ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka CM Row: ಡಿ.ಕೆ. ಶಿವಕುಮಾರ್‌ ಪರ ನಂಜಾವಧೂತ ಸ್ವಾಮೀಜಿ ಬ್ಯಾಟಿಂಗ್‌; ಸಿಎಂ ಪಟ್ಟ ನೀಡಲು ಆಗ್ರಹ

Nanjavadhoota Swamiji: ರಾಜ್ಯದಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಪೈಪೋಟಿ ತೀವ್ರವಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ನಡುವಿನ ಸಿಎಂ ಕುರ್ಚಿ ಕಾದಾಟ ಜೋರಾಗಿಯೇ ನಡೆಯುತ್ತಿದೆ. ಈ ಮಧ್ಯೆ ಶ್ರೀ ಆದಿಚುಂಚನಗಿರಿ ಮಠದ ಶಾಖಾ ಮಠಾಧೀಶರಾದ ನಂಜಾವಧೂತ ಸ್ವಾಮೀಜಿ ಡಿ.ಕೆ. ಶಿವಕುಮಾರ್‌ ಪರ ಬ್ಯಾಟ್‌ ಬೀಸಿದ್ದಾರೆ. ಡಿಕೆಶಿ ಅವರಿಗೆ ಸಿಎಂ ಪಟ್ಟ ಸಿಗಬೇಕು ಎಂದಿದ್ದಾರೆ.

ನಂಜಾವಧೂತ ಸ್ವಾಮೀಜಿ ಮತ್ತು ಡಿ.ಕೆ. ಶಿವಕುಮಾರ್‌ (ಸಂಗ್ರಹ ಚಿತ್ರ).

ಬೆಂಗಳೂರು, ನ. 27: ರಾಜ್ಯದಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಪೈಪೋಟಿ ತೀವ್ರವಾಗಿದೆ. ಸಿದ್ದರಾಮಯ್ಯ (Siddaramaiah) ಮತ್ತು ಡಿ.ಕೆ. ಶಿವಕುಮಾರ್‌ (DK Shivakumar) ನಡುವಿನ ಸಿಎಂ ಕುರ್ಚಿ ಕಾದಾಟ ಜೋರಾಗಿಯೇ ನಡೆಯುತ್ತಿದೆ. ಕೆಲವು ನಾಯಕರು ಸಿದ್ದರಾಮಯ್ಯ ಇನ್ನು ಕೆಲವು ನಾಯಕರು ಡಿ.ಕೆ. ಶಿವಕುಮಾರ್ಗೆ ಬೆಂಬಲ ಸೂಚಿಸುತ್ತಿದ್ದಯ, ರಾಜಕೀಯ ಚಟುವಟಿಕೆ ಬಿರುಸಿನಿಂದ ಕೂಡಿದೆ. ಇದೀಗ ಈ ರಾಜಕೀಯದಾಟಕ್ಕೆ ಸ್ವಾಮೀಜಿ ಎಂಟ್ರಿ ಕೊಟ್ಟಿದ್ದಾರೆ. ಶ್ರೀ ಆದಿಚುಂಚನಗಿರಿ ಮಠದ ಶಾಖಾ ಮಠಾಧೀಶರಾದ ನಂಜಾವಧೂತ ಸ್ವಾಮೀಜಿ (Nanjavadhoota Swamiji) ಇದೀಗ ಡಿ.ಕೆ. ಶಿವಕುಮಾರ್‌ ಪರ ಬ್ಯಾಟ್‌ ಬೀಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಡಿಕೆಶಿಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಡಬೇಕು ಎಂದಿದ್ದಾರೆ. ಆ ಮೂಲಕ ಡಿಕೆಶಿಗೆ ಆನೆ ಬಲ ಬಂದತಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪಕ್ಷದ ಹಿರಿಯರು ಕೊಟ್ಟ ಮಾತಿನಂತೆ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಒಳ್ಳೆಯದಲ್ಲ. ಈ ಗೊಂದಲಗಳು ಆಡಳಿತದ ಮೇಲೆ ಹಾಗೂ ಸಾಮಾನ್ಯರ ಮೇಲೆ ಪರಿಣಾಮ ಬೀರಬಾರದು ಎಂದು ಸ್ವಾಮೀಜಿ ಹೇಳಿದ್ದಾರೆ.

ನಂಜಾವಧೂತ ಸ್ವಾಮೀಜಿ ಹೇಳಿದ್ದೇನು?

