ಬೆಂಗಳೂರು: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ ಮಾನೆ (MLA Srinivas Mane) ಅವರನ್ನು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲು ಸಿಎಂ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ.
ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಹಲವು ಶಾಸಕರು, ಮಾಜಿ ಸಚಿವರು ಅಸಮಾಧಾನ ಹೊರ ಹಾಕಿದ್ದರು. ಹೀಗಾಗಿ ಸಚಿವ ಸ್ಥಾನ ವಂಚಿತರರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಅಸಮಾಧಾನ ತಣಿಸಲು ಸಿಎಂ ಮುಂದಾಗಿದ್ದಾರೆ.
ಶ್ರೀನಿವಾಸ ಮಾನೆ ಅವರು ಹಾನಗಲ್ ಕ್ಷೇತ್ರದಿಂದ ಆಯ್ಕೆಯಾದ ಶಾಸಕರು. ಇತ್ತೀಚಿನ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಇದೀಗ ಇವರನ್ನು ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಕರ್ನಾಟಕ ಗೃಹ ಮಂಡಳಿ ರಾಜ್ಯದಲ್ಲಿ ವಸತಿ ಯೋಜನೆಗಳನ್ನು ರೂಪಿಸುವ ಮತ್ತು ಅನುಷ್ಠಾನಗೊಳಿಸುವ ಪ್ರಮುಖ ಸಂಸ್ಥೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣ, ವಸತಿ ಯೋಜನೆಗಳ ಅಭಿವೃದ್ಧಿ, ಭೂಮಿ ಸ್ವಾಧೀನ ಮತ್ತು ವಸತಿ ಸೌಲಭ್ಯಗಳ ವಿತರಣೆ ಮುಂತಾದ ಕೆಲಸಗಳನ್ನು ಈ ಮಂಡಳಿ ನೋಡಿಕೊಳ್ಳುತ್ತದೆ.
ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ.ಎಸ್ ಪಾಟೀಲ್ ಅವಿರೋಧ ಆಯ್ಕೆ
ಕರ್ನಾಟಕ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ.ಎಸ್ ಪಾಟೀಲ್ ಮತ್ತು ವಿಧಾನ ಪರಿಷತ್‌ನ ನೂತನ ಸಭಾಪತಿಯಾಗಿ ಆಯ್ಕೆಯಾಗಿರುವ ಸಲೀಂ ಅಹ್ಮದ್ ಅವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ, ಕರ್ನಾಟಕ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಶ್ರೀ ಜಿ.ಎಸ್ ಪಾಟೀಲ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಜಿ.ಎಸ್ ಪಾಟೀಲ್ ಅವರು ವಿಧಾನಸಭೆಯಲ್ಲಿ ಎಲ್ಲಾ ಸದಸ್ಯರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿ, ಜನರ ಆಶೋತ್ತರಗಳಿಗೆ ಸ್ಪಂದಿಸುವ ಚರ್ಚೆಗಳಿಗೆ ವೇದಿಕೆ ಕಲ್ಪಿಸುವ ವಿಶ್ವಾಸವಿದೆ.
2028ರ ಚುನಾವಣೆ ಹೇಗೆ ಎದುರಿಸಬೇಕು ಎನ್ನೋದು ನನಗೆ ಗೊತ್ತಿದೆ; ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು ಎಂದ ಸಿಎಂ
ಕರ್ನಾಟಕ ವಿಧಾನ ಪರಿಷತ್‌ನ ನೂತನ ಸಭಾಪತಿಯಾಗಿ ಆಯ್ಕೆಯಾಗಿರುವ ಶ್ರೀ ಸಲೀಂ ಅಹ್ಮದ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದು, ಆರೋಗ್ಯಕರ ಚರ್ಚೆ ಹಾಗೂ ವಿಚಾರ ವಿನಿಮಯಕ್ಕೆ ಸದನವನ್ನು ಪರಿಣಾಮಕಾರಿಯಾಗಿ ಮುನ್ನಡೆಸಿರಿ ಎಂದು ಶುಭಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.