ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ಶಾಸಕ ಶ್ರೀನಿವಾಸ ಮಾನೆ ನೇಮಕ
ಸಚಿವ ಸ್ಥಾನ ಸಿಗದೇ ಹೋದ ಶಾಸಕರಿಗೆ ನಿಗಮ- ಮಂಡಳಿಗಳ ಅಧ್ಯಕ್ಷ ಹುದ್ದೆಗಳನ್ನು ನೀಡುವ ಮೂಲಕ ಶಾಸಕರ ಅಸಮಾಧಾನ ತಣಿಸಲು ಸಿಎಂ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಶ್ರೀನಿವಾಸ ಮಾನೆ ಅವರಿಗೆ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಸ್ಥಾನ ಸಿಕ್ಕಿದೆ.
-
ಬೆಂಗಳೂರು: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ ಮಾನೆ (MLA Srinivas Mane) ಅವರನ್ನು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲು ಸಿಎಂ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ.
ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಹಲವು ಶಾಸಕರು, ಮಾಜಿ ಸಚಿವರು ಅಸಮಾಧಾನ ಹೊರ ಹಾಕಿದ್ದರು. ಹೀಗಾಗಿ ಸಚಿವ ಸ್ಥಾನ ವಂಚಿತರರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಅಸಮಾಧಾನ ತಣಿಸಲು ಸಿಎಂ ಮುಂದಾಗಿದ್ದಾರೆ.
ಶ್ರೀನಿವಾಸ ಮಾನೆ ಅವರು ಹಾನಗಲ್ ಕ್ಷೇತ್ರದಿಂದ ಆಯ್ಕೆಯಾದ ಶಾಸಕರು. ಇತ್ತೀಚಿನ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಇದೀಗ ಇವರನ್ನು ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಕರ್ನಾಟಕ ಗೃಹ ಮಂಡಳಿ ರಾಜ್ಯದಲ್ಲಿ ವಸತಿ ಯೋಜನೆಗಳನ್ನು ರೂಪಿಸುವ ಮತ್ತು ಅನುಷ್ಠಾನಗೊಳಿಸುವ ಪ್ರಮುಖ ಸಂಸ್ಥೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣ, ವಸತಿ ಯೋಜನೆಗಳ ಅಭಿವೃದ್ಧಿ, ಭೂಮಿ ಸ್ವಾಧೀನ ಮತ್ತು ವಸತಿ ಸೌಲಭ್ಯಗಳ ವಿತರಣೆ ಮುಂತಾದ ಕೆಲಸಗಳನ್ನು ಈ ಮಂಡಳಿ ನೋಡಿಕೊಳ್ಳುತ್ತದೆ.