ʼʼಡಿಕೆಶಿ ಅವರಿಗೆ ಮುಖ್ಯಮಂತ್ರಿಯಾಗಲು ಅವಕಾಶ ನೀಡಬೇಕು ಎಂಬುದು ಒಕ್ಕಲಿಗ ಸಮುದಾಯದ ಪ್ರಬಲ ಆಶಯ. ಮಾತು ಕೊಟ್ಟಿದ್ದೇ ಆದರೆ, ಮಾತಿನಂತೆ ನಡೆದುಕೊಳ್ಳಬೇಕು. ಕೊಟ್ಟ ಮಾತಿಗೆ ತಪ್ಪಿ ನಡೆದರೆ ಮೆಚ್ಚನಾ ಪರಮಾತ್ಮನು ಎಂಬ ವಾಕ್ಯವನ್ನು ನಾವು ಪರಿಪಾಲಿಸಿಕೊಂಡು ಬಂದವರು. ಆ ಪಕ್ಷದ ಹಿರಿಯರು ಮಾತು ಕೊಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕುʼʼ ಎಂದು ಸೂಚಿಸಿದ್ದಾರೆ.

ಡಿಕೆ ಶಿವಕುಮಾರ್‌ ಮನೆಗೆ ನಾಗಾ ಸಾಧುಗಳ ಭೇಟಿ

ʼʼಸಿದ್ದರಾಮಯ್ಯ ಉತ್ತಮ ಆಡಳಿತ ನಡೆಸಿಕೊಂಡು ಹೋಗುತ್ತಿದ್ದಾರೆ. ಅವರ ಆಡಳಿತದ ಬಗ್ಗೆ ಯಾವುದೇ ದೂರಿಲ್ಲ. 2ನೇ ಬಾರಿ ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿ ಒಂದು ಅವಧಿ ಪೂರೈಸಿದ್ದಾರೆ. ಹೀಗಾಗಿ ಎರಡನೇ ಅವಧಿಯನ್ನು ಡಿಕೆಶಿ ಅವರಿಗೆ ನೀಡುತ್ತಾರೆ ಎಂದುಕೊಂಡಿದ್ದೇವು. ಹೀಗಂತ ಹೈಕಮಾಂಡ್ ಮಾತು ಕೊಟ್ಟಿದ್ದರೆ ಅದನ್ನು ಮರೆಯಬಾರದು. ಹೀಗಾಗಿ ಉಳಿದ ಎರಡೂವರೆ ವರ್ಷ ಡಿ.ಕೆ. ಶಿವಕುಮಾರ್ ಅವರಿಗೆ ನೀಡಿ'' ಎಂದು ಪಕ್ಷದ ಹಿರಿಯರಿಗೆ ಸೂಚಿಸಿದ್ದಾರೆ.

ʼʼದೇವೇಗೌಡರು ಸಿಎಂ ಆಗಬೇಕಾದರೆ ಸಾಕಷ್ಟು ಸವಾಲುಗಳು ಎದುರಾದವು. ಅದಾದ ಬಳಿಕ ಸದಾನಂದ ಗೌಡ, ಎಸ್‌.ಎಂ. ಕೃಷ್ಣ ಕೂಡ ನೋವು ಅನುಭವಿಸಿದರು. ಕುಮಾರಸ್ವಾಮಿ ಮುಖ್ಯಮಂತ್ರಿ ಪಟ್ಟಕೇರಿದ ಬಳಿಕ ರೈತರ ಸಮಸ್ಯೆಗಳಿಗೆ ಸ್ಪಂದಿಸಿದರು. ಆದರೆ ಅವರೂ ಕೆಳಗಿಳಿಯಬೇಕಾಯಿತು. ಡಿ.ಕೆ. ಶಿವಕುಮಾರ್ ಕೂಡ ಒಕ್ಕಲಿಗ ಸಮುದಾಯದ ಅಗ್ರಗಣ್ಯ ನಾಯಕರು. ಹದಿನಾರು, ಹದಿನೇಳು ಜಿಲ್ಲೆಯ ಈ ಸಮುದಾಯದವರು ಡಿಕೆಶಿ ಅವರಿಗೆ ಸಿಎಂ ಪಟ್ಟ ಕೊಡಿ ಎಂದು ಆಗ್ರಹಿಸುತ್ತಿದ್ದಾರೆʼʼ ಎಂದು ಹೇಳಿದ್ದಾರೆ.

image

ಪಕ್ಷ ಸೂಕ್ತ ಸಮಯದಲ್ಲಿ ಸರಿಯಾದ ನಿರ್ಣಯ ಕೈಗೊಳ್ಳಲಿದೆ. ಅಧಿಕಾರದ ಬಗ್ಗೆ ಏನೇ ಚರ್ಚೆಯಾಗಿದ್ದರೂ ಅದು 4 ಗೋಡೆಗಳ ಮಧ್ಯೆ ಆಗಿದೆ. ಅದನ್ನು ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವಿಲ್ಲ. ಸಿಎಂ ಹುದ್ದೆ, ಅಧಿಕಾರ ಹಸ್ತಾಂತರದ ಬಗ್ಗೆ ಹೈಕಮಾಂಡ್‌ ತೀರ್ಮಾನಿಸುತ್ತದೆ.

ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ

Ramesh Ballamoole

View all posts by this author