಡಿ.20: ನೆನ್ನೆ ವಿಧಾನಪರಿಷತ್ತಿನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರ ಬಗ್ಗೆ ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ಅವಹೇಳಕಾರಿಯಾಗಿ ಮತ್ತು ಅಸಂಸದೀಯ ಪದಗಳನ್ನು ಬಳಸಿ ಮಾತನಾಡಿದ್ದನ್ನು ಖಂಡಿಸುತ್ತೇನೆ. ಈ ಕೂಡಲೇ ಅವರು ಕ್ಷಮೆ ಕೇಳಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ (Govind Karjol) ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ.

ನಿನ್ನೆ ಕರ್ನಾಟಕ ಸರ್ಕಾರವು ದ್ವೇಷ ಭಾಷಣ ನಿಯಂತ್ರಣ ಕಾನೂನನ್ನು ಎರಡೂ ಸದನಗಳಲ್ಲಿ ಮಂಡಿಸಿ ಒಪ್ಪಿಗೆ ಪಡೆದಿದೆ. ಆ ಕಾನೂನಿನಡಿ ಪ್ರಿಯಾಂಕ್ ಖರ್ಗೆ ಮೊದಲನೇ ಅಪರಾಧಿ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಉತ್ತರ ಕರ್ನಾಟಕದ ಬಿಜಾಪುರ, ರಾಯಚೂರು, ಗುಲ್ಬರ್ಗ, ಹೈದರಾಬಾದ್‍ನಲ್ಲಿ ಒಂದು ನಾಣ್ಣುಡಿ ಇದೆ. ಸಣ್ಣ ಬಾಯೊಳಗೆ ದೊಡ್ಡ ಮಾತು (ಚೋಟಿ ಮುಹ್, ಬಡೀ ಬಾತ್) ಎಂಬರ್ಥವನ್ನು ಇದು ಕೊಡುತ್ತದೆ. ಈ ನಾಣ್ಣುಡಿ ಪ್ರಿಯಾಂಕ್ ಸಲುವಾಗಿಯೇ ಇದ್ದಂತಿದೆ ಎಂದು ತಿಳಿಸಿದರು. ಪ್ರಿಯಾಂಕ್ ಅವರೇ ನಿಮ್ಮ ತಂದೆಯವರು ರಾಜ್ಯದಲ್ಲಿ 50 ವರ್ಷ ರಾಜಕಾರಣ ಮಾಡಿದ್ದಾರೆ. ಅವರನ್ನು ನೋಡಿ ನೀವು ಕಲಿಯಬೇಕಿತ್ತು ಎಂದು ಹೇಳಿದರು.

ಆಡಳಿತ- ವಿಪಕ್ಷದ ನಡುವೆ ಟೀಕೆ -ಟಿಪ್ಪಣಿ ನಡೆಯುವುದು ಪ್ರಜಾಪ್ರಭುತ್ವದ ಸೌಂದರ್ಯ. ಟೀಕೆ ಟಿಪ್ಪಣಿಗಳು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಇರಬೇಕು. ಜನರ ಕಲ್ಯಾಣಕ್ಕಾಗಿ ಇರಬೇಕು. ವೈಯಕ್ತಿಕ ದ್ವೇಷದಿಂದ ಹಿರಿಯರನ್ನು ಅಪಮಾನ ಮಾಡುವ ಶಬ್ದ ಬಳಸುವುದು ಯೋಗ್ಯವಲ್ಲ, ತರವಲ್ಲ ಎಂದು ತಿಳಿಸಿದರು.

ನಾಲಿಗೆ ಹರಿಬಿಡುವುದರಲ್ಲಿ ನಂಬರ್ 1

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ನಾಲಿಗೆ ಹರಿಬಿಡುವುದರಲ್ಲಿ ಪ್ರಿಯಾಂಕ್ ಖರ್ಗೆ ಅವರು ಇಡೀ ಕಾಂಗ್ರೆಸ್ಸಿನಲ್ಲಿ ನಂಬರ್ 1 ಇದ್ದಾರೆ ಎಂದು ಆರೋಪಿಸಿದ ಅವರು, ಖರ್ಗೆ ಎಂಬ ಹೆಸರು ಪ್ರಿಯಾಂಕ್ ಪಕ್ಕದಲ್ಲಿ ಇಲ್ಲದೇ ಇರುತ್ತಿದ್ದರೆ ಅವರು ಮಂಡಲ ಪಂಚಾಯತ್ ಸದಸ್ಯರೂ ಆಗುತ್ತಿರಲಿಲ್ಲ ಎಂದು ಟೀಕಿಸಿದರು. ಪ್ರಿಯಾಂಕ್ ಖರ್ಗೆಯವರು ಸದನದಲ್ಲಿ ಉತ್ತರ ಕೊಡಬೇಕಾದ ವೇಳೆ ಪರಾರಿಯಾಗುತ್ತಾರೆ. ಅವರ ಸಾಧನೆ ಶೂನ್ಯವಾದುದೇ ಇದಕ್ಕೆ ಕಾರಣ ಎಂದು ದೂರಿದರು.

ಗ್ಯಾರಂಟಿಗಳಿಗೆ ಇದುವರೆಗೆ ದಲಿತರ 39 ಸಾವಿರ ಕೋಟಿ ರೂ. ಬಳಕೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಮಾಜಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ರಾಜ್ಯ ವಕ್ತಾರ ವೆಂಕಟೇಶ ದೊಡ್ಡೇರಿ, ಎಸ್‍ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ್ ಉಪಸ್ಥಿತರಿದ್ದರು